ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

Date:

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್ ಖರೀದಿ ಹಾಗೂ ಉಚಿತ ಆರೋಗ್ಯ ತಪಾಸಣೆ ಹೆಸರಿನ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸುವುದು ಮತ್ತು ಜಿಲ್ಲೆಯಲ್ಲಿ ತಕ್ಷಣ ಮರಳುಗಾರಿಕೆ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾವಿರಾರು ಕಟ್ಟಡ ಕಾರ್ಮಿಕರು ಸೋಮವಾರ ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಮಣಿಪಾಲದ ಉಪೇಂದ್ರ ಪೈ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಮಿಕರು, ಕಚೇರಿ ಎದುರು ಧರಣಿ ಕುಳಿತು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಧರಣಿಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಕಿಟ್ ಖರೀದಿ ಹಾಗೂ ಆರೋಗ್ಯ ತಪಾಸಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪಗಳಿವೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಮಂಡಳಿಯು ಮತ್ತೆ ಕಿಟ್ ಖರೀದಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು.

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು ಕುಟುಂಬದ ಆಧಾರದಲ್ಲಿ ತಿರಸ್ಕರಿಸಲಾಗುತ್ತಿರುವುದು ಮಂಡಳಿಯ ನಿಯಮಗಳಿಗೆ ವಿರುದ್ಧವಾಗಿದೆ. ಈ ಅನ್ಯಾಯದ ವಿರುದ್ಧ ಸಂಘಟಿತ ಕಾನೂನು ಹೋರಾಟ ನಡೆಸಿ, ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗಿದೆ ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಿಸಲು ಜಿಲ್ಲಾಡಳಿತ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದ ಪರಿಣಾಮ ಸಾವಿರಾರು ಕಟ್ಟಡ ಕಾರ್ಮಿಕ ಕುಟುಂಬಗಳು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಮರಳುಗಾರಿಕೆ ವಿಚಾರದಲ್ಲಿ ಗಣಿ ಇಲಾಖೆ ಮತ್ತು ಜಿಲ್ಲಾಡಳಿತ ಪರಸ್ಪರ ಜವಾಬ್ದಾರಿ ವರ್ಗಾಯಿಸುತ್ತಿದ್ದು, ಮನವಿ ಸಲ್ಲಿಸಿದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಪ್ರಭಾವಿ ರಾಜಕೀಯ ವ್ಯಕ್ತಿಗಳು ಎಂ-ಸ್ಯಾಂಡ್ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವುದರಿಂದ ಕಡಿಮೆ ದರದಲ್ಲಿ ಮರಳು ದೊರೆಯದಂತೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಶಾಸಕರೂ ಸಮಸ್ಯೆ ಪರಿಹಾರಕ್ಕೆ ಅಗತ್ಯ ಆಸಕ್ತಿ ತೋರುತ್ತಿಲ್ಲ. ಇದರಿಂದ ನಿರ್ಮಾಣ ವಲಯದ ಕಾರ್ಮಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ದೂರಿದರು.

ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಪರವಾಗಿ ಕೆಲಸಗಳು ನಡೆಯುತ್ತಿಲ್ಲ. ನೈಜ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲಾಗುತ್ತಿದೆ. ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆಯಿಂದ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಟ್ಟಡ ಕಾರ್ಮಿಕರ ಉದ್ಯೋಗಕ್ಕೆ ತೀವ್ರ ತೊಂದರೆ ಉಂಟುಮಾಡಿರುವ 9/11 ಸಮಸ್ಯೆಯೂ ಇನ್ನೂ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನ.25ರಂದು ಜಂಟಿ ಸಭೆ: ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಪ್ರತಿಭಟನಾಕಾರರ ಮನವಿ ಸ್ವೀಕರಿಸಲು ಆಗಮಿಸಿದ ಅಪರ ಜಿಲ್ಲಾಧಿಕಾರಿಯವರ ಮುಂದೆ ಕಾರ್ಮಿಕರು ಮರಳುಗಾರಿಕೆ ಆರಂಭವಾಗದಿರುವ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಗೆ ಪರಿಹಾರ ದೊರೆಯುವವರೆಗೆ ಸ್ಥಳದಿಂದ ತೆರಳುವುದಿಲ್ಲ ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟುಹಿಡಿದರು.

ನಂತರ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಅಪರ ಜಿಲ್ಲಾಧಿಕಾರಿಯವರು, ನವೆಂಬರ್ 25ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಜಂಟಿ ಸಭೆ ನಡೆಸಿ ಮರಳುಗಾರಿಕೆ ಸೇರಿದಂತೆ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಹಿನ್ನೆಲೆಯಲ್ಲಿ ನವೆಂಬರ್ 25ರಂದು ನಡೆಯುವ ಸಭೆಯಲ್ಲೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ನವೆಂಬರ್ 26ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ., ಸುಭಾಶ್ಚಂದ್ರ ನಾಯಕ್, ಚಿಕ್ಕ ಮೊಗವೀರ, ರಾಜೀವ ಪಡುಕೋಣೆ, ದಯಾನಂದ ಕೋಟ್ಯಾನ್, ಉಮೇಶ್ ಕುಂದರ್, ರಾಮ ಕಾರ್ಕಡ, ನಾಗರತ್ನ ಪಡುವರಿ, ಗೋಪಾಲಕೃಷ್ಣ, ಶ್ರೀಧರ ಉಪ್ಪುಂದ, ಸಯ್ಯದ್ ಸೇರಿದಂತೆ ಹಲವು ಕಾರ್ಮಿಕ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಮಾದಕ ವಸ್ತುಗಳ ವಿರುದ್ಧ ಕಂಕಣಬದ್ಧರಾಗಿ ಕೈ ಜೋಡಿಸೋಣ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮತ್ತು ಜೀವನ ಹಾಳಾಗು ವುದಲ್ಲದೆ,...

ದಕ್ಷಿಣ ಕನ್ನಡ | ಎಫ್‌ಎಸ್‌ಡಿ ದಿಢೀರ್‌ ದಾಳಿ: ಸ್ನಾಕ್ಸ್‌ ತಯಾರಿಕಾ ಘಟಕಕ್ಕೆ ಸೀಲ್‌!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ(ಎಫ್‌ಎಸ್‌ಡಿ) ವಿವಿಧ...

ದಕ್ಷಿಣ ಕನ್ನಡ | ವಿಚಾರವಾದಿ ಸಂಘಕ್ಕೆ 50 ವರ್ಷ: ವರ್ಷಪೂರ್ತಿ ವೈಚಾರಿಕ ಕಾರ್ಯಕ್ರಮ ಆಯೋಜನೆ

ದಕ್ಷಿಣ ಕನ್ನಡ ವಿಚಾರವಾದಿ ಸಂಘಕ್ಕೆ 50 ವರ್ಷಗಳನ್ನು ಪೂರೈಸುತ್ತಿದ್ದು, ಮುಂದೆ ಎದುರಾಗಲಿರುವ...

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...