ಉಡುಪಿ | ಮೋದಿ–ಅಮಿತ್ ಶಾ ಸರ್ಕಾರದ ಅಂತ್ಯ ಸಮೀಪಿಸುತ್ತಿದೆ: ಲಕ್ಷ್ಮೀಶ ಗಬ್ಬಲಡ್ಕ

Date:

ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಮತದಾನದ ಪಾವಿತ್ರ್ಯತೆಯನ್ನು ರಕ್ಷಿಸುವ ಉದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ‘ವೋಟ್ ಚೋರಿ – ದೇಶ್ ಬಚಾವೋ’ ಅಭಿಯಾನದ ಅಂಗವಾಗಿ ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಧಾರ್ಮಿಕ ಪರಿಷತ್‌ನ ಲಕ್ಷ್ಮೀಶ ಗಬ್ಬಲಡ್ಕ, ಸರ್ವಾಧಿಕಾರಕ್ಕೆ ಅಂತ್ಯ ಎಂಬುದು ನಿಶ್ಚಿತ. ಜ್ಞಾನೇಶ್ ಪ್ರಭಾವದಿಂದ ಗೆದ್ದು ಅಧಿಕಾರಕ್ಕೆ ಬಂದ ಮೋದಿ–ಅಮಿತ್ ಶಾ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಜನಶಕ್ತಿಗೆ ಹೆಚ್ಚು ಸಮಯ ಬೇಕಾಗುವುದಿಲ್ಲ. ಈ ಆಡಳಿತದ ಅಂತ್ಯ ಸಮೀಪಿಸುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಅಧಿಕಾರಕ್ಕೆ ಬಂದ ಬಳಿಕ ಸರ್ಕಾರ ಕೈಗೊಂಡಿರುವ ಕ್ರಮಗಳ ಪರಿಣಾಮವನ್ನು ಇಂದು ಜನಸಾಮಾನ್ಯರು ಅನುಭವಿಸುವಂತಾಗಿದೆ. ಪ್ರಜೆಗಳ ಸಂಕಷ್ಟಗಳಿಗೆ ವಿಮೋಚನೆ ದೊರೆಯಬೇಕಾದರೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಜನಶಕ್ತಿ ಒಂದಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಸಾಹಿತಿ ಗಣನಾಥ ಎಕ್ಕಾರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಮತ್ತು ಅದರ ಪಾವಿತ್ರ್ಯತೆಯನ್ನು ಕಾಪಾಡುವ ಅಗತ್ಯವನ್ನು ಪ್ರತಿಪಾದಿಸಿದರು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕಿನ ರಕ್ಷಣೆಗೆ ಜನರು ಜಾಗೃತರಾಗಬೇಕು ಎಂಬ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಎ. ಗಫೂರ್, ನಿಕಟಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಸದಾಶಿವ ಉಳ್ಳಾಲ್, ಗೋಪಾಲ ಪೂಜಾರಿ, ದಿನಕರ ಹೇರೂರು, ಪ್ರಶಾಂತ್ ಜತ್ತನ್ನ, ಪ್ರಸಾದ್ ರಾಜ್ ಕಾಂಚನ್, ರಾಜು ಪೂಜಾರಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮುಳವಳ್ಳಿ, ವೆರೋನಿಕಾ ಕರ್ನೆಲಿಯೋ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

WhatsApp Image 2026 11 05 at 8.43.41 PM

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ದಿನೇಶ್ ಕುಲಾಲ್, ಗೋಪಿನಾಥ್ ಭಟ್, ಸದಾನಂದ ಶೆಟ್ಟಿ, ತಿಮ್ಮ ಪೂಜಾರಿ, ರಾಘವೇಂದ್ರ ಶೆಟ್ಟಿ ಕರ್ಜೆ, ಹರಿಪ್ರಸಾದ್ ಶೆಟ್ಟಿ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದಲ್ಲದೆ ವೈ. ಸುಕುಮಾರ್, ಅರವಿಂದ ಪೂಜಾರಿ, ಪ್ರದೀಪ್ ಕುಮಾರ್, ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ಮಲ್ಯಾಡಿ ಶಿವರಾಮ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ಶಬ್ಬೀರ್ ಅಹ್ಮದ್, ಗೀತಾ ವಾಗ್ಳೆ, ದೇವಕಿ ಸಣ್ಣಯ್ಯ, ಅಣ್ಣಯ್ಯ ಸೇರಿಗಾರ್, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಶರ್ಪುದ್ದೀನ್ ಶೇಖ್, ಹರೀಶ್ ಶೆಟ್ಟಿ ಪಾಂಗಾಳ, ಅಬೀಬ್ ಆಲಿ, ಜಯಕುಮಾರ್, ಬಾಲಕೃಷ್ಣ ಪೂಜಾರಿ, ಉದ್ಯಾವರ ನಾಗೇಶ್ ಕುಮಾರ್, ಸತೀಶ್ ಕೊಡವೂರು, ಸುರೇಂದ್ರ ಆಚಾರ್ಯ, ಸಂಜಯ ಆಚಾರ್ಯ, ಗಣೇಶ್ ನೆರ್ಗಿ, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ರಾಜ್ ಸರಳಬೆಟ್ಟು, ಜಯ ಶೆಟ್ಟಿ ಬನ್ನಂಜೆ, ಮಮತಾ ಶೆಟ್ಟಿ, ಡಾ. ಸುನಿತಾ ಶೆಟ್ಟಿ, ರೋಶನಿ ಒಲಿವರಾ, ಗೋಪಿ ನಾಯ್ಕ್, ಜ್ಯೋತಿ ಪುತ್ರನ್, ರೋಶನಿ ಶೆಟ್ಟಿ ಹಾಗೂ ಪ್ರತಿಮಾ ರಾಣೆ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಪ್ರಾಣಾಪಾಯದಿಂದ ಪಾರು

ವೇಗವಾಗಿ ಬಂದ ಕೆಎಸ್ಆರ್‌ಟಿಸಿ ವೋಲ್ವೋ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ...

ಮುಂಡಗೋಡ | ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ಮನೆಯ ಮುಂದಿನ ನಳದಲ್ಲಿ ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ...

ಹಾವೇರಿ | ಎಸ್ಐಆರ್ ರದ್ದು, ಜ್ಞಾನೇಶಕುಮಾರ ರಾಜೀನಾಮೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಎಸ್ಐಆರ್ ವಿರೋಧಿಸಿ...

ಬಾಗೇಪಲ್ಲಿ | ಜನರ ಮೇಲೆ ತೆರಿಗೆ ಹಾಗೂ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ : ಮುನಿ ವೆಂಕಟಪ್ಪ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡವರು, ಮಧ್ಯಮ ವರ್ಗದವರು, ಕಾರ್ಮಿಕರು...