ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

Date:

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ ಮತ್ತು ಡಿವೈಡರ್‌ಗಳ ಮಿನಿ ಹೈಮಾಸ್ಟ್‌ ಲೈಟ್‌ಗಳನ್ನು ಶೀಘ್ರ ದುರಸ್ತಿಪಡಿಸಿ, ಸಮರ್ಪಕ ನಿರ್ವಹಣೆ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ನಗರಸಭೆಯ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಅನೇಕ ದಾರಿದೀಪಗಳು ಹದಗೆಟ್ಟಿವೆ. ರಸ್ತೆಯ ಡಿವೈಡರ್‌ಗಳಲ್ಲಿರುವ ಮಿನಿ ಹೈಮಾಸ್ಟ್‌ ಲೈಟ್‌ಗಳು ಪದೇಪದೇ ಹಾಳಾಗುತ್ತಿದ್ದು, ಸಮರ್ಪಕ ನಿರ್ವಹಣೆ ನಡೆಯುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಟೆಂಡರ್ ಗುತ್ತಿಗೆದಾರರಿಗೆ ದಂಡ ವಿಧಿಸಿ ಅವರಿಂದ ಸಮರ್ಪಕವಾಗಿ ಕೆಲಸ ಮಾಡಿಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅತೀ ಶೀಘ್ರದಲ್ಲಿ ದಾರಿದೀಪ ವ್ಯವಸ್ಥೆಯನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಲ್ಲಿ ಮನವಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...