ಉಡುಪಿ | ಅಕ್ರಮವಾಗಿ ಹೂಳಲಾದ ಎಂಡೋಸಲ್ಫಾನ್ ಪ್ರಕರಣ; ನೋಟಿಸ್ ಜಾರಿ

Date:

Advertisements

ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್‌ನವರ ಗೋದಾಮುಗಳಲ್ಲಿ ಉಳಿದಿದ್ದ ವಿಷಕಾರಕ ಕೀಟ ನಾಶಕವನ್ನು ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಕರ್ನಾಟಕದ ಗಡಿಭಾಗವಾದ ಕೇರಳದ ಮಿಂಚಿನಪದವು ಗುಡ್ಡಗಾಡು ಪ್ರದೇಶದಲ್ಲಿ ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠವು ಇದೀಗ ಭಾರತ ಒಕ್ಕೂಟ, ಕರ್ನಾಟಕ ಹಾಗೂ ಕೇರಳ ಸರ್ಕಾರ, ಕರ್ನಾಟಕ ಹಾಗೂ ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ್ ಶಾನುಭಾಗ್ ಅವರು ತಿಳಿಸಿದ್ದಾರೆ.

ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ದೂರು ಅರ್ಜಿಯನ್ನು ಸ್ವೀಕರಿಸಿದ ನ್ಯಾಯ ಮಂಡಳಿಯು ಅಕ್ರಮವಾಗಿ ಹೂಳಲಾಗಿದ್ದ ಎಂಡೋಸಲ್ಫಾನ್ ತೆರವಿಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿರುವುದಾಗಿ ಸುಪ್ರೀಂ ಕೋರ್ಟ್ ವಕೀಲ ಗೌರವ್ ಕುಮಾರ್ ಬನ್ಸಾಲ್ ಮಾಹಿತಿ ನೀಡಿದ್ದಾರೆ” ಎಂದು ಹೇಳಿದರು.

Advertisements

ಪ್ರಕರಣದ ಹಿನ್ನಲೆ:

1980 ರಿಂದ ಇಪ್ಪತ್ತು ವರ್ಷಗಳ ಕಾಲ ಕರ್ನಾಟಕ ಹಾಗೂ ಕೇರಳದ ಸರ್ಕಾರಿ ಪ್ರಾಯೋಜಿತ ಪ್ಲಾಂಟೇಶನ್ ಕಾರ್ಪೋರೇಷನ್ ಗೇರು ತೋಟಗಳಲ್ಲಿ ಹೆಲಿಕಾ‌ಫ್ಟರ್‌ಗಳ ಮೂಲಕ ಸಿಂಪಡಿಸಲಾಗಿದ್ದ ಎಂಡೋಸಲ್ಫಾನ್‌ ಕೀಟನಾಶಕ ಸಿಂಪಡಿಸಿದ್ದು, ಇದರಿಂದ ಕರ್ನಾಟಕದ (ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ) 8,600 ಹಾಗೂ ಕೇರಳದ 3,400 ಮಂದಿ ಮಕ್ಕಳು ಹುಟ್ಟುವಾಗಲೇ ಅಂಗವಿಕಲರಾಗಿದ್ದರು. ಅಲ್ಲದೇ ಎರಡೂ ರಾಜ್ಯಗಳ ಸಾವಿರಾರು ಮಂದಿ ಇದರ ಘೋರ ಪರಿಣಾಮಗಳನ್ನು ವಿವಿಧ ರೀತಿಯಲ್ಲಿ ಈಗಲೂ ಅನುಭವಿಸುತಿದ್ದಾರೆ.

ನ್ಯಾಯಾಲಯವು ನೀಡಿದ ತೀರ್ಪಿನಲ್ಲಿ ಇಡೀ ದೇಶದಲ್ಲಿ ಎಂಡೋಸಲ್ಫಾನ್‌ನ ಉಪಯೋಗಗಳು ಹಾಗೂ ಮಾರಾಟವನ್ನು ನಿಷೇಧಿಸಿತ್ತು. ಅಂತೆಯೇ, ಗೇರು ತೋಟಗಳ ಗೋದಾಮುಗಳಲ್ಲಿ ಉಳಿದಿರುವ ಎಂಡೋಸಲ್ಫಾನಿನ ದಾಸ್ತಾನುಗಳನ್ನು ವೈಜ್ಞಾನಿಕವಾಗಿ ನಾಶಪಡಿಸಲು ಆದೇಶ ನೀಡಿತ್ತು.

ಸ್ಥಗಿತಗೊಂಡ ಕಾರ್ಯಾಚರಣೆ:

ಕೆಲದಿನಗಳಲ್ಲಿ ಕಾಸರಗೋಡಿನ ಪ್ಲಾಂಟೇಶನ್ ಕಾರ್ಪೋರೇಷನ್‌ನ ಗೋದಾಮುಗಳಲ್ಲಿ ಉಳಿದಿದ್ದ ಎಂಡೋಸಲ್ಫಾನ್‌ ನಾಶಪಡಿಸಲು ರಾಸಾಯನಿಕ ತಜ್ಞರು ಬಂದಾಗ ಸ್ಥಳೀಯರಿಂದ ಬಂದ ವಿರೋಧದಿಂದಾಗಿ ನಾಶಪಡಿಸುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರದ ದಿನಗಳಲ್ಲಿ ಈ ಕೀಟನಾಶಕದ ದಾಸ್ತಾನನ್ನು ಏನು ಮಾಡಲಾಯಿತೆಂಬ ವಿಚಾರ ಸಾರ್ವಜನಿಕರಿಗೆ ತಿಳಿಯಲೇ ಇಲ್ಲ. ಕ್ರಮೇಣ ಜನರೆಲ್ಲಾ ಈ ವಿಚಾರವನ್ನು ಮರೆತರು.

ಅಚ್ಚುತ ಮಣಿಯಾಣಿ ನೀಡಿದ ಸುಳಿವು

2013ರಲ್ಲಿ ಗೇರು ಕಾರ್ಪೋರೇಷನಿನಲ್ಲಿ ಸಿಬ್ಬಂದಿಯಾಗಿದ್ದ ಅಚ್ಚುತ ಮಣಿಯಾಣಿಯವರು ನಿವೃತ್ತರಾದಾಗ ಸುಮಾರು 600 ಲೀಟರ್ ಎಂಡೋಸಲ್ಫಾನ್‌ನನ್ನು ಕೇರಳ- ಕರ್ನಾಟಕದ ಗಡಿಭಾಗದದಲ್ಲಿರುವ ಮಿಂಚಿನಪದವು ಎಂಬಲ್ಲಿರುವ ಗೇರು ತೋಟದಲ್ಲಿ ಹೂಳಿರುತ್ತಾರೆ ಎಂದು ಮಾಹಿತಿ ನೀಡಿದ್ದರು. ಮಾತ್ರವಲ್ಲ, ಈ ಕಾರ್ಯಾಚರಣೆಯಲ್ಲಿ ತಾನೂ ಭಾಗವಹಿಸಿದ್ದೆ ಎಂದು ಅವರು ಹೇಳಿದ ವಿಚಾರವನ್ನು ತಿಳಿದ ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನವು ಈ ಕುರಿತು ನಡೆಸಿದ ಸಮಗ್ರ ಸಮೀಕ್ಷೆಯ ನಂತರ ಈ ಕುರಿತು ಕ್ರಮ ತೆಗೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಮಸ್ಯೆ ಪರಿಹಾರವಾಗಲಿಲ್ಲ. ಇದೀಗ ಎಂಡೋಸಲ್ಫಾನ್ ಸೋರಿಕೆಯಾಗಿ ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ಗ್ರಾಮಗಳ ಅಂತರ್ಜಲವನ್ನು ಕಲುಷಿತಗೊಳಿಸುವ ಸಾಧ್ಯತೆಯಿದೆ ಎಂಬುದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಸಲ್ಲಿಸಿದ ದೂರು ಅರ್ಜಿಯಲ್ಲಿ ಸೂಚಿಸಿರುತ್ತಾರೆ.

ಪ್ರಕರಣದ ಗಂಭೀರತೆ ಅರಿತ ಕಾನೂನು ಸೇವಾ ಪ್ರಾಧಿಕಾರ.

ಡಾ.ಶಾನುಭಾಗ್ ಅವರು ತಮ್ಮ ಅರ್ಜಿಯೊಂದಿಗೆ 2022ರ ನವೆಂಬರ್‌ 1ರಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರರವರ ಅಧ್ಯಕ್ಷತೆಯಲ್ಲಿ ಈ ಕುರಿತು ನಡೆಸಲಾದ ಸಭೆಯ ನಡಾವಳಿಯನ್ನೂ ಅಂಗೀಕರಿಸಿದ್ದಾರೆ. ಇದರಲ್ಲಿ ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್‌ನವರು ಪಾಳು ಬಾವಿಯಲ್ಲಿ ಅಕ್ರಮವಾಗಿ ಹೂಳಲಾಗಿದೆ ಎನ್ನಲಾದ ಎಂಡೋಸಲ್ಫಾನ್‌ ತೆಗೆದುಹಾಕುವ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಈ ಸಭೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರರವರು “ನೆಟ್ಟಣಿಗೆ ಗ್ರಾಮದ ಬಳಿಯ ಪಾಳು ಬಾವಿಯಲ್ಲಿ ಎಂಡೋಸಲ್ಫಾನ್‌ ಕ್ಯಾನ್‌ಗಳನ್ನು ಹಾಕಿರುವುದರ ಕುರಿತು ತಾನು ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿದ್ದ ಕಾಲದಲ್ಲಿ ಜಿಲ್ಲಾಡಳಿತಕ್ಕೆ ವರದಿಯೊಂದನ್ನು ಸಲ್ಲಿಸಿದ್ದೆ. ಇದು ನಿಜವಾದಲ್ಲಿ ಸ್ಫೋಟಗೊಳ್ಳುವ ಬಾಂಬ್‌ನಂತೆ” ಎಂದು ಹೇಳಿರುವುದನ್ನು ಉಲ್ಲೇಖಿಸಲಾಗಿದೆ.

ಕರ್ನಾಟಕ ಪ್ರಾಧಿಕಾರದಿಂದ ಕೇರಳ ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ

“ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು 2022ರ ಜನವರಿ 21ರ ದಿನಾಂಕದಂದು ಕೇರಳ ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರದಲ್ಲಿ ಕೇರಳದ ಕಾಸರಗೋಡಿನ ನೆಟ್ಟಣಿಗೆ ಗ್ರಾಮದಲ್ಲಿರುವ ಪಾಳು ಬಾವಿಗೆ ಎಂಡೋಸಲ್ಫಾನ್ ಕ್ಯಾನ್‌ಗಳನ್ನು ಹಾಕಿರುವ ಬಗೆಗಿನ ಸಮಸ್ಯೆಯನ್ನು ಪರಿಹರಿಸಲು ಕ್ರಮ ಅಗತ್ಯವಿದೆ’ ಎಂಬುದಾಗಿ ಸೂಚಿಸಲಾಗಿದ್ದರೂ ಈ ಬಗ್ಗೆ ಕೇರಳ ಕಾನೂನು ಪ್ರಾಧಿಕಾರ ಹಾಗೂ ಸರ್ಕಾರದಿಂದ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲವಾದುದರಿಂದ ಈ ದೂರು ಅರ್ಜಿಯನ್ನು ಸಲ್ಲಿಸಲಾಗಿದೆ” ಎಂದು ಡಾ ಶಾನುಭಾಗ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಹೊಸ ಎಪಿಎಂಸಿ ನಿರ್ಮಾಣ; ಹಳೆ ಎಪಿಎಂಸಿ ಕುರಿತು ನಿರ್ಲಕ್ಷ್ಯ

“ಸಮಸ್ಯೆಯ ಗಂಭೀರತೆ ಮತ್ತು ಸರ್ಕಾರದ ಕೆಂಪು ಪಟ್ಟಿಯ ಧೋರಣೆ ನಿಷ್ಕ್ರಿಯತೆಯನ್ನು ಗಮನಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠವು ಕೇಂದ್ರ ಪರಿಸರ ಸಚಿವಾಲಯ ಮತ್ತು ಇತರರಿಗೆ ನೀಡಿದ ನೊಟೀಸಿನಲ್ಲಿ ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ಕುರಿತು ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X