ಉಡುಪಿ | 101.9 ಎಫ್‌ಎಂ ಸೇವೆಗೆ ಚಾಲನೆ; ಕರಾವಳಿಯಲ್ಲಿ ಆಕಾಶವಾಣಿ ಪ್ರಸಾರ ವ್ಯವಸ್ಥೆ ಬಲವರ್ಧನೆ : ಸಚಿವ ಅಶ್ವಿನಿ ವೈಷ್ಣವ್

Date:

ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ ಪ್ರಸಾರ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಆರಂಭಗೊಂಡಿರುವ ಎಫ್‌ಎಂ ಸೇವೆ ಮಹತ್ವದ ಹೆಜ್ಜೆಯಾಗಿದೆ. ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ 1 ಕಿಲೋವ್ಯಾಟ್ ಸಾಮರ್ಥ್ಯದ 101.9 ಎಫ್‌ಎಂ ಟ್ರಾನ್ಸ್‌ಮೀಟರ್ ಮೂಲಕ ಆಕಾಶವಾಣಿ ಮಂಗಳೂರು ಕೇಂದ್ರದ ಕಾರ್ಯಕ್ರಮಗಳು ಪ್ರಸಾರವಾಗಲಿದ್ದು, ಉಡುಪಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೇಳುಗರಿಗೆ ಗುಣಮಟ್ಟದ ರೇಡಿಯೋ ಕಾರ್ಯಕ್ರಮಗಳು ಲಭ್ಯವಾಗಲಿವೆ ಎಂದು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

- Advertisement -

ಉಡುಪಿಯ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ 101.9 ಎಫ್‌ಎಂ, 1 ಕಿಲೋವ್ಯಾಟ್ ಸಾಮರ್ಥ್ಯದ ಎಫ್‌ಎಂ ಪ್ರಸಾರಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಎಫ್‌ಎಂ ಸೇವೆಯು ಮಾಹಿತಿ, ಶಿಕ್ಷಣ ಮತ್ತು ಮನರಂಜನೆಯ ವೇದಿಕೆಯಾಗುವುದರ ಜೊತೆಗೆ ಸ್ಥಳೀಯ ಸಂಸ್ಕೃತಿ, ಸಾಹಿತ್ಯ, ಸಂಗೀತ, ಕಲೆ ಹಾಗೂ ಪ್ರಾದೇಶಿಕ ಸಂಪ್ರದಾಯಗಳನ್ನು ಉತ್ತೇಜಿಸಲಿದೆ. ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಪ್ರಮುಖ ವಿಚಾರಗಳ ಕುರಿತು ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಮೂಲಕ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೂ ಅವಕಾಶ ಕಲ್ಪಿಸಲಿದೆ ಎಂದರು.

ಬೆಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಕರಾವಳಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲಿಗೆ ಪ್ರಧಾನಮಂತ್ರಿಗಳು ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಕೊಂಕಣ ರೈಲು ಮಾರ್ಗದ ಸಂಪೂರ್ಣ ದ್ವಿಪಥೀಕರಣದ ಗುರಿ ಹೊಂದಲಾಗಿದ್ದು, ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗುವುದು. ಕೊಂಕಣ ಪ್ರದೇಶ ಹಾಗೂ ಕರಾವಳಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಪ್ರಧಾನಮಂತ್ರಿಗಳು ಅನುಮೋದನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ರೂಪಿಸಿ, ರೈಲ್ವೆ ಮೂಲಸೌಕರ್ಯವನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬೆಂಗಳೂರು ಮತ್ತು ಕರಾವಳಿ ಕರ್ನಾಟಕವನ್ನು ಸಂಪರ್ಕಿಸುವ ವಂದೇ ಭಾರತ್ ರೈಲು ಉಡುಪಿ ಜಿಲ್ಲೆಗೆ ದೊರೆತ ಮಹತ್ವದ ಕೊಡುಗೆಯಾಗಿದೆ. ರೈಲಿಗೆ ಇಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಎಫ್‌ಎಂ ಸೇವೆಗೆ ಸಚಿವರು ಚಾಲನೆ ನೀಡಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದರು.

ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ಬೆಂಗಳೂರು ಮತ್ತು ಮಡಗಾಂವ್ ನಡುವೆ ಕರಾವಳಿ ಮಾರ್ಗವಾಗಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗುತ್ತಿರುವುದು ಸಂತಸದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಿಲ್ದಾಣದ ಪರಿಸರದಲ್ಲಿ ಅಗತ್ಯ ಬದಲಾವಣೆಗಳನ್ನು ತರುವುದರ ಜೊತೆಗೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಹಕಾರ ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಗಳೂರು ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಆಕಾಶವಾಣಿ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮಲ್ಲಿಕಾ ಅಜಿತ್ ಶೆಟ್ಟಿ ಮತ್ತು ಡಾ. ಅನುಷಾ ಲೂಯಿಸ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು ಸಂಸಾರ ʻಜಾಲವಾಡಗಿʼ

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು...