ಉಡುಪಿ | ಮಕ್ಕಳ ರಕ್ಷಣೆಗೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ತಿಪ್ಪೇಸ್ವಾಮಿ ಕೆ.ಟಿ.

Date:

ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಗೆ ಸೀಮಿತವಾದ ವಿಚಾರವಲ್ಲ. ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಅಪರಾಧಗಳ ತಡೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಠಾಣಾ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳು ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಮಕ್ಕಳ ಮೇಲೆ ಅಥವಾ ಮಕ್ಕಳಿಂದ ಅಪರಾಧ ನಡೆದಾಗ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವುದು ಅಗತ್ಯ. ಅಪರಾಧದ ಸಂದರ್ಭದಲ್ಲಿ ಮಕ್ಕಳ ಮನಸ್ಥಿತಿ ಹಾಗೂ ಅದಕ್ಕೆ ಕಾರಣವಾದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ವರ್ಗಾವಣೆ ಮತ್ತು ಬದಲಾವಣೆ ನಿರಂತರವಾಗಿರುವುದರಿಂದ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಪುನರಾವರ್ತಿತ ತರಬೇತಿ ನೀಡುವ ಅವಶ್ಯಕತೆಯಿದೆ. ಮಕ್ಕಳ ಹಿತದೃಷ್ಟಿಯಿಂದ ಕಾನೂನಿನ ಸಂಘರ್ಷ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ ಕುರಿತು ತರಬೇತಿ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿದ್ದ ಅವಧಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಹಲವು ಶಿಫಾರಸುಗಳನ್ನು ಸಲ್ಲಿಸಿದ್ದು, ಅವುಗಳ ಆಧಾರದಲ್ಲಿ ರಾಜ್ಯ ಸರ್ಕಾರ 106 ಸುತ್ತೋಲೆಗಳನ್ನು ಹೊರಡಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಂದು ಇಲಾಖೆಯ ಜವಾಬ್ದಾರಿಯಾಗಿದೆ. ಸುಮಾರು 47 ಇಲಾಖೆಗಳು ನೇರವಾಗಿ ಅಥವಾ ಪರೋಕ್ಷವಾಗಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹೊಣೆಗಾರಿಕೆ ಹೊಂದಿವೆ. ಯಾವುದೇ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಮಕ್ಕಳ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದರು.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಸುಮಾರು 30 ಕಾಯ್ದೆಗಳನ್ನು ಜಾರಿಗೆ ತರಲಾಗಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳು ಕೈಜೋಡಿಸಬೇಕು. ಮಕ್ಕಳ ಹಿತರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತು ಮುಕ್ತ ಚರ್ಚೆ ನಡೆಸಿ ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಅಶ್ವಿತಾ ಶಾಲೆಟ್, ಮಂಗಳೂರಿನ ಪಡಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆನಿ ಪೀಟರ್ ಡಿ’ಸೋಜ ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಸಹಾಯವಾಣಿ ಯೋಜನೆಯ ಸಂಯೋಜಕಿ ಜ್ಯೋತಿ ನಿರೂಪಿಸಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ವಿವಾಹಿತ ಮಹಿಳೆಯೊಬ್ಬರ ಮನೆಗೆ ತಡರಾತ್ರಿ ನುಗ್ಗಿ ಚಾಕು ತೋರಿಸಿ ಜೀವ ಬೆದರಿಕೆ...

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...

ಕಲಬುರಗಿ | ಲಾರಿ, ಬೈಕ್ ಡಿಕ್ಕಿ; ಮೂವರು ಯುವಕರ ದಾರುಣ ಸಾವು!

ಸ್ನೇಹಿತನ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮನೆಯಿಂದ ಹೊರಟಿದ್ದ ಯುವಕ ಸೇರಿದಂತೆ ಮೂವರು...

ಚಿಕ್ಕಮಗಳೂರು | ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ನ. 25ರಂದು ಅರಣ್ಯ ಸಚಿವರೊಂದಿಗೆ ಸಭೆ; ಟಿ.ಡಿ ರಾಜೇಗೌಡ 

ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ರೈತ ಸಾವನಪ್ಪಿರುವ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು....