ಉಡುಪಿ | ಟೋಲ್, ಸಾಸ್ತಾನ ಮಾದರಿ ರಿಯಾಯಿತಿ ಹೆಜಮಾಡಿಗೂ ಸಿಗುತ್ತಾ?

Date:

ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ – ಶಿರೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾತಿಗೆ ಸಂಬಂಧಿಸಿದಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಹಾಗೂ ಶಿರೂರು ಸುಂಕ ವಸೂಲಾತಿ ಕೇಂದ್ರವು ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡುತ್ತಿರುವ ರಿಯಾಯಿತಿಯನ್ನು ಮುಂದುವರೆಸುತ್ತಿದ್ದು, ಹೆಜಮಾಡಿ ವ್ಯಾಪ್ತಿಯಲ್ಲಿ ಈ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಸಾಸ್ತಾನದಲ್ಲಿ 10 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ. ಈ ಮಾದರಿಯನ್ನೇ ಹೆಜಮಾಡಿಯಲ್ಲಿ ಅನುಸರಿಸಿದ್ದಲ್ಲಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆಯನ್ನು ಸ್ಥಳೀಯರು ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ವಿನಾಯಿತಿ ನೀಡುವಂತೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

1012264840

ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್‌ನ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಹಲವು ಬಾರಿ ಟೋಲ್‌ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತದೆ. ಟೋಲ್ ಪ್ಲಾಜಾ ಸುತ್ತಮುತ್ತಲಿನ ಸ್ಥಳೀಯ ವಾಹನಗಳಿಗೆ ಹಾಗೂ ನಿಗದಿತ ವ್ಯಾಪ್ತಿಯಲ್ಲಿ ಬರುವ ನೋಂದಾಯಿತ ವಾಹನಗಳಿಗೆ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ಕಲ್ಪಿಸಿದಲ್ಲಿ ಅವರುಗಳಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆ ಇದೆ.

ಈಗಾಗಲೇ ರಾಷ್ಟ್ರೀಯ ಹೆದ್ದಾರಿ 66 ರ ಕೆಲವು ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲು ಅನುಮತಿ ದೊರಕಿದ್ದು, ಇವುಗಳ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪ್ರಾರಂಬಿಸಿ, ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ವೀಸ್ ರಸ್ತೆ, ರಸ್ತೆ ರಿಪ್ಲೆಕ್ಟರ್‌ಗಳ ಅಳವಡಿಕೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿ ಹೊಂಡ-ಗುಂಡಿ ದುರಸ್ಥಿ, ಒಳಚರಂಡಿ ಕಾಮಗಾರಿ, ಜಂಕ್ಷನ್‌ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಮತ್ತಿತರ ಸುರಕ್ಷತಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತಗಳಿಗೆ ಕಡಿವಾಣ ಹಾಕಬಹುದಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಎಂದು ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಹೆಜಮಾಡಿ ಟೋಲ್ ಸಮೀಪದ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಾಜಿ ‘ಜನಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಮೀಪದ ಸ್ಥಳೀಯವಾಗಿ ವಾಸವಿರುವ ನಾವುಗಳು ನಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ದಿನದಲ್ಲಿ ಹಲವಾರು ಬಾರಿ ಟೋಲ್ ಅನ್ನು ಪ್ರವೇಶಿಸಿ ಹೋಗುವುದು ಅನಿವಾರ್ಯವಾಗಿದ್ದು, ಪ್ರತೀ ಬಾರಿಯೂ ಶುಲ್ಕ ಪಾವತಿ ಮಾಡುವುದು ಕಷ್ಟಸಾಧ್ಯ. ಸಾಸ್ತಾನಕ್ಕೆ ನೀಡುವ ವಿನಾಯಿತಿಯನ್ನು ನಮಗೂ ನೀಡಬೇಕು ಎಂದು ಒತ್ತಾಯಿಸಿದರು. ರಾ. ಹೆದ್ದಾರಿಯ ಕೆಲವೊಂದು ವ್ಯಾಪ್ತಿಯಲ್ಲಿ ಸರ್ವಿಸ್ ರೋಡ್ ನಿರ್ಮಾಣ ಮಾಡಬೇಕು. ರಸ್ತೆ ದೀಪ ಅಳವಡಿಕೆ, ಟೋಲ್‌ನ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸಹನೆ ವರ್ತಿಸುವ ಬಗ್ಗೆ, ಸೇರಿದಂತೆ ಮತ್ತಿತರ ಅಹವಾಲುಗಳನ್ನು ಸಲ್ಲಿಸಿದರು. ಸಂಯಮದಿಂದ

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಯ್ಕೆ, ಅಭಿಯಂತರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...