ಉಡುಪಿ | ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಸುರಕ್ಷಾ ಬಿಮಾ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಲಿ: ಡಾ. ವಿಶಾಲ್ ಆರ್

Date:

ಸಾಮಾಜಿಕ ಭದ್ರತೆಯನ್ನು ಒದಗಿಸುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳು ಪ್ರತಿಯೊಬ್ಬರ ಕುಟುಂಬಕ್ಕೆ ಕನಿಷ್ಠ ವೆಚ್ಚದಲ್ಲಿ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಇವುಗಳನ್ನು ಪ್ರತಿಯೊಬ್ಬರೂ ಹೊಂದುವ ಹಾಗೆ ನೋಡಿಕೊಳ್ಳಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಇದರ ಕಾರ್ಯದರ್ಶಿ ಡಾ. ವಿಶಾಲ್ ಆರ್ ಸೂಚನೆ ನೀಡಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜೀವನದ ಅನಿಶ್ಚಿತತೆಯ ವಿರುದ್ಧ ರಕ್ಷಣೆಗಾಗಿಯೇ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದೆ. ಈ ಯೋಜನೆಗಳು ಸಾಮಾಜಿಕ, ಆರ್ಥಿಕ ಸ್ಥಿತಿಯ ಅಡೆತಡೆಗಳನ್ನು ಮೀರಿ ಜೀವನದ ಎಲ್ಲಾ ಹಂತಗಳಲ್ಲಿ ವ್ಯಕ್ತಿಗಳಿಗೆ ಸುರಕ್ಷತಾ ಜಾಲವನ್ನು ವಿಸ್ತರಿಸುತ್ತದೆ. ಅಲ್ಪ ವಿಮಾ ಮೊತ್ತವನ್ನು ಪಾವತಿಸುವುದರೊಂದಿಗೆ ಈ ಯೋಜನೆಗಳ ಮೂಲಕ ತ್ವರಿತವಾಗಿ ಕವರೇಜ್‌ಗಳನ್ನು ಪಡೆಯಬಹುದು, ಅನಿರೀಕ್ಷಿತ ಅಪಘಾತಗಳು ಮತ್ತು ಅಂಗವೈಕಲ್ಯಗಳ ವಿರುದ್ಧ ಆರ್ಥಿಕ ರಕ್ಷಣೆಯನ್ನು ಒದಗಿಸುತ್ತದೆ. ಇದನ್ನು ಪ್ರತಿಯೊಬ್ಬರೂ ಹೊಂದಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಹಾಗೂ ಸರಕಾರಿ ನೌಕರರು ಕಡ್ಡಾಯವಾಗಿ ಈ ಯೋಜನೆಗಳ ನೋಂದಣಿ ಮಾಡಿಸಿಕೊಳ್ಳಬೇಕು. ಒಂದೊಮ್ಮೆ ಅಪಘಾತದಲ್ಲಿ ಮರಣ ಸಂಭವಿಸಿದ್ದಲ್ಲಿ 40 ಲಕ್ಷ ಕ್ಕೂ ಹೆಚ್ಚು ಹಣ ತಮ್ಮ ಕುಟುಂಬದವರಿಗೆ ದೊರೆಯುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರುಗಳು, ಈ ವ್ಯಾಪ್ತಿಯಲ್ಲಿ ಬರುವಂತೆ ನೋಡಿಕೊಳ್ಳಬೇಕು. ಜಿಲ್ಲಾ ಅಗ್ರಗಣ್ಯ ಬ್ಯಾಂಕ್‌ನ ವ್ಯವಸ್ಥಾಪಕರು ಈ ಬಗ್ಗೆ ಅನುಕರಣೆ ಮಾಡಬೇಕೆಂದು ಸೂಚನೆ ನೀಡಿದರು.

ಪ್ರವಾಸೋದ್ಯಮವು ಸ್ಥಳೀಯ ಜನರಿಗೆ ಹೆಚ್ಚು ಉದ್ಯೋಗಾವಕಾಶಗಳನ್ನು ಸುಲಭವಾಗಿ ದೊರಕುವಂತಾಗುತ್ತದೆ. ಪೂರಕವಾಗಿ ನಮ್ಮಲ್ಲಿನ ಕಡಲ ಕಿನಾರೆಗಳು, ಧಾರ್ಮಿಕ ಕೇಂದ್ರಗಳು, ನೈಸರ್ಗಿಕ ಸ್ಥಳಗಳು ಇವೆ. ಇವು ಜನರನ್ನು ಹೆಚ್ಚು ಆಕರ್ಷಿಸುತ್ತವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

ಧಾರ್ಮಿಕ ಕೇಂದ್ರಗಳಿಗೆ ಆಗಮಿಸುವ ಭಕ್ತರುಗಳಿಗೆ ದೇವರ ದರ್ಶನ ಹಾಗೂ ಪ್ರಸಾದದ ವ್ಯವಸ್ಥೆಗಳು ವ್ಯವಸ್ಥಿತವಾಗಿ ಲಭ್ಯವಾಗುವಂತೆ ನೋಡುವುದರ ಜೊತೆಗೆ, ಅವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದ ಅವರು, ದೇವಸ್ಥಾನಗಳಲ್ಲಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕೇಂದ್ರ ಭಾಗದಲ್ಲಿರುವ ಸ್ಥಳವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅಭಿವೃದ್ಧಿ ಪಡಿಸಬೇಕು. ಇಲ್ಲಿಗೆ ಬರುವ ವಾಹನಗಳ ನಿಲ್ದಾಣಕ್ಕೆ ಅನುಕೂಲವಾಗಲು ವರ್ಟಿಕಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಕುಡಿಯುವ ನೀರನ್ನು ಒದಗಿಸುವ ಜಲ್ ಜೀವನ್ ಮಿಷನ್ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಬಾಕಿ ಉಳಿದಿರುವ ವಾರಾಹಿ ಯೋಜನೆಯ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಲು ತಿಳಿಸಿದರು.

ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇವು ಪ್ರತಿಯೊಬ್ಬರಿಗೂ ತಲುಪಬೇಕು. ಈ ಜಿಲ್ಲೆಯಲ್ಲಿ ವಿಶೇಷವಾಗಿ ಕೊರಗ ಸಮುದಾಯದವರಿಗೆ ಆರೋಗ್ಯ ಸೇವೆಗಳ ಲಾಭ ಪಡೆಯುವಂತೆ ಆಶಾ ಹಾಗೂ ಆರೋಗ್ಯ ಸಿಬ್ಬಂದಿಗಳು ನೋಡಿಕೊಳ್ಳಬೇಕು ಎಂದರು.

ಕೊಚ್ಚಿನ್ ಶಿಪ್‌ಯಾರ್ಡ್ನ ಕಾರ್ಯವ್ಯಾಪ್ತಿಗಳನ್ನು ಹೆಚ್ಚಿಸಲು ಅಗತ್ಯ ಸೌಕರ್ಯಗಳನ್ನು ನೀಡಬೇಕು. ಇಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈ ಹಿಂದೆ ಹೆಚ್ಚಿನವರು ಹೊರ ಜಿಲ್ಲೆಯವರೇ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೆ ಪೂರಕವಾಗಿ ಐ.ಟಿ.ಐ ನಲ್ಲಿ ವೃತ್ತಿ ತರಬೇತಿಗಳನ್ನು ಕಲ್ಪಿಸಲು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಕಮೀಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನರ ಕೆಲಸಗಳಿಗೆ ಅಧಿಕಾರಿಗಳು ಅಲೆದಾಡಿಸಬೇಡಿ, ನಿರ್ಲಕ್ಷ್ಯ ಸಹಿಸುವುದಿಲ್ಲ: ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ...

ಬಾಗಲಕೋಟೆ |ವಿದ್ಯಾರ್ಥಿನಿಯರ ಪ್ರತಿಭೆಗೆ ವೇದಿಕೆಯಾದ ‘ಸೃಜನ-2026’ ಮಹಿಳಾ ಸಂಭ್ರಮ

ವಿದ್ಯಾರ್ಥಿನಿಯರಲ್ಲಿನ ಸುಪ್ತ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸಕ್ಕೆ ವೇದಿಕೆ ಕಲ್ಪಿಸುವ ಉದ್ದೇಶದಿಂದ...

ಉಡುಪಿ | ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ವದ್ದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜನರನ್ನು ತಲುಪಲು ಆಯಾ ಪ್ರದೇಶದ ಭಾಷೆಯನ್ನು ಕಲಿಯುವುದು ಅತ್ಯಂತ ಅಗತ್ಯ. ತುಳು...

ಉಡುಪಿ | ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಗೆ ಕೋರ್ಟ್ ಅನುಮತಿ

ಕಳೆದ ರಾತ್ರಿ ಮಲ್ಪೆಯ ನೆರ್ಗಿಯಲ್ಲಿ ನಿಧನರಾದ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ...