ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

Date:

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸುವುದು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ದುರ್ಬಲ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಸಮಗ್ರ ನೀತಿ ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಉಡುಪಿ ಕ್ರೈಸ್ತ ಧರ್ಮಪ್ರಾಂತದ ಕಥೊಲಿಕ್ ಸಭಾ ಉಡುಪಿ ಪ್ರದೇಶದ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷಪೂರಿತ ಭಾಷಣಗಳು, ಕೋಮುವಾದಿ ಪ್ರಚೋದನೆ ಹಾಗೂ ಹಿಂಸಾಚಾರದ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ದ್ವೇಷಪೂರಿತ ಭಾಷಣ ಮತ್ತು ಅಪರಾಧಗಳನ್ನು ತಡೆಯುವ ಕಾನೂನುಗಳನ್ನು ಬಲಪಡಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಆಗ್ರಹ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 ಧಾರ್ಮಿಕ ಅಲ್ಪಸಂಖ್ಯಾತರ ಅಸ್ತಿತ್ವ, ಧಾರ್ಮಿಕ ಗುರುತು ಹಾಗೂ ನಂಬಿಕೆಯ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತಿದೆ. ಸಂವಿಧಾನದ 25ನೇ ವಿಧಿಯಡಿ ಪ್ರತಿಯೊಬ್ಬರಿಗೂ ಧರ್ಮವನ್ನು ನಂಬುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕು ನೀಡಲಾಗಿದೆ. ಆದರೆ ಈ ಕಾಯ್ದೆಯಲ್ಲಿನ ವ್ಯಾಪಕ ನಿರ್ಬಂಧಗಳು ಧಾರ್ಮಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಆತಂಕ ಮೂಡಿಸಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಧಾರ್ಮಿಕ ಅಲ್ಪಸಂಖ್ಯಾತರು ತಮ್ಮ ನಂಬಿಕೆ ಮತ್ತು ಧಾರ್ಮಿಕ ಆಚರಣೆಗಳನ್ನು ಅಪರಾಧದ ದೃಷ್ಟಿಯಿಂದ ನೋಡಲಾಗುವ ಭೀತಿಯಲ್ಲೇ ಮುಂದುವರಿಸುವ ಪರಿಸ್ಥಿತಿ ನಿರ್ಮಾಣವಾಗಬಾರದು. ಧಾರ್ಮಿಕ ಸ್ವಾತಂತ್ರ್ಯವನ್ನು ಕಾಪಾಡುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೂಲ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಾಯ್ದೆಯನ್ನು ರದ್ದುಗೊಳಿಸುವ ತನ್ನ ಬದ್ಧತೆಯನ್ನು ಈಡೇರಿಸಬೇಕು. ಆ ಮೂಲಕ ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ ಮತ್ತು ವ್ಯಕ್ತಿಗತ ಘನತೆಯ ಸಾಂವಿಧಾನಿಕ ಆಶ್ವಾಸನೆಗಳ ಮೇಲಿನ ಜನರ ವಿಶ್ವಾಸವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಲಾಗಿದೆ.

WhatsApp Image 2026 11 12 at 10.01.22 PM

ದ್ವೇಷ ಭಾಷಣಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಧಾರ್ಮಿಕ ಸಮುದಾಯಗಳು ನಿರಂತರವಾಗಿ ದ್ವೇಷ, ಕಿರುಕುಳ ಮತ್ತು ಹಿಂಸಾಚಾರದ ಬೆದರಿಕೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಾಗೂ ಘನತೆಯಿಂದ ಬದುಕುವ ಹಕ್ಕನ್ನು ಸಂಪೂರ್ಣವಾಗಿ ರಕ್ಷಿಸಲು ಸಾಧ್ಯವಿಲ್ಲ. ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಇತರ ದುರ್ಬಲ ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದ್ವೇಷಪೂರಿತ ಭಾಷಣಗಳು ಹಾಗೂ ಕೋಮು ಪ್ರಚೋದಕ ಚಟುವಟಿಕೆಗಳು ಸಮಾಜದ ಶಾಂತಿಯುತ ಸಹಬಾಳ್ವೆಗೆ ಧಕ್ಕೆ ಉಂಟುಮಾಡುತ್ತಿವೆ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಇಂತಹ ಕೃತ್ಯಗಳಿಂದ ಸಮಾಜದಲ್ಲಿ ಭಯ ಮತ್ತು ಅಭದ್ರತೆಯ ವಾತಾವರಣ ನಿರ್ಮಾಣವಾಗುತ್ತಿದ್ದು, ಅವುಗಳನ್ನು ತಡೆಯಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅಗತ್ಯವಾಗಿದೆ. ದ್ವೇಷಪೂರಿತ ಭಾಷಣ ಹಾಗೂ ಅಪರಾಧ ಪ್ರಕರಣಗಳಲ್ಲಿ ತ್ವರಿತ ತನಿಖೆ, ನ್ಯಾಯಾಂಗ ವಿಚಾರಣೆ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ಜಾರಿಯಲ್ಲಿನ ವಿಳಂಬ ಮತ್ತು ಹೊಣೆಗಾರಿಕೆಯ ಕೊರತೆಯಿಂದ ಇಂತಹ ಕೃತ್ಯಗಳು ಮುಂದುವರಿಯಲು ಅವಕಾಶವಾಗಬಾರದು ಎಂದು ಮನವಿ ಮಾಡಲಾಗಿದೆ.

ಅಲ್ಲದೆ, ದ್ವೇಷ ಭಾಷಣ ಮತ್ತು ದ್ವೇಷಪೂರಿತ ಅಪರಾಧಗಳನ್ನು ತಡೆಯುವ ಕಾನೂನು ಚೌಕಟ್ಟನ್ನು ಸರ್ಕಾರ ಪರಿಶೀಲಿಸಿ ಅಗತ್ಯ ತಿದ್ದುಪಡಿಗಳ ಮೂಲಕ ಮತ್ತಷ್ಟು ಬಲಪಡಿಸಬೇಕು. ಈ ಕ್ರಮಗಳು ಸಂವಿಧಾನ ನೀಡಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಆಶಯಗಳಿಗೆ ಅನುಗುಣವಾಗಿರಬೇಕು ಎಂದು ಒತ್ತಾಯಿಸಲಾಗಿದೆ.

ಧಾರ್ಮಿಕ ಅಲ್ಪಸಂಖ್ಯಾತರು, ನಾಗರಿಕ ಸಮಾಜದ ಸಂಘಟನೆಗಳು ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿ, ಧಾರ್ಮಿಕ ಸ್ವಾತಂತ್ರ್ಯ, ಸಮಾನತೆ, ಮಾನವ ಘನತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕಥೊಲಿಕ್ ಸಭಾ ಮನವಿ ಮೂಲಕ ಆಗ್ರಹಿಸಿದೆ.

ಈ ದಿನ.ಕಾಮ್ ಜೊತೆ ಮಾತನಾಡಿದ ಕಥೊಲಿಕ್ ಸಭಾ ಉಡುಪಿ ಪ್ರದೇಶದ ಅಧ್ಯಕ್ಷ ಮೆಲ್ವಿನ್ ಆರಾನ್ಹಾ, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಕಥೊಲಿಕ್ ಸಭಾ ವತಿಯಿಂದ ಇಂದು ಮನವಿ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಈ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಈ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿತ್ತು. ಇದೀಗ ತನ್ನ ಭರವಸೆಯಂತೆ ಸರ್ಕಾರ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಈ ದಿನ.ಕಾಮ್‌ ಜೊತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಇದ್ರೀಸ್ ಹೂಡೆ, 2022ರಲ್ಲಿ ಅಂದಿನ ಬಿಜೆಪಿ ಸರ್ಕಾರವು ಧಾರ್ಮಿಕ ಸಂರಕ್ಷಣಾ ಕಾಯ್ದೆಯ ಹೆಸರಿನಲ್ಲಿ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಹಾಗೂ ಜನರ ವೈಯಕ್ತಿಕ ಹಕ್ಕುಗಳನ್ನು ನಿರ್ಬಂಧಿಸುವ ಕಾನೂನೊಂದನ್ನು ಜಾರಿಗೆ ತಂದಿತ್ತು.

ಆ ಕಾನೂನಿನ ವಿರುದ್ಧ ಅಂದಿನಿಂದಲೇ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಸಾರ್ವಜನಿಕರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವೂ ತಾನು ಅಧಿಕಾರಕ್ಕೆ ಬಂದರೆ ಈ ಕಾನೂನನ್ನು ಹಿಂಪಡೆಯುವುದಾಗಿ ಭರವಸೆ ನೀಡಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಿಗೂ ಹೆಚ್ಚು ಸಮಯ ಕಳೆದರೂ ಈವರೆಗೆ ಕಾನೂನನ್ನು ಹಿಂಪಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆದ್ದರಿಂದ ಇಂದು ನಾವೆಲ್ಲರೂ ಒಟ್ಟಾಗಿ ಸೇರಿ ಈ ಕಾನೂನನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಜನರ ವೈಯಕ್ತಿಕ ಹಕ್ಕುಗಳು, ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ಸರ್ಕಾರ ರಕ್ಷಿಸಬೇಕು ಎಂದು ಆಗ್ರಹಿಸಿದರು.

ಈ ದಿನ.ಕಾಮ್ ಜೊತೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಚಾಲಕ ಪ್ರೊ. ಪಣಿರಾಜ್, 2020-22ರ ಧಾರ್ಮಿಕ ಹಕ್ಕು ರಕ್ಷಣಾ ಕಾಯ್ದೆ ಎಂದು ಕರೆಯಲಾಗುವ ಈ ಕಾನೂನಿನ ಹೆಸರೇ ವಿಚಿತ್ರವಾಗಿದೆ. ಎಲ್ಲರ ಧಾರ್ಮಿಕ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ವಾದಿಸಿತ್ತು. ಆದರೆ, ಕಾಯ್ದೆಯ ವಿಧಿಗಳನ್ನು ಪರಿಶೀಲಿಸಿದಾಗ ಅದು ಯಾರ ವಿರುದ್ಧ ಮತ್ತು ಯಾವ ಉದ್ದೇಶಕ್ಕಾಗಿ ರೂಪಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಹಿಂದುತ್ವ ರಾಜಕಾರಣದ ದೀರ್ಘಕಾಲೀನ ಕಾರ್ಯಸೂಚಿಯೂ ಈ ಕಾಯ್ದೆಯಲ್ಲಿದೆ ಎಂದು ಆರೋಪಿಸಿದರು.

ಮುಖ್ಯವಾಗಿ, ಈ ಕಾಯ್ದೆಯು ಅಲ್ಪಸಂಖ್ಯಾತರ ಧಾರ್ಮಿಕ ಆಚರಣೆ, ಮತಪ್ರಚಾರ ಹಾಗೂ ಧಾರ್ಮಿಕ ನಂಬಿಕೆಯನ್ನು ಅನುಸರಿಸುವ ಹಕ್ಕುಗಳಿಗೆ ಧಕ್ಕೆ ಉಂಟುಮಾಡುತ್ತದೆ. ಭಾರತದ ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ಯಾವುದೇ ಧರ್ಮವನ್ನು ನಂಬುವ, ನಂಬದಿರುವ, ಧಾರ್ಮಿಕ ನಂಬಿಕೆಗಳ ಪರವಾಗಿ ಪ್ರಚಾರ ಮಾಡುವ ಹಾಗೂ ಅವುಗಳಲ್ಲಿರುವ ಲೋಪದೋಷಗಳ ವಿರುದ್ಧ ಧ್ವನಿ ಎತ್ತುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 14ರಿಂದ 25ನೇ ವಿಧಿಗಳಲ್ಲಿ ಈ ಹಕ್ಕುಗಳಿಗೆ ರಕ್ಷಣೆ ಒದಗಿಸಲಾಗಿದೆ. ವಿಶೇಷವಾಗಿ, 25ನೇ ವಿಧಿಯು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುತ್ತದೆ ಎಂದರು.

ಅಲ್ಪಸಂಖ್ಯಾತರು ತಮ್ಮ ಧರ್ಮದ ಉತ್ತಮ ಅಂಶಗಳನ್ನು ಇತರರಿಗೆ ತಿಳಿಸುವುದು, ಧಾರ್ಮಿಕ ವಿಚಾರಗಳ ಕುರಿತು ಅರಿವು ಮೂಡಿಸುವುದು ಹಾಗೂ ತಮ್ಮ ನಂಬಿಕೆಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದು ಅವರ ಸಾಂವಿಧಾನಿಕ ಹಕ್ಕಾಗಿದೆ. ಪ್ರತಿಯೊಂದು ಧರ್ಮದಲ್ಲಿಯೂ ಧಾರ್ಮಿಕ ವಿಚಾರಗಳನ್ನು ತಿಳಿದುಕೊಳ್ಳುವ ಮತ್ತು ಅವುಗಳಿಂದ ಪ್ರಭಾವಿತರಾಗಿ ತಮ್ಮ ನಂಬಿಕೆಯನ್ನು ಬದಲಾಯಿಸಿಕೊಳ್ಳುವ ಅವಕಾಶವಿದೆ. ಒಬ್ಬ ವ್ಯಕ್ತಿ ತನ್ನ ಇಚ್ಛೆಯಂತೆ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವುದು ಅಥವಾ ಧರ್ಮವನ್ನು ತ್ಯಜಿಸುವುದು ಕೂಡ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಆದರೆ, ಇಂತಹ ಹಕ್ಕುಗಳನ್ನೇ ಅಪರಾಧೀಕರಣ ಮಾಡುವ ಪ್ರಯತ್ನ ಈ ಕಾಯ್ದೆಯ ಮೂಲಕ ನಡೆದಿದೆ ಎಂದು ಅವರು ಟೀಕಿಸಿದರು.

ಧಾರ್ಮಿಕ ನಂಬಿಕೆಗಳನ್ನು ಬದಲಾಯಿಸಿಕೊಳ್ಳುವುದನ್ನೇ ಗಂಭೀರ ಅಪರಾಧವೆಂಬಂತೆ ಬಿಂಬಿಸುವ ದೊಡ್ಡ ಮಟ್ಟದ ಪ್ರಚಾರ ನಡೆದಿದೆ. ಈ ಹಿಂದೆ ಮತಾಂತರದ ಆರೋಪಗಳನ್ನು ಮುಖ್ಯವಾಗಿ ಮುಸ್ಲಿಮರ ವಿರುದ್ಧ ಮಾಡಲಾಗುತ್ತಿತ್ತು. ಆದರೆ, ಇಂದು ಸಮಾಜದಲ್ಲಿ ಮತಾಂತರ ಮಾಡುವುದು ಎಂದರೆ ಅದೇ ಒಂದು ಅಪರಾಧ ಎಂಬ ಭಾವನೆಯನ್ನು ವ್ಯವಸ್ಥಿತವಾಗಿ ಬಿತ್ತಲಾಗಿದೆ. ವಾಸ್ತವವಾಗಿ, ಧರ್ಮವನ್ನು ಬದಲಾಯಿಸಿಕೊಳ್ಳುವುದು ಪ್ರತಿಯೊಬ್ಬ ವ್ಯಕ್ತಿಯ ಸಾಂವಿಧಾನಿಕ ಹಾಗೂ ವೈಯಕ್ತಿಕ ಹಕ್ಕಾಗಿದೆ. ತನಗೆ ಇಷ್ಟವಿಲ್ಲದ ಧರ್ಮವನ್ನು ತ್ಯಜಿಸಿ, ತನ್ನ ಇಚ್ಛೆಯಂತೆ ಮತ್ತೊಂದು ಧರ್ಮವನ್ನು ಸ್ವೀಕರಿಸುವ ಅಥವಾ ಯಾವುದೇ ಧರ್ಮವನ್ನು ಅನುಸರಿಸದಿರುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...