ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ ನಿವೇಶನ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕರೆ, ಕೆರೆಬೆಟ್ಟುವಿನಲ್ಲಿ 38.75 ಎಕರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ 101.19 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಭೂಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ನಿವೇಶನ ಹಂಚಿಕೆ ಪಡೆದ ಉದ್ಯಮಿಗಳು ನಿಗದಿತ ಅವಧಿಯಲ್ಲಿ ಉದ್ಯಮ ಆರಂಭಿಸದಿದ್ದರೆ, ನಿಯಮಾನುಸಾರ ಅಂತಹ ನಿವೇಶನಗಳನ್ನು ಮರುಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ಹಿಂದಿನ ಸಭೆಯಲ್ಲಿ 17 ನಿವೇಶನಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಗಿತ್ತು. ಇವುಗಳಲ್ಲಿ ಐದು ಘಟಕಗಳು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿದ್ದು, ಒಂಬತ್ತು ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಉಳಿದ ಮೂರು ನಿವೇಶನಗಳಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಪ್ರಸ್ತುತ 15ಕ್ಕೂ ಹೆಚ್ಚು ಉದ್ಯಮಿಗಳು ನಿವೇಶನಕ್ಕಾಗಿ ಬೇಡಿಕೆ ಸಲ್ಲಿಸಿರುವುದರಿಂದ ಈ ಕುರಿತು ತ್ವರಿತ ಕ್ರಮ ಅಗತ್ಯ ಎಂದು ಹೇಳಿದರು.

ಕೈಗಾರಿಕೆಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯ ತರಬೇತಿಯನ್ನು ಯುವಜನರಿಗೆ ನೀಡುವ ಕುರಿತು ಹಿಂದಿನ ಸಭೆಯಲ್ಲಿ ಚರ್ಚಿಸಿ ಸೂಚನೆ ನೀಡಿದ್ದರೂ, ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಂಶುಪಾಲರು ಕ್ರಮ ಕೈಗೊಳ್ಳದಿರುವ ಬಗ್ಗೆ ಜಿಲ್ಲಾಧಿಕಾರಿ ಅಸಮಾಧಾನ ವ್ಯಕ್ತಪಡಿಸಿದರು. ಕೈಗಾರಿಕೆಗಳಲ್ಲಿ ಉದ್ಯೋಗ ಪಡೆಯಲು ಅಗತ್ಯವಿರುವ ತರಬೇತಿಯನ್ನು ಯುವಜನರಿಗೆ ಒದಗಿಸಲು ತಕ್ಷಣ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

WhatsApp Image 2026 10 23 at 11.39.30 PM

ಜಿಲ್ಲೆಯಲ್ಲಿ ಶೇ. 91.42ರಷ್ಟು ಕನ್ನಡಿಗರಿಗೆ ಉದ್ಯೋಗ

ಡಾ. ಸರೋಜಿನಿ ಮಹಿಷಿ ವರದಿಯನ್ವಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕಾಗಿದೆ. ಜಿಲ್ಲೆಯ 38 ಸಣ್ಣ, 47 ಮಧ್ಯಮ ಹಾಗೂ ಏಳು ಬೃಹತ್ ಕೈಗಾರಿಕೆಗಳು ಸೇರಿದಂತೆ ಒಟ್ಟು 92 ಕೈಗಾರಿಕಾ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಈ ಘಟಕಗಳಲ್ಲಿ ಎ ವರ್ಗದಲ್ಲಿ 292, ಬಿ ವರ್ಗದಲ್ಲಿ 1,840, ಸಿ ವರ್ಗದಲ್ಲಿ 5,329 ಹಾಗೂ ಡಿ ವರ್ಗದಲ್ಲಿ 12,111 ಮಂದಿ ಸೇರಿದಂತೆ ಒಟ್ಟು 19,572 ಕನ್ನಡಿಗರು ಉದ್ಯೋಗದಲ್ಲಿದ್ದು, ಶೇ. 91.42ರಷ್ಟು ಉದ್ಯೋಗಾವಕಾಶ ಸ್ಥಳೀಯರಿಗೆ ದೊರೆತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯ ವಿವಿಧ ಕೈಗಾರಿಕಾ ಘಟಕಗಳಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಮೆಕ್ಯಾನಿಕಲ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ 484 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ನೇಮಕಾತಿಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಅಧಿಕಾರಿಗಳು ಹಾಗೂ ಕೈಗಾರಿಕಾ ಸಂಸ್ಥೆಗಳು ಮುಂದಾಗಬೇಕು ಎಂದು ಸೂಚಿಸಿದರು.

ಕೈಗಾರಿಕಾ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಹಾಗೂ ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಉಪನಿರ್ದೇಶಕ ಜಿ. ವಾಮನ ನಾಯ್ಕ್, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ವಸಂತ ಕಿಣಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...

ಕೋಲಾರ | ಆಗ್ನೇಯ ಪದವೀಧರರ ಕ್ಷೇತ್ರ : ಕೋಲಾರ ಜಿಲ್ಲೆಯಲ್ಲಿ ಶೇ. 76.99 ರಷ್ಟು ಮತದಾನ : ಚುನಾವಣಾಧಿಕಾರಿ ಎಂ.ಆರ್. ರವಿಕುಮಾರ್

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕೋಲಾರ ಜಿಲ್ಲೆಯಲ್ಲಿ...

ನಾಡ ದೇವತೆಯ ಬಳಿ ನನ್ನ ಅಳಲು; ವಿವೇಕಾನಂದ ಎಚ್. ಕೆ

ನಾಡ ದೇವಿ ತಾಯಿ ಚಾಮುಂಡೇಶ್ವರಿ, ನಿನಗೆ ತುಂಬು ಹೃದಯದ ಧನ್ಯವಾದಗಳು. ನಿನ್ನ...