ಉಡುಪಿ | ಗುಡುಗು, ಸಿಡಿಲು ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸಲಹೆ ಸೂಚನೆ

Date:

ಉಡುಪಿ ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಸೂಚನೆಗಳನ್ನು ನೀಡಿದೆ.

- Advertisement -

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ, ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು.

20260325 190944 0000

ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳಬೇಕು. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಅಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಬೇಕು. ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುವುದು ಸೂಕ್ತವಲ್ಲ. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರಬೇಕು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು. ಗಾಳಿಯಲ್ಲಿ ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕೊಂಬೆ/ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳಿದ್ದಲ್ಲಿ ತೆಗೆದುಹಾಕಬೇಕು.

ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು. ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.

ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು. ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡಬಾರದು.

ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ, ವಾಹನದ ಒಳಗೆ ಇರಬೇಕು.

ಮಿಂಚಿನ ಹೊಡೆತದಿಂದಾಗಿ ಅರಣ್ಯ ಪ್ರದೇಶದಲ್ಲಿ ಕಾಡ್ಲಿಚ್ಚು ಸಂಭವಿಸುವ ಸಾಧ್ಯತೆ ಇರುತ್ತದೆ ಈ ಪ್ರದೇಶದಿಂದ ದೂರವಿರಬೇಕು ಹಾಗೂ ಗಿಡ-ಮರಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸಬೇಕು.

ತುರ್ತು ಸೇವೆಗಳಿಗೆ ಟೋಲ್ ಫ್ರೀ ನಂಬರ್ 1077 ಅಥವಾ ದೂ. ಸಂಖ್ಯೆ : 0820- 2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ...

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...