ಉಡುಪಿ | ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಪ್ರತಿಯೊಬ್ಬ ಅರ್ಹರು ಭಾಗವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

- Advertisement -

ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಪ್ರಜಾಪ್ರತಿನಿಧಿತ್ವ ಕಾಯ್ದೆಯಡಿ ಮತದಾರರ ಪಟ್ಟಿ ತಯಾರಿಸುವುದು ಸಂವಿಧಾನಾತ್ಮಕ ಕರ್ತವ್ಯವಾಗಿದ್ದು, ದೇಶದಾದ್ಯಂತ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. 2025ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು 2002ರ ಮತದಾರರ ಪಟ್ಟಿಯ ಕುಟುಂಬಗಳ ಸಂತತಿಗಳೊಂದಿಗೆ ಮ್ಯಾಪಿಂಗ್ ಮಾಡಿ ಲಿಂಕ್ ಮಾಡುವ ಕಾರ್ಯ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರ ಮತದಾನ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

1011420813

ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಪೂರ್ವಮುದ್ರಿತ ನಮೂನೆಗಳನ್ನು ವಿತರಿಸಲಿದ್ದಾರೆ. ಮತದಾರರು ಅವುಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಭಾವಚಿತ್ರ ಅಂಟಿಸಿ ಸಹಿಯೊಂದಿಗೆ ಒಂದು ಪ್ರತಿಯನ್ನು ಅಧಿಕಾರಿಗಳಿಗೆ ಹಿಂತಿರುಗಿಸಬೇಕು. ನಮೂನೆ ಸಲ್ಲಿಸದಿದ್ದಲ್ಲಿ ಅಧಿಕಾರಿಗಳು ಮೂರು ಬಾರಿ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.

ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಬಿಎಲ್‌ಒಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ನಮೂನೆ ಭರ್ತಿ ಮಾಡದಿರುವುದು ಅಥವಾ ಆನ್‌ಲೈನ್‌ಗೆ ಅಪ್‌ಲೋಡ್ ಆಗದಿರುವುದು ಮತದಾರರ ಪಟ್ಟಿಯಲ್ಲಿ ಹೆಸರು ಕೈತಪ್ಪುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದರು.

ಪ್ರತಿ ವರ್ಷ ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, 18 ವರ್ಷ ಪೂರೈಸಿದವರು ಹೊಸದಾಗಿ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಜಿಲ್ಲಾ ಮಾಸ್ಟರ್ ಟ್ರೈನರ್ ಗಂಗಾಧರ್ ಮಾಹಿತಿ ನೀಡಿ, ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತೆ ಹಾಗೂ ತರಬೇತಿ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಆಯುಕ್ತ ರಶ್ಮಿ, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಸೇರಿದಂತೆ ವಿವಿಧ ಅಧಿಕಾರಿಗಳು, ಬಿಎಲ್‌ಒಗಳು ಹಾಗೂ ಬಿಎಲ್‌ಎಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ...

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...