ಉಡುಪಿ | ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಸಿಪಿಎಂ ಮನವಿ

Date:

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ 15 ಮತ್ತು ಶೇ.3 ರ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಆಯೋಗವು ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ರಷ್ಟು ಹೆಚ್ಚಳ ಮಾಡಬೇಕೆಂದು ವರದಿ ನೀಡಿದೆ.

- Advertisement -

ಕರ್ನಾಟಕದಲ್ಲಿ ಅಂದಿನ ಮುಖ್ಯಮಂತ್ರಿ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಬೆಂಬಲಿಸಿದೆ ಕರ್ನಾಟಕ ವಿಧಾನಸಭೆಯ ಈ ತೀರ್ಮಾನಕ್ಕೆ ಒಕ್ಕೂಟ ಸರಕಾರ ಒಪ್ಪಿಗೆಯನ್ನು ನೀಡಿ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರ್ಪಡೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಂಡು ಸಂಸದರಿಗೆ ಮನವಿ ನೀಡುವ ಭಾಗವಾಗಿ ಇಂದು ಉಡುಪಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅವರ ಆಪ್ತ ಸಹಾಯಕರ ಮೂಲಕ 11 ಬೇಡಿಕೆಗಳ ಮನವಿ ನೀಡಲಾಯಿತು.
ಈ ವೇಳೆಯಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್ ನರಸಿಂಹ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ರಾದ ಸಂಜೀವ ಬಳ್ಕೂರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮನವಿಯಲ್ಲಿ ಏನಿದೆ ?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಯನ್ನು ಆಧರಿಸಿ ಶೈಕ್ಷಣಿಕ ಹಾಗೂ ಉದ್ಯೋಗದ ನೇಮಕಾತಿಯಲ್ಲಿ ಜಾರಿಯಲ್ಲಿದ್ದ ಶೇ.15 ಮತ್ತು ಶೇ.3 ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದಲ್ಲಿ ಹೆಚ್ಚಿಸಬೇಕೆಂಬ ಆಗ್ರಹದ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ನ್ಯಾ.ಹೆಚ್.ಎನ್.ನಾಗಮೋಹನ ದಾಸ್ ಅವರ ಆಯೋಗವು ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7 ರಷ್ಟು ಹೆಚ್ಚಳ ಮಾಡಬೇಕೆಂದು ವರದಿ ನೀಡಿತು. ಈ ವ ವರದಿಯನ್ನು ಅಂದಿನ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಸವರಾಜ ಬೊಮ್ಮಾಯಿಯವರ ಸರ್ಕಾರ ಅಂಗೀಕರಿಸಿ ಅದರ ಜಾರಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಂಡಿತು. ಈ ಅಂಶದ ಬಗ್ಗೆ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿದ್ದವು. ಹೀಗಾಗಿ ಅದು ಭಾರತ ಸರ್ಕಾರದ ಮುಂದಿನ ಕ್ರಮಕ್ಕೆ ಕಳಿಸಲ್ಪಟ್ಟಿರುವುದು ತಮಗೆ ತಿಳಿದ ವಿಷಯವೇ ಆಗಿದೆ.

ಕರ್ನಾಟಕ ವಿಧಾನಸಭೆಯ ಈ ತೀರ್ಮಾನಕ್ಕೆ ಒಕ್ಕೂಟ ಸರ್ಕಾರ ಒಪ್ಪಿಗೆಯನ್ನು ನೀಡಿ ಸಂವಿಧಾನದ 9 ಷೆಡ್ಯೂಲಿಗೆ ಸೇರ್ಪಡೆ ಮಾಡಬೇಕಾಗಿದೆ. ಆದ್ದರಿಂದ ತಾವು ಒಕ್ಕೂಟ ಸರ್ಕಾರದ ಮೇಲೆ ಒತ್ತಡವನ್ನು ತಂದು ಇದರ ಜಾರಿಗೆ ಮುತುವರ್ಜಿ ಮಾಡಬೇಕಾಗಿ ಸಿಪಿಐ(ಎಂ) ಪಕ್ಷವು ವಿನಂತಿಸುತ್ತದೆ. ಇದೇ ಸಂದರ್ಭದಲ್ಲಿ ಭಾರತೀಯ ಸಮಾಜದ ವಾಸ್ತವಗಳ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಕಲ್ಪಿಸಬೇಕೆಂಬ ಬೇಡಿಕೆಗೆ ಪೂರಕವಾಗಿ ದೇವಿಂದರ್ ಸಿಂಗ್ ವರ್ಸಸ್ ಪಂಜಾಬ್ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪು ಮಹತ್ವದ್ದಾಗಿದೆ. ಇದನ್ನು ಅನುಸರಿಸಿ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ನ್ಯಾ.ಹೆಚ್.ಎನ್.ನಾಗಮೋಹನದಾಸ್ ಅವರ ಆಯೋಗವನ್ನು ರಚಿಸಿತು ಮತ್ತು ಆಯೋಗ ನೀಡಿದ ವರದಿಯನ್ನು ಅಂಗೀಕರಿಸಿತು.

ಇದರಲ್ಲಿನ ಗುಂಪುಗಳ ವರ್ಗೀಕರಣ, ಶೇಕಡವಾರು ಹಂಚಿಕೆಯ ಕುರಿತ ಕರ್ನಾಟಕ ಸರ್ಕಾರದ ನಿರ್ಧಾರದ ವಿಷಯದಲ್ಲಿ ಕೆಲವು ಸಣ್ಣ ಭಿನ್ನಾಭಿಪ್ರಾಯಗಳು ವ್ಯಕ್ತಗೊಂಡಿವೆ. ಇದೇ ಹೊತ್ತಿನಲ್ಲಿ ಕೆಲವು ಸ್ಥಾಪಿತ ಹಿತಾಸಕ್ತಿಗಳು ಜನತೆಯನ್ನು ಪರಸ್ಪರ ಎತ್ತಿ ಕಟ್ಟುವ ವಿಭಜಕ ಪಾತ್ರ ವಹಿಸುತ್ತಿರುವುದು ಅತ್ಯಂತ ನೋವಿನ ಮತ್ತು ವಿಷಾದಕರ ಸಂಗತಿಯಾಗಿದೆ. ಸಾಮಾಜಿಕ ನ್ಯಾಯ ನಿಜಕ್ಕೂ ದಕ್ಕುವಂತೆ ಮಾಡಲು, ಜನತೆಯ ಐಕ್ಯತೆಯನ್ನು ಕಾಪಾಡಬೇಕಿದೆ. ಒಳ ಮೀಸಲಾತಿಯ ವಿಷಯದಲ್ಲಿ ಉಂಟಾಗಿರುವ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಂಡು ಹೋಗಲು ರಾಜ್ಯ ಸರ್ಕಾರ ವಿಳಂಬಿಸದೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ. ಒಳ ಮೀಸಲಾತಿ ಜಾರಿ ವಿಷಯವು, ಮೀಸಲಾತಿ ಪ್ರಮಾಣ ಹೆಚ್ಚಳ ವಿಷಯದ ಜೊತೆಯೂ ತಳಕು ಹಾಕಿಕೊಂಡಿದೆ.

ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಳದ ರಾಜ್ಯ ಸರ್ಕಾರದ ಕಾಯ್ದೆಯನ್ನು ಒಕ್ಕೂಟ ಸರ್ಕಾರ ಅನುಮೋದಿಸಿ ಸಂವಿಧಾನದ ಷೆಡ್ಯೂಲ್ 9 ಕ್ಕೆ ಸೇರ್ಪಡೆ ಮಾಡುವುದು ಅತ್ಯಂತ ಜರೂರಾಗಿ ಆಗಬೇಕಿದೆ. ಆದ್ದರಿಂದ ಸಂಸತ್ ಸದಸ್ಯರಾಗಿರುವ ತಾವು ಕರ್ನಾಟಕ ರಾಜ್ಯದ ಜನತೆಯ ಹಿತವನ್ನು ಕಾಯಲು ಪಕ್ಷಭೇದ ಮರೆತು ಭಾರತ ಸರ್ಕಾರ ಅನುಮೋದನೆ ನೀಡುವಂತೆ ಮತ್ತು ಸಂವಿಧಾನದ ಷೆಡ್ಯೂಲ್ 9 ಕ್ಕೆ ಸೇರಿಸುವಂತೆ ಒತ್ತಡವನ್ನು ಹಾಕಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ತಮ್ಮಲ್ಲಿ ವಿನಂತಿಸುತ್ತದೆ. ಪ.ಜಾ. ಮತ್ತು ಪ.ಪಂ. ಮೀಸಲಾತಿ ಪ್ರಮಾಣ ಹೆಚ್ಚಳ ಮತ್ತು ಒಳ ಮೀಸಲಾತಿ ವರ್ಗೀಕರಣದ ಒಟ್ಟಾರೆ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸನ್ನಿವೇಶದ ತುರ್ತನ್ನು ಗಮನದಲ್ಲಿರಿಸಿ. 15-4-2026 ರಂದು ರಾಜ್ಯದಾದ್ಯಂತ ಸಂಸದರ ಕಛೇರಿ ಮುಂದೆ ಪ್ರತಿಭಟನೆ ಮೂಲಕ ಈ ಕೆಳಗಿನ ಬೇಡಿಕೆಗಳನ್ನು ತಮ್ಮ ಮುಂದೆ ಮಂಡಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಕರ್ನಾಟಕ ರಾಜ್ಯ ಸಮಿತಿಯು ಕೆಳಕಂಡ ಅಭಿಪ್ರಾಯಗಳನ್ನು ಮುಂದಿಡುತ್ತಿದೆ.

  1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕರ್ನಾಟಕದ ತೀರ್ಮಾನಕ್ಕೆ ಕೇಂದ್ರದ ಬಿಜೆಪಿ-ಎನ್.ಡಿ.ಎ ಸರ್ಕಾರ ಕೂಡಲೇ ಅನುಮೋದನೆ ನೀಡಬೇಕು. ಇದನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರಿಸಿ ಕೇಂದ್ರದಲ್ಲಿ ಇರುವಂತೆ ಶೇ. 17 ಮತ್ತು ಶೇ 7 ರ ಜಾರಿಗೆ ಅನುವು ಮಾಡಿಕೊಡಬೇಕು. ಇದಕ್ಕಾಗಿ ರಾಜ್ಯದ ಸಂಸದರು ವಿಶೇಷ ಒತ್ತಡದ ಪ್ರಯತ್ನಗಳನ್ನು ನಡೆಸಬೇಕು. ಷೆಡ್ಯೂಲ್ 9 ಕ್ಕೆ ಸೇರ್ಪಡೆ ಮಾಡದಿರುವುದು ಇಂದಿನ ಒಟ್ಟು ಸಮಸ್ಯೆಯ ಒಂದು ಪ್ರಧಾನ ಅಂಶವಾಗಿದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು.
  2. ಇಂದಿನ ನಿರುದ್ಯೋಗ ಸಮಸ್ಯೆಯ ಗಂಭೀರತೆಯನ್ನ ಅರ್ಥ ಮಾಡಿಕೊಂಡು ಭಾರತದ ಒಕ್ಕೂಟದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಮತ್ತು ಬ್ಯಾಕ್ ಲಾಗ್ ಹುದ್ದೆಗಳನ್ನು ಯಾವುದೇ ಸಂದರ್ಭದಲ್ಲಿ ಸಾಮಾನ್ಯ ಗುಂಪಿಗೆ ವರ್ಗಾಯಿಸಬಾರದು. ಹಾಗೆಯೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸುಮಾರು 3 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಬೇಕು.
  3. ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳು ಮತ್ತು ಸಂಸ್ಥೆಗಳಲ್ಲಿ ಖಾಯಂ ನೇಮಕಾತಿಯೇ ಸ್ಥಗಿತಗೊಂಡಂತಾಗಿದೆ ಅಥವಾ ಇಲ್ಲದಂತಾಗಿದೆ. ಇದರಿಂದ ವಾಸ್ತವವಾಗಿ ಮೀಸಲಾತಿಯೇ ಇಲ್ಲದಂತಾಗಿದೆ. ಆದ್ದರಿಂದ ಎಲ್ಲಾ ಸಾರ್ವಜನಿಕ ರಂಗಗಳಲ್ಲೂ ಖಾಯಂ ಉದ್ಯೋಗಗಳನ್ನು ತುಂಬಬೇಕು ಮತ್ತು ಮೀಸಲಾತಿಯನ್ನು ರಕ್ಷಿಸಬೇಕು.
  4. ಉದಾರೀಕರಣ ಮತ್ತು ಖಾಸಗೀಕರಣದಿಂದ ಪ್ರಧಾನವಾಗಿ ಉದ್ಯೋಗಗಳ ಸೃಷ್ಟಿಯು ಖಾಸಗಿ ರಂಗದಲ್ಲೇ ಹೆಚ್ಚಾಗಿ ಇರುವುದು. ಆದರೆ ಇಲ್ಲಿ ಮೀಸಲಾತಿ ನೀತಿಯೇ ಇಲ್ಲವಾಗಿದೆ. ಆದ್ದರಿಂದ ಖಾಸಗೀ ರಂಗದಲ್ಲಿಯೂ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಮೀಸಲಾತಿ ನೀತಿಯು ಅತ್ಯಂತ ಸೀಮಿತಗೊಂಡ ಆವಕಾಶವಾಗಿ ಬಿಡುತ್ತದೆ. ಭವಿಷ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಬದಲಾಗುತ್ತಿರುವ ಸನ್ನಿವೇಶದಲ್ಲಿ ಖಾಸಗಿ ರಂಗದಲ್ಲಿ ನಮ್ಮ ಭಾರತದ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯದ ಸಾಧನೆಯಲ್ಲಿ ಖಾಸಗೀ ಕ್ಷೇತ್ರದಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ಎಲ್ಲಾ ಒತ್ತಡ ಹಾಕಬೇಕಾಗಿ ಆಗ್ರಹಿಸುತ್ತೇವೆ.
  5. ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50 ದಾಟಬಾರದು ಎನ್ನುವುದಕ್ಕೆ ಇಂದ್ರಾ ಸಹಾನಿ ಕೇಸನ್ನು ಉದಾಹರಿಸಿ ಮಾತನಾಡಲಾಗುತ್ತದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ನೀಡಬೇಕು ಎನ್ನುವ ನೀತಿಗೆ ಅಡ್ಡಿಯಾಗುತ್ತಿದೆ. ಇದೇ ಇಂದ್ರಾ ಸಹಾನಿ ಕೇಸಿನ ತೀರ್ಪಿನಲ್ಲಿಯೇ ವಿಶೇಷ ಸಂದರ್ಭಗಳಲ್ಲಿ ಈ ಮಿತಿಯನ್ನು ದಾಟಲು ಅವಕಾಶ ಇರುವುದನ್ನು ಗಮನಿಸಬೇಕು.
  6. ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಗಳಿಗೆ ಇಘಖ ಕೋಟಾದಲ್ಲಿ ಶೇ.10 ಮೀಸಲಾತಿಯನ್ನು ಒದಗಿಸಿ ಕೇಂದ್ರ ಸರ್ಕಾರವೇ ಒದಗಿಸಿರುವ ಉದಾಹರಣೆ ಇದೆ. ಅದೂ ಕೇವಲ 48 ಗಂಟೆಗಳಲ್ಲಿಯೇ ಜಾರಿಗೆ ಬರುವಂತೆ ನೋಡಿಕೊಳ್ಳಲಾಗಿದೆ. ಶೇ.50 ರ ಮಿತಿಯನ್ನು ದಾಟಿದ ಹಲವು ರಾಜ್ಯಗಳೂ ಇಂತಹ ಅವಕಾಶ ಪಡೆದುಕೊಂಡಿವೆ. ಕರ್ನಾಟಕ ರಾಜ್ಯ ಸರ್ಕಾರವು ತನ್ನಕೋರಿಕೆಯನ್ನು 2022 ರಲ್ಲಿಯೇ ಮಂಡಿಸಿದೆ. ಆದ್ದರಿಂದ ರಾಜ್ಯದ ಕೋರಿಕೆಗೆ ಭಾರತ ಸರ್ಕಾರ ಕೂಡಲೇ ಅಂಗೀಕಾರ ನೀಡಬೇಕು. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸ್ಪಷ್ಟವಾದ ನಿರ್ಧಾರ ತೆಗೆದುಕೊಳ್ಳುವಂತೆ, ಅದು ಜಾರಿಯಾಗುವಂತೆ ಸಹ ತಾವೂ ಕ್ರಮ ವಹಿಸಬೇಕು.
  7. ಈ ಸಮುದಾಯಗಳ ಪ್ರಗತಿಗೆ ಕೇಂದ್ರದ ಒಟ್ಟು ಬಜೆಟ್ ನಲ್ಲಿ ಹಾಗೂ ಅಭಿವೃದ್ಧಿಗೆ ಸಹಾಯಕವಾಗಿರುವ ಉಪಯೋಜನೆಗಳಿಗೆ ಬಜೆಟ್ ನಲ್ಲಿ ಭಾರತ ಸರ್ಕಾರ ನೀಡುತ್ತಿರುವ ಮೊತ್ತ ಕಡಿಮೆಯಾಗುತ್ತಿದೆ. ಮಾತ್ರವಲ್ಲ, ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಹಣ ಮೀಸಲಿಡಬೇಕು ಎನ್ನುವ ಹಿಂದಿನ ಯೋಜನಾ ಆಯೋಗದ ನಿರ್ದೇಶನ ಇಲ್ಲವಾಗಿದೆ. ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಹಣ ಮೀಸಲಿಡುವುದು ಈ ಸಮುದಾಯಗಳ ಪ್ರಗತಿಗೆ ಅತ್ಯಂತ ಅಗತ್ಯವಾದುದು. ಈ ಮೊತ್ತವನ್ನು ಬೇರೆ ಕಾರ್ಯಕ್ರಮಗಳಿಗೆ ವರ್ಗಾಯಿಸಕೂಡದು. ಈ ದಿಸೆಯಲ್ಲಿ ಜನಸಂಖ್ಯೆ ಅನುಗಣವಾಗಿ ಉಪ ಯೋಜನೆಗಳಿಗೆ ಹಣ ಹಂಚಿಕೆ ಮಾಡುವಂತೆ ಕ್ರಮ ವಹಿಸಬೇಕು. ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ. ಉಪ ಯೋಜನೆಗಳಿಗಾಗಿ ಭಾರತ ಸರ್ಕಾರ ಕಾಯ್ದೆಯೊಂದನ್ನು ರೂಪಿಸಬೇಕು.
  8. ನೇಮಕಾತಿ ಪ್ರಕ್ರಿಯೆಯ ರೋಸ್ಟರ್ ನಿಯಮದಲ್ಲಿ ಎಡ, ಬಲ, ನೃತ್ಯ, ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ಖಾತ್ರಿಗೊಳಿಸುವಂತೆ ತಾವು ಕ್ರಿಯಾಶೀಲ ಪಾತ್ರವಹಿಸಬೇಕು.
  9. ಕರ್ನಾಟಕ ಸರ್ಕಾರವು ಅಲೆಮಾರಿ, ಆದಿವಾಸಿ ಮತ್ತು ಅಂಚಿನ ಜಾತಿಗಳಿಗೆ ಒಳ-ಮೀಸಲಾತಿ ಪ್ರವರ್ಗವನ್ನು ರೂಪಿಸಲು ರಾಜ್ಯ ಸರ್ಕಾರದೊಂದಿಗೆ ತಾವು ಮುತುವರ್ಜಿ ವಹಿಸಬೇಕು.
  10. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರ್ಪಡೆ ಮಾಡುವಲ್ಲಿ ಪ್ರಯತ್ನಗಳನ್ನು ತೀವ್ರಗೊಳಿಸುತ್ತಲೇ, ಕರ್ನಾಟಕ ಸರ್ಕಾರವು ಪ.ಜಾತಿ, ಪಂಗಡಗಳಿಗೆ ಇರುವ ಹಿಂದಿನ ಶೇ.15 ಮೀಸಲಾತಿ ಪ್ರಮಾಣದೊಳಗೆ ಒಳ-ಮೀಸಲಾತಿಯನ್ನು ಜಾರಿಗೊಳಿಸಿ. 56,432 ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೆ ನೇಮಕಾತಿ ಪ್ರಕ್ರಿಯೆ ನಿಲ್ಲಬಾರದು. ವಿಳಂಬ ಆಗಬಾರದು. ಒಳ ಮೀಸಲಾತಿ ನೀತಿ ಅಳವಡಿಸಬೇಕು ಎಂಬುದನ್ನು ತಾವು ಒತ್ತಾಯಿಸಬೇಕು.
  11. ಉದ್ಯೋಗ ನೇಮಕಾತಿ ಮಾಡುವಾಗ ಒಳ ಮೀಸಲಾತಿಯ ಎಲ್ಲಾ ಪ್ರವರ್ಗಗಳಿಗೂ ನ್ಯಾಯಸಮ್ಮತವಾದ ರೀತಿಯಲ್ಲಿ ರೋಸ್ಟರ್ ಬಿಂದು ಅಳವಡಿಸಬೇಕು. ಇದಕ್ಕಾಗಿ ಕಾನೂನು ತಜ್ಞರು, ಚಳುವಳಿ ಸಂಘಟನೆಗಳ ಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡು ಸಮಾಲೋಚನಾ ಸಭೆಗಳನ್ನು ನಡೆಸಿ ತೀರ್ಮಾನ ಮಾಡಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...