ಉಡುಪಿ | ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆ ಸಿದ್ಧಪಡಿಸಿ : ಜಿಲ್ಲಾಧಿಕಾರಿ

Date:

ಪ್ರಕೃತಿದತ್ತ ಸಹಜ ಸೌಂದರ್ಯ ಹೊದಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಭವಿಷ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸಕ್ರೀಯ ಪಾಲುದಾರರು ಪರಿಸರ ಸ್ನೇಹಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನೀಲನಕಾಶೆಯನ್ನು ಸಿದ್ಧಪಡಿಸಿ, ಶೀಘ್ರವಾಗಿ ಪ್ರಸ್ತುತಪಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಕುರಿತಾಗಿ ಜಿಲ್ಲೆಯ ಪ್ರವಾಸೋದ್ಯಮ ಪಾಲುದಾರರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಿಲ್ಲೆಯಲ್ಲಿ ಕಡಲ ಕಿನಾರೆಗಳು, ರಮಣೀಯ ಪಶ್ಚಿಮ ಘಟ್ಟಗಳ ಶ್ರೇಣಿಗಳು, ಕಾನನಗಳು, ಝರಿಗಳು ಹಾಗೂ ಧಾರ್ಮಿಕ ಕ್ಷೇತ್ರಗಳು ಪ್ರಮುಖವಾಗಿದ್ದು, ಸಾವಿರಾರು ಪ್ರವಾಸಿಗರು ಆಗಮಿಸಿ ಜಿಲ್ಲೆಯ ಸೌಂದರ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ. ಯಾವುದೇ ಪ್ರವಾಸೋದ್ಯಮ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳುವ ಮುನ್ನ ಪ್ರವಾಸಿ ತಾಣಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ವಸತಿ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ನೀಡುವ ರೀತಿಯಲ್ಲಿ ಯೋಜನೆ ರೂಪಿಸಿ ಪ್ರಸ್ತುತ ಪಡಿಸಲು ಮೊದಲ ಆದ್ಯತೆ ನೀಡಬೇಕು. ಕಳೆದ ಸಭೆಯಲ್ಲಿ ಸೂಚಿಸಿದಂತೆ ರಚಿಸಲಾದ ಪಾಲುಗಾರ ತಂಡವು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗುವಂತೆ ಆಸಕ್ತ ವಿಷಯಗಳ ಬಗ್ಗೆ ವಿಸ್ತೃತ ವರದಿಯೊಂದಿಗೆ ಏಪ್ರಿಲ್ 10 ರಂದು ಪ್ರಸ್ತುತಪಡಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.

1010323720

ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಪ್ರಸ್ತುತ ಇರುವ ಪ್ರವಾಸಿ ತಾಣಗಳ ಜೊತೆಗೆ ತೆರೆ-ಮರೆಯಲ್ಲಿರುವ ಪ್ರವಾಸಿ ತಾಣಗಳ ವಿವರಗಳು, ತಂಗಲು ಅನುಕೂಲವಾಗುವಂತೆ ಸ್ಥಳೀಯವಾಗಿ ಲಭ್ಯವಿರುವ ವಸತಿ ವ್ಯವಸ್ಥೆ ಸೇರಿದಂತೆ ಮತ್ತಿತರ ಮಾಹಿತಿ ಪ್ರವಾಸಿಗರಿಗೆ ದೊರೆತಲ್ಲಿ ಇನ್ನೂ ಹೆಚ್ಚಿನ ಸಮಯವನ್ನು ಜಿಲ್ಲೆಯಲ್ಲಿ ಕಳೆಯಲು ಅವರುಗಳು ಬಯಸುತ್ತಾರೆ. ಇದರಿಂದ ಆದಾಯ ಹೆಚ್ಚುವುದರೊಂದಿಗೆ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರ ಇನ್ನಷ್ಟು ವಿಸ್ತರಣೆಗೊಳ್ಳಲಿದೆ. ಜಿಲ್ಲೆಯ ಪಾಲುದಾರರು ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಜಿಲ್ಲೆಯಲ್ಲಿ ಹೊಸ ಪ್ರವಾಸಿ ಸ್ಥಳಗಳನ್ನು ಅನ್ವೇಷಿಸಿ ಅದನ್ನು ಪ್ರವಾಸಿಗರ ಎದುರಿಗೆ ತೆರೆದಿರಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕಿದೆ. ಜಿಲ್ಲೆಗೆ ಆಗಮಿಸುವ ಶೇ. 90 ರಷ್ಟು ಪ್ರವಾಸಿಗರಿಗೆ ಜಿಲ್ಲೆಯ ಪ್ರವಾಸೋದ್ಯಮದ ಬಗ್ಗೆ ಮಾಹಿತಿ ಇಲ್ಲ. ಫೇಸ್ ಬುಕ್, ಇನ್ಸಾಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರೊಂದಿಗೆ ಜಿಲ್ಲೆಯ ಪ್ರವಾಸಿ ತಾಣಗಳ ವಿವರ ಪ್ರವಾಸಿಗರಿಗೆ ಸುಲಭವಾಗಿ ದೊರಕುವಂತಾಗಬೇಕು ಎಂದರು.

ಪ್ರವಾಸೋದ್ಯಮ ತಾಣಗಳಲ್ಲಿ ಉಡುಪಿ ಜಿಲ್ಲೆಯು ಅತ್ಯುತ್ತಮ ಪ್ರವಾಸಿ ತಾಣವಾಗಿದ್ದು, ಜಿಲ್ಲೆಯ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರಗಳು, ಜಿಲ್ಲೆಗೆ ಇರುವ ವೈಶಿಷ್ಟತೆ, ಧಾರ್ಮಿಕತೆ, ಆಹಾರ ಶೈಲಿ ಸೇರಿದಂತೆ ಮತ್ತಿತರ ವಿಶೇಷತೆಗಳ ಬಗ್ಗೆ ಸರಿಯಾದ ಪ್ರಚಾರ ದೊರೆತಲ್ಲಿ ವರ್ಷದಿಂದ ವರ್ಷಕ್ಕೆ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಹಿರಿಮೆ ಹೆಚ್ಚಲಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯಾವ ರೀತಿಯಲ್ಲಿ ಕೊಡುಗೆ ನೀಡಬಹುದು ಎಂಬ ಬಗ್ಗೆ ಸಕ್ರೀಯ ಪಾಲುದಾರರು ವಿನೂತನ ಆವಿಷ್ಕಾರಗಳ ದಾಖಲೆಗಳನ್ನು ಸಿದ್ಧಪಡಿಸಲು ಗಮನ ಹರಿಸಬೇಕಿದೆ ಎಂದರು.

ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ, ಜಿಲ್ಲೆಯ ಪ್ರವಾಸೋದ್ಯಮ ಪಾಲುದಾರರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...