ಉಡುಪಿ | ಸಂವಿಧಾನದ ಮೌಲ್ಯಗಳ ಅರಿವಿದ್ದಾಗ ಮಾತ್ರ ಶಿಸ್ತುಬದ್ಧ ಜೀವನ ಸಾಧ್ಯ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

Date:

ಸಂವಿಧಾನದ ಹಕ್ಕುಗಳು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿದಾಗ ಮಾತ್ರ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಯುವ ಸಂಸತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನ್ಯಾ. ಗಂಗಣ್ಣನವರ್, ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವತಂತ್ರವಾಗಿ ಜೀವಿಸಲು ಅವಕಾಶ ಕಲ್ಪಿಸಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು, ಮಾನವ ಹಕ್ಕುಗಳನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಬಲಪಡಿಸಲು ಪ್ರತಿವರ್ಷ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಕ್ಕೆ ಬದ್ಧವಾಗಿ ಜೀವನ ನಡೆಸಬೇಕು. ಸಂಸತ್ತು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿರುವ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶದ ಜನಸಂಖ್ಯೆ, ಸಂಸ್ಕೃತಿ, ಸಾಮಾಜಿಕ ವೈವಿಧ್ಯತೆ ಹಾಗೂ ವಿಚಾರಗಳಲ್ಲಿನ ಭಿನ್ನತೆಗಳನ್ನು ಗಮನಿಸಿದಾಗ ಪ್ರಜಾಪ್ರಭುತ್ವದ ಮಹತ್ವ ಅರಿವಾಗುತ್ತದೆ ಎಂದು ಅವರು ಹೇಳಿದರು.

ಸಂವಿಧಾನವನ್ನು ಅಂಗೀಕರಿಸುವ ಮೊದಲು ಅನೇಕ ಮಹನೀಯರು ತಮ್ಮ ವಿಚಾರಧಾರೆಗಳನ್ನು ಮಂಡಿಸಿದ್ದರು. ಅವುಗಳನ್ನು ಅರಿತುಕೊಂಡಷ್ಟೂ ಸಂವಿಧಾನದ ವೈಚಾರಿಕತೆಯ ಆಳವನ್ನು ಅರ್ಥಮಾಡಿಕೊಳ್ಳಲು ಸಾಧ್ಯ ಎಂದರು.

ಮಕ್ಕಳು ಪ್ರಜಾಪ್ರಭುತ್ವದ ಬಗ್ಗೆ ತಿಳಿದುಕೊಂಡು ಅದರ ಕಾರ್ಯಕ್ಷಮತೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಯುವ ಸಂಸತ್ತು ಉತ್ತಮ ವೇದಿಕೆಯಾಗಿದೆ. ಜಿಲ್ಲೆಯಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ ಯುವ ಸಂಸತ್ತು ಸಭೆಗಳು ನಡೆಯಲಿದ್ದು, ಶಾಲಾ-ಕಾಲೇಜುಗಳ ಉತ್ತಮ ವಾಕ್‌ಚಾತುರ್ಯವುಳ್ಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಸಂಸತ್ತಿಗೆ ತನ್ನದೇ ಆದ ಪಾವಿತ್ರ್ಯತೆ ಹಾಗೂ ಪ್ರಾಮುಖ್ಯತೆ ಇದೆ. ವಿದ್ಯಾರ್ಥಿಗಳು ಅದರ ಮೌಲ್ಯಗಳನ್ನು ಅರಿತು ತಮ್ಮ ವ್ಯಕ್ತಿತ್ವದಲ್ಲಿ ರೂಢಿಸಿಕೊಂಡು, ಉತ್ತಮ ನಾಗರಿಕರಾಗಿ ದೇಶ, ರಾಜ್ಯ ಹಾಗೂ ಸಮಾಜವನ್ನು ಮುನ್ನಡೆಸುವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ನ್ಯಾ. ಗಂಗಣ್ಣನವರ್ ಕರೆ ನೀಡಿದರು.

Yuva Samsattu 1

ಸಂವಿಧಾನದ ಮೂಲ ಅಂಶಗಳೇ ನೆಮ್ಮದಿಯ ಜೀವನಕ್ಕೆ ಕಾರಣ: ಶಾಸಕ ಯಶ್‌ಪಾಲ್ ಎ. ಸುವರ್ಣ

ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. 1.4 ಕೋಟಿಗೂ ಹೆಚ್ಚು ಜನರಿದ್ದರೂ ನೆಮ್ಮದಿಯ ಜೀವನ ನಡೆಸಲು ಸಂವಿಧಾನದಲ್ಲಿರುವ ಮೂಲ ಅಂಶಗಳೇ ಕಾರಣ ಎಂದರು. ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಸಂಪತ್ತು ಹೊಂದಿರುವ ನಮ್ಮ ದೇಶದ ಯುವಜನತೆಯಲ್ಲಿ ಸಂವಿಧಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣಗಳನ್ನು ರೂಢಿಸಿಕೊಳ್ಳುವಂತೆ ಪ್ರೇರೇಪಿಸುವುದರೊಂದಿಗೆ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳುವಂತೆ ಮಾಡಬೇಕು ಎಂದು ಹೇಳಿದರು.

ಪ್ರಜಾಪ್ರಭುತ್ವದ ಆಶಯಗಳು ಯಶಸ್ವಿಯಾಗಲು ಪ್ರೀತಿ, ವಿಶ್ವಾಸ ಅಗತ್ಯ: ಎಂ.ಎ. ಗಫೂರ್

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕರಲ್ಲಿಯೂ ಪ್ರೀತಿ ಹಾಗೂ ವಿಶ್ವಾಸ ಬೆಳೆಸುವ ಕೆಲಸ ಮಾಡಿದಾಗ ಪ್ರಜಾಪ್ರಭುತ್ವದ ಆಶಯಗಳು ಯಶಸ್ವಿಯಾಗುತ್ತವೆ ಎಂದರು.

ಪ್ರತಿಯೊಬ್ಬ ಅರ್ಹರಿಗೂ ಮತದಾನದ ಹಕ್ಕನ್ನು ಪ್ರಜಾಪ್ರಭುತ್ವ ಕಲ್ಪಿಸಿದೆ. ಯುವಜನತೆ ದೇಶದ ಆಸ್ತಿಯಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುವ ಜನನಾಯಕರನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಅವರಿಗೆ ನೀಡಲಾಗಿದೆ. ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ಸತ್ಪ್ರಜೆಗಳಾಗಿ ಬಾಳಬೇಕು ಎಂದು ಹೇಳಿದರು.

ಸರ್ವರಿಗೂ ಸಮಬಾಳು, ಸಮಪಾಲು ಸಿಕ್ಕಾಗ ಪ್ರಜಾಪ್ರಭುತ್ವದ ಸೌಂದರ್ಯ ಅರಿವಾಗುತ್ತದೆ: ಮಂಜುನಾಥ ಪೂಜಾರಿ

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರಿಗೂ ಸಮಬಾಳು ಹಾಗೂ ಸಮಪಾಲು ದೊರೆತಾಗ ಮಾತ್ರ ಅದರ ಸುಂದರತೆಯ ಅರಿವಾಗುತ್ತದೆ ಎಂದರು.

ಸಂವಿಧಾನಾತ್ಮಕವಾಗಿ ನಡೆಯುವ ಕಾನೂನು ಆಡಳಿತಗಳು ಸಮಾಜದ ಕಟ್ಟಕಡೆಯ ಜನರಿಗೂ ತಲುಪಬೇಕು. ಯುವಕರಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯುವ ಸಂಸತ್ತು ಸಭೆಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಯುವ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಚಲನಶೀಲತೆ ವಿಸ್ತರಣೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸಂವಿಧಾನದ ಪೀಠಿಕೆ ಬೋಧಿಸಿ ಮಾತನಾಡಿ, ಕಳೆದ ಎರಡು-ಮೂರು ವರ್ಷಗಳಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ವಿನೂತನ ಕಾರ್ಯಕ್ರಮಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಶಾಲಾ-ಕಾಲೇಜು ಮಕ್ಕಳಿಗೆ ಯುವ ಸಂಸತ್ತು ಸಭೆಗಳನ್ನು ಆಯೋಜಿಸುವ ಮೂಲಕ ಪ್ರಜಾಪ್ರಭುತ್ವದ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸುವ ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರವೀಣ ಮೊಗವೀರ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಯುವ ಸಂಸತ್ತು ಕಾರ್ಯಕ್ರಮದ ಪೋಸ್ಟರ್ ಅನ್ನು ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...

ಗದಗ | ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬಸವರಾಜ ರಾಯರಡ್ಡಿ...

ಏಕರೂಪ ಸಮಾನ ಶಿಕ್ಷಣ ಜಾರಿಗೆ ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರ ಬಂಧನ

ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ...

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ...