ಉಡುಪಿ | ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಸಮಾಜದಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಅತ್ಯಮೂಲ್ಯ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುದರೊಂದಿಗೆ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ಮೊದಲನೇ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಪೌರಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಹಿತದೃಷ್ಠಿಯಿಂದ ಪೌರಾಡಳಿತದ ನಿರ್ದೇಶನದಂತೆ ಪ್ರತೀ ಮೂರು ತಿಂಗಳಿಗೊಮ್ಮೆ ಆರೋಗ್ತ ತಪಾಸಣೆ ಹಾಗೂ ವರ್ಷಕ್ಕೆ ಒಂದು ಬಾರಿ ಮಾಸ್ಟರ್ ಹೆಲ್ತ್ ಚೆಕ್ ಮಾಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರುಗಳಿಗೆ ಆರೋಗ್ಯ ತಪಾಸಣೆ ನಡೆಸುವ ದಿನ ಹಾಗೂ ಸ್ಥಳಗಳ ಬಗ್ಗೆ ಸೂಚನಾ ಫಕಗಳಲ್ಲಿ ಪ್ರದರ್ಶಿಸಬೇಕು ಎಂದರು.

SAFAI MEETING

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮನೆಗಳು, ಕಂಪನಿ, ಆಸ್ಪತ್ರೆ, ಅಪಾರ್ಟ್ಮೆಂಟ್ ಸೇರಿದಂತೆ ಇತರೆಡೆ ಮ್ಯಾನ್ ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿಗಳು ಕಟ್ಟಿಕೊಂಡಲ್ಲಿ ಸ್ವಚ್ಛಗೊಳಿಸಲು ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ 14420 ಮತ್ತು ಗ್ರಾಮಿಣ ಪ್ರದೇಶ ವ್ಯಾಪ್ತಿಯಲ್ಲಿ 9480985555 ಅನ್ನು ಸಂಪರ್ಕಿಸಬಹುದಾಗಿದ್ದು, ಈ ಸಹಾಯವಾಣಿಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್ ಹಾಗೂ ಚಾಲಕರುಗಳಿಗೆ ಪ್ರತೀ ಮಾಹೆಯ ವೇತನವನ್ನು ಸಕಾಲದಲ್ಲಿ ಪಾವತಿಸಿರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಪಾವತಿ, ಸಾಮಾಜಿಕ ಭದ್ರತೆ ಒದಗಿಸಿರುವ ಬಗ್ಗೆ ಅಧಿಕಾರಿಗಳು
ಪರಿಶೀಲಿಸಬೇಕು ಎಂದರು.

ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಅರ್ಹರಿಗೆ ವಸತಿ ಸೌಲಭ್ಯಗಳನ್ನು ಆದ್ಯತೆಯ ಮೇಲೆ ನೀಡಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಮಕ್ಕಳಿಗೆ ಸರ್ಕಾರದ ಆದೇಶದಂತೆ ಪ್ರತಿಭಾ ಪುರಸ್ಕಾರವನ್ನು ವಿತರಿಸಬೇಕು ಎಂದರು.

ಸ್ಥಳೀಯ ಸಂಸ್ಥೆ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿಸುವಾಗ ತಪ್ಪದೆ ಸುರಕ್ಷತಾ ಪರಿಕರಗಳನ್ನು ಧರಿಸಿ, ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ತಪ್ಪಿದ್ದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಇವುಗಳ ಬಗ್ಗೆ ಮೇಲುಸ್ತುವಾರಿಯನ್ನು ಅಧಿಕಾರಿಗಳು ವಹಿಸಬೇಕು ಎಂದರು.

ಪ್ರತಿಯೊಬ್ಬ ಪೌರಕಾರ್ಮಿಕರು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಅನುಕೂಲವಾಗಲಿದೆ. ಆದ್ದರಿಂದ ಎಲ್ಲಾ ಅಧಿಕಾರಿಗಳು ತಮ್ಮ ಪೌರಕಾರ್ಮಿಕರಿಗೆ ಹಾಗೂ ಸಫಾಯಿ ಕರ್ಮಚಾರಿಗಳಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯವರಿಗೆ ಈ
ಯೋಜನೆಯನ್ನು ಮಾಡಿಸಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎ.ಎಸ್.ಪಿ ಸುಧಾಕರ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಸಮಿತಿಯ ಸದಸ್ಯರುಗಳಾದ ಪ್ರಶಾಂತಿ, ನಾಗರಾಜ, ಕೊಟ್ರಿಬಾಯಿ ಹಾಗೂ ಶಂಕರ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ
ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...