ಉಡುಪಿ | ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆ ಈಡೇರಿಸಿ : ಚಾರ್ಲ್ಸ್ ಅಂಬ್ಲರ್

Date:

ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್‌ ದೌರ್ಜನ್ಯವು ಕೇಂದ್ರ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಅಧ್ಯಕ್ಷ ಚಾರ್ಲ್ಸ್ ಅಂಬ್ಲರ್ ಹೇಳಿದ್ದಾರೆ.

- Advertisement -

ಈ ಕುರಿತು‌ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೀಟ್‌ ಪ್ರಶ್ನೆಪತ್ರಿಕೆ ಸತತ ಮೂರು ಬಾರಿ ಸೋರಿಕೆಯಾಗಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದರಿಂದ ಉಂಟಾದ ಅಸಮಾಧಾನವನ್ನು ವ್ಯಕ್ತಪಡಿಸಲು ವಿದ್ಯಾರ್ಥಿಗಳು ದೆಹಲಿಯ ಜಂತರ್‌ ಮಂತರ್‌ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದೆ. ಅಂತಹ ಹಕ್ಕನ್ನು ಚಲಾಯಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಜೊತೆಗೆ ನೀಟ್‌ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ವಿದ್ಯಾರ್ಥಿಗಳ ಭವಿಷ್ಯಕ್ಕೆ ನ್ಯಾಯ ಒದಗಿಸುವಂತೆ ಕೇಂದ್ರ ಸರ್ಕಾರ ಮುತುವರ್ಜಿ ವಹಿಸಬೇಕು ಎಂದು ಚಾರ್ಲ್ಸ್ ಅಂಬ್ಲರ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...