ಉಡುಪಿ | SIR ಕರಡು ಮತದಾರರ ಪಟ್ಟಿ ಆಗಸ್ಟ್ 24 ರಂದು ಪ್ರಕಟ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ರ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24 ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ರ ಸಂಬಂಧ ಕರಡು ಮತದಾರರ ಪಟ್ಟಿ ಪ್ರಕಟಣೆ ಮತ್ತು ಕರಡು ಪ್ರಕಟಣೆಯ ನಂತರದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪರಿಷ್ಕೃತ SIR-2026 ವೇಳಾಪಟ್ಟಿಯಂತೆ ಆಗಸ್ಟ್ 17 ಕ್ಕೆ
ಎನ್ಯುಮರೇಷನ್ (Enumeration) ನಮೂನೆಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಆ. 24 ರಂದು ಬೆಳಿಗ್ಗೆ 11:00 ಗಂಟೆಗೆ ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುವುದು ಹಾಗೂ ಪ್ರಕಟಗೊಂಡ ನಂತರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒಂದು ಮುದ್ರಿತ ಪ್ರತಿ ಹಾಗೂ ಒಂದು ಸಾಫ್ಟ್ ಕಾಪಿ ಪಟ್ಟಿಯನ್ನು ನೀಡಲಾಗುವುದು ಎಂದರು.

1012280552

ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಮೊದಲ ಹಂತ ಮುಗಿದಿದ್ದು, ಜಿಲ್ಲೆಯ ಒಟ್ಟು 10,63,876 ಮತದಾರರ ಪೈಕಿ 10,00,545 ಮತದಾರರ ಗಣತಿ ನಮೂನೆಯನ್ನು ಡಿಜಿಟಲೈಸ್ ಮಾಡಲಾಗಿದೆ. ಉಳಿದಂತೆ ಎ.ಎಸ್.ಡಿ. ಡಿ ಪಟ್ಟಿಯಲ್ಲಿರುವ ಮೃತಪಟ್ಟ 21,262, ಶಾಶ್ವತವಾಗಿ ಸ್ಥಳಾಂತರಗೊಂಡ 29,361, ಗೈರು ಹಾಜರಾದ 4,145, ದ್ವಿಪ್ರತಿಯಲ್ಲಿ ಕಾರ್ಡ್
ಪಡೆದುಕೊಂಡ 8374 ಹಾಗೂ ಇತರೆ 189 ಮಂದಿ ಮತದಾರರು ಸೇರಿದಂತೆ ಒಟ್ಟು 63331 ಮತದಾರರು ವಿವಿಧ ಕಾರಣಗಳಿಂದ ಮತದಾರರ ಕರಡು ಪಟ್ಟಿಯಿಂದ ಹೊರಗುಳಿಯಲಿದ್ದಾರೆ ಎಂದರು.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಾದ್ಯಂತ ಒಟ್ಟು 10,63,876 ಮತದಾರರ ಪೈಕಿ 97,697 ಮತದಾರರು (ಶೇ. 9.18) ವಿಚಾರಣಾ ಹಂತಕ್ಕೆ ಒಳಪಡಲಿದ್ದಾರೆ ಹಾಗೂ ERO/AERO ಹಂತದಲ್ಲಿ ಕನಿಷ್ಠ 7 ದಿನಗಳ ಮುಂಚಿತವಾಗಿ ವಿಚಾರಣೆ ನೋಟೀಸ್ ಜಾರಿ ಮಾಡಲಾಗುತ್ತದೆ. BLO ಗಳು ಮನೆ ಮನೆಗೆ ತೆರಳಿ ನೋಟೀಸ್ ತಲುಪಿಸಿ, ಸ್ವೀಕೃತಿ ಪಡೆದು, ಸ್ವೀಕರಿಸಿದವರ ಭಾವಚಿತ್ರದೊಂದಿಗೆ ECINET / BLO ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಲಿದ್ದಾರೆ. ನಿಗದಿಪಡಿಸಿದ ಸ್ಥಳಗಳಲ್ಲಿ ವಿಚಾರಣೆ ನಡೆಸಿ ಸೂಕ್ತ ದಾಖಲೆಗಳನ್ನು ಪರಿಶೀಲಿಸಿದ ನಂತರ ERO ಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳಾದ ಭಾರತೀಯ ಜನತಾ ಪಕ್ಷದ ಚಂದ್ರ ಶೇಖರ ಪ್ರಭು, ಜೆ.ಡಿ.ಎಸ್ ನ ಜಯರಾಮ್ ಆಚಾರ್ಯ, ಕಾಂಗ್ರೇಸ್ ನ ಬಿ. ವಿಜಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...