ಉಡುಪಿ | ಯುವಜನರನ್ನು ಮಾದಕ ದ್ರವ್ಯಗಳಿಂದ ದೂರವಿಡಲು ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Date:

ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವ್ಯಾಪಕ ಅರಿವು ಮೂಡಿಸುವುದರೊಂದಿಗೆ, ಅವರು ಈ ದುಷ್ಟ ವ್ಯಸನಗಳಿಂದ ದೂರ ಉಳಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಸಿಒಆರ್‌ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಾದಕ ದ್ರವ್ಯಗಳ ಸೇವನೆಯಿಂದ ಮನುಷ್ಯನ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗೆ ಗಂಭೀರ ಹಾನಿಯಾಗುವುದಲ್ಲದೆ, ಹಲವು ಅಪಾಯಕಾರಿ ಕಾಯಿಲೆಗಳು ಉಂಟಾಗುವ ಸಾಧ್ಯತೆ ಇದೆ. ಇದರಿಂದ ಮಾನಸಿಕ ಅಸಮತೋಲನ ಉಂಟಾಗಿ ಆರೋಗ್ಯ ಹದಗೆಡುವುದರಿಂದ, ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ ಎಂದು ಹೇಳಿದರು.

ಶಾಲೆ ಮತ್ತು ಕಾಲೇಜುಗಳಲ್ಲಿ ಮಾದಕ ದ್ರವ್ಯ ಮುಕ್ತ ವಾತಾವರಣ ನಿರ್ಮಾಣಕ್ಕೆ ಒತ್ತು ನೀಡಬೇಕಿದ್ದು, ಪ್ರಬಂಧ, ಭಾಷಣ, ಚರ್ಚಾಕೂಟ ಮತ್ತು ಕಿರುನಾಟಕಗಳಂತಹ ಕಾರ್ಯಕ್ರಮಗಳನ್ನು ನಿಯಮಿತವಾಗಿ ಆಯೋಜಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಔಷಧ ಅಂಗಡಿಗಳಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧ ಮಾರಾಟ ನಿಷೇಧಿಸಿರುವ ಕುರಿತು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿಸಿಟಿವಿ ವ್ಯವಸ್ಥೆ ಕಡ್ಡಾಯವಾಗಿದ್ದು, ಇದನ್ನು ನಿಯಮಿತವಾಗಿ ಪರಿಶೀಲನೆ ನಡೆಸಬೇಕು ಎಂದರು.

1010280623

ಕೈಗಾರಿಕಾ ಘಟಕಗಳಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ತಯಾರಿಕೆ ನಡೆಯುವ ಸಾಧ್ಯತೆ ಇರುವುದರಿಂದ ಕಾರ್ಮಿಕ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳು ತಪಾಸಣೆಗಳನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಮಾದಕ ವ್ಯಸನಕ್ಕೆ ಒಳಗಾದ ಬಳಿಕ ಅದರಿಂದ ಹೊರಬರುವುದು ಕಷ್ಟವಾಗುವುದರಿಂದ, ಮುನ್ನೆಚ್ಚರಿಕಾ ಕ್ರಮಗಳಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ “ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ”ಗಳ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಶಿಕ್ಷಣ ಇಲಾಖೆ ಕ್ರಮವಹಿಸಬೇಕು. ಈಗಾಗಲೇ 1058 ಶಾಲೆಗಳ ಪೈಕಿ 17 ಶಾಲೆಗಳ ಪ್ರಮಾಣೀಕರಣ ಪ್ರಕ್ರಿಯೆ ಬಾಕಿಯಿದ್ದು, ಅದನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

ಜಿಲ್ಲಾ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಡ್ರಗ್ ಟೆಸ್ಟ್ ಕಿಟ್‌ಗಳನ್ನು ಕಡ್ಡಾಯವಾಗಿ ಇರಿಸಿಕೊಳ್ಳಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಮಾದಕ ವಸ್ತು ಬಳಕೆ ಪತ್ತೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

“ತಂಬಾಕು ಮುಕ್ತ ಯುವ ಅಭಿಯಾನ 3.0” ಕಾರ್ಯಕ್ರಮದಡಿ ಶಾಲಾ-ಕಾಲೇಜುಗಳು, ಬಸ್ ನಿಲ್ದಾಣಗಳು ಹಾಗೂ ಮಲ್ಪೆ ಬೀಚ್ ಪ್ರದೇಶಗಳಲ್ಲಿ ಬೀದಿ ನಾಟಕ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯ ಕೆಲವು ಗ್ರಾಮಗಳನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸಲಾಗಿದ್ದು, ಉಳಿದ ಗ್ರಾಮಗಳಲ್ಲಿಯೂ ಈ ಅಭಿಯಾನವನ್ನು ವಿಸ್ತರಿಸಲು ಸ್ಥಳೀಯ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳ ಸಹಕಾರ ಪಡೆಯಬೇಕು ಎಂದು ಹೇಳಿದರು.

ಇದೇ ವೇಳೆ, ಕೋಟ್ಪಾ ಕಾಯಿದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈ ವರ್ಷ 1249ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ ₹2.18 ಲಕ್ಷಕ್ಕೂ ಹೆಚ್ಚು ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆ ಆವರಣದಲ್ಲಿಯೇ 173 ಪ್ರಕರಣಗಳಿಂದ ₹20,250 ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎಎಸ್‌ಪಿ ಸುಧಾಕರ ನಾಯಕ್, ಡಿಎಚ್‌ಒ ಡಾ. ಬಸವರಾಜ ಹುಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...