ಉಡುಪಿ | ಹಸ್ತಪ್ರತಿಗಳ ಸಮೀಕ್ಷೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಎನ್‌.ಐ.ಸಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನದ ಮೂಲಕ ದೇಶದ ಜ್ಞಾನ ಸಂಪತ್ತನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ರಾಷ್ಟ್ರಾದ್ಯಂತ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯ ಪ್ರಾರಂಭಗೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಜ್ಞಾನ ಭಾರತಂ ಮಿಷನ್ ಯೋಜನೆಯಡಿ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ದಾಖಲೆಗಳ ಸಮೀಕ್ಷೆ ನಡೆಸಿ ಅವುಗಳನ್ನು ಡಿಜಿಟಲ್ ರೂಪದಲ್ಲಿ ಶಾಶ್ವತವಾಗಿ ಸಂರಕ್ಷಿಸಲಾಗುವುದು. ಸಮೀಕ್ಷೆ, ಸಂರಕ್ಷಣೆ, ಡಿಜಿಟಲೀಕರಣ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ, ಅನುವಾದ ಹಾಗೂ ಪ್ರಕಟಣೆಗಳ ಮೂಲಕ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಜನರಿಗೆ ಒಂದೇ ವೇದಿಕೆಯಲ್ಲಿ ಲಭ್ಯವಾಗುವಂತೆ ಮಾಡುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ತಾಳೆಗರಿ ಹಾಗೂ ಇತರೆ ರೂಪಗಳಲ್ಲಿ ಬರೆಯಲ್ಪಟ್ಟ ಪ್ರಾಚೀನ ವಿಜ್ಞಾನ, ಸಾಹಿತ್ಯ, ವೈದ್ಯಕೀಯ ಹಾಗೂ ಧಾರ್ಮಿಕ ಜ್ಞಾನವನ್ನು ಒಳಗೊಂಡ ಹಸ್ತಪ್ರತಿಗಳು ದೇಶದ ಅಮೂಲ್ಯ ಪರಂಪರೆಯಾಗಿವೆ. ಇವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಹಸ್ತಪ್ರತಿಗಳ ಸಮೀಕ್ಷೆಯನ್ನು ವ್ಯವಸ್ಥಿತವಾಗಿ ಮತ್ತು ಸಮಯಬದ್ಧವಾಗಿ ಕೈಗೊಳ್ಳಬೇಕು. ಮಠಗಳು, ದೇವಾಲಯಗಳು, ಆಶ್ರಮಗಳು, ಗ್ರಂಥಾಲಯಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು. ಜ್ಞಾನ ಭಾರತಂ ಆಪ್ ಮೂಲಕ ಸ್ವಯಂವಾಗಿ ಮಾಹಿತಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸಾರ್ವಜನಿಕರು ಸಮೀಕ್ಷೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.

ಈ ಸಮೀಕ್ಷೆಯಿಂದ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಹಸ್ತಪ್ರತಿಗಳ ಮಾಹಿತಿಯನ್ನು ಸಂಗ್ರಹಿಸಿ ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 40 ಕೇಂದ್ರಗಳಲ್ಲಿ 6000 ಕ್ಕೂ ಹೆಚ್ಚು ಹಸ್ತಪ್ರತಿಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ತರಬೇತಿ ಅಥವಾ ಮಾಹಿತಿ ಅಗತ್ಯವಿದ್ದಲ್ಲಿ ಜ್ಞಾನ ಭಾರತಂ ಉಡುಪಿ ಜಿಲ್ಲಾ ಸಂಯೋಜಕ ಡಾ. ಗೋಪಾಲಚಾರ್ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಿ, ಜನರು ಸ್ವಯಂ ಪ್ರೇರಿತವಾಗಿ ಈ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಾರ್ತಾಧಿಕಾರಿ ಮಂಜುನಾಥ್ ಬಿ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಜಿಲ್ಲಾ ಸಂಯೋಜಕ ಡಾ. ಗೋಪಾಲಚಾರ್ ಹಾಗೂ ಪುರಾತತ್ವ ತಜ್ಞ ಪ್ರೊ. ಟಿ. ಮುರುಗೇಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...