ಉಡುಪಿ | ಕಟ್ಟಡ ಕಾರ್ಮಿಕರ ನಿಧಿ ಬೇರೆ ಯೋಜನೆಗಳಿಗೆ ಬಳಕೆಗೆ ಸಿಐಟಿಯು ವಿರೋಧ, ಶಾಸಕರಿಗೆ ಮನವಿ

Date:

2026-27ರ ರಾಜ್ಯ ಬಜೆಟ್‌ನಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು ಇತರ ಯೋಜನೆಗಳಿಗೆ ಬಳಸುತ್ತಿರುವ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ರಿ), ಸಿಐಟಿಯು ವತಿಯಿಂದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಬಜೆಟ್‌ನಲ್ಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನಸಹಾಯ, ಪಿಂಚಣಿ, ವೈದ್ಯಕೀಯ ವೆಚ್ಚ ಹಾಗೂ ಅಪಘಾತ ಪರಿಹಾರಕ್ಕೆ ಮೀಸಲಾದ ನಿಧಿಯಿಂದ 60 ಕೋಟಿ ರೂ ವೆಚ್ಚದಲ್ಲಿ 10 ಜಿಟಿಟಿಸಿ ತರಬೇತಿ ಕೇಂದ್ರಗಳು, 104 ಶ್ರಮಿಕ ವಸತಿ ಶಾಲೆಗಳು ಹಾಗೂ 200 ಕೋಟಿ ರೂ ವೆಚ್ಚದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆಗೆ ಹಣ ವಿನಿಯೋಗಿಸಿರುವುದರಿಂದ ಕಾರ್ಮಿಕರ ಮೂಲಭೂತ ಸೌಲಭ್ಯಗಳಿಗೆ ಕೊರತೆ ಉಂಟಾಗುತ್ತದೆ ಎಂದು ಸಂಘದವರು ಆಕ್ಷೇಪ ವ್ಯಕ್ತಪಡಿಸಿದರು. ಜೊತೆಗೆ, ಕರ್ನಾಟಕದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ಪುನರ್ ಸ್ಥಾಪಿಸಿ ರದ್ದಾಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
Untitled design 20260315 161436 0000
ಜಾಹಿರಾತು

ಮನವಿಗೆ ಸ್ಪಂದಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು, ವಿಧಾನಸಭಾ ಅಧಿವೇಶನದ ಶೂನ್ಯಾವಧಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ಕಟ್ಟಡ ಕಾರ್ಮಿಕರ ನಿಧಿಯನ್ನು ಅವರ ಕಲ್ಯಾಣಕ್ಕಾಗಿ ಮಾತ್ರ ಬಳಸುವಂತೆ ಆಗ್ರಹಿಸುವುದಾಗಿ ತಿಳಿಸಿದರು. ಹಾಗೆಯೇ 62-63 ವರ್ಷ ವಯಸ್ಸಿನ ಕಟ್ಟಡ ಕಾರ್ಮಿಕರ ತಿರಸ್ಕರಿಸಲ್ಪಟ್ಟ ಪಿಂಚಣಿ ಅರ್ಜಿಗಳ ಕುರಿತು ಸಹ ಚರ್ಚಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ, 2024-25 ಮತ್ತು 2025-26 ಸಾಲಿನ ಎರಡು ವರ್ಷಗಳಿಂದ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಬಾಕಿ ಉಳಿದಿರುವ ವಿಚಾರಕ್ಕೂ ಗಮನ ಸೆಳೆಯಲಾಯಿತು.

ಬೇಡಿಕೆಗಳು ಈಡೇರದಿದ್ದಲ್ಲಿ ಏಪ್ರಿಲ್ 20ರಂದು ಬೆಂಗಳೂರು ಕಲ್ಯಾಣ ಮಂಡಳಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಂಘದ ಅಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ಕೋಶಾಧಿಕಾರಿ ಚಂದ್ರಶೇಖರ್ ವಿ, ವಸಂತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...