ಉಡುಪಿ |SIR ಜಿಲ್ಲೆಯಲ್ಲಿ ಶೇ.92.55ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ, ಅ 5ರಂದು ಅಂತಿಮ ಪಟ್ಟಿ ಪ್ರಕಟ

Date:

ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ-2026 (Special Intensive Revision-2026) ಕಾರ್ಯವನ್ನು ಕೈಗೊಳ್ಳಲು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸ್ವರೂಪ ಟಿ.ಕೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

- Advertisement -

ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ಸಮಗ್ರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಈ ವಿಶೇಷ ಪರಿಷ್ಕರಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಪರಿಷ್ಕರಣೆಗೆ ಅರ್ಹತಾ ದಿನಾಂಕ (Qualifying Date) ಅಕ್ಟೋಬರ್ 1, 2026 ಎಂದು ನಿಗದಿಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಜಿಲ್ಲಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತೆ, ಸಿಬ್ಬಂದಿ ತರಬೇತಿ ಹಾಗೂ ಅಗತ್ಯ ದಾಖಲೆಗಳ ಮುದ್ರಣ ಕಾರ್ಯ ನಡೆಯಲಿದೆ. ಬಳಿಕ ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆ ಭೇಟಿ ನಡೆಸಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ. ಇದೇ ಅವಧಿಯಲ್ಲಿ ಮತದಾರರಿಗೆ ಪೂರ್ವ ಮುದ್ರಿತ ವಿವರಗಳನ್ನು ಒಳಗೊಂಡಿರುವ ಗಣತಿ ನಮೂನೆ (Pre-Filled Enumeration Form) ದ್ವಿಪ್ರತಿಯಲ್ಲಿ ವಿತರಿಸಲಾಗುತ್ತದೆ.

ಜುಲೈ 29ರಂದು ಮತಗಟ್ಟೆಗಳ ಪುನರ್‌ವಿಂಗಡಣೆ (Rationalization of Polling Stations) ಪೂರ್ಣಗೊಳ್ಳಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿ ಪ್ರಕಟವಾದ ಬಳಿಕ ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅರ್ಜಿಗಳ ಪರಿಶೀಲನೆ ಹಾಗೂ ವಿಲೇವಾರಿ ಕಾರ್ಯವು ಅಕ್ಟೋಬರ್ 3ರವರೆಗೆ ನಡೆಯಲಿದ್ದು, ಅಕ್ಟೋಬರ್ 5, 2026ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

WhatsApp Image 2026 06 02 at 6.07.02 PM

ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯ ಪೂರ್ವಭಾವಿ ಕಾರ್ಯವಾಗಿ, 2025ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ಹೊಂದಾಣಿಕೆ (Mapping) ಮಾಡುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ವೇಳೆ ಮತದಾರರ ವಿವರಗಳನ್ನು ಪರಿಶೀಲಿಸಿ, ಅವರ ಸಂತತಿ (Progeny) ಮಾಹಿತಿಯೊಂದಿಗೆ ಜೋಡಣೆ ಮಾಡಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ ಶೇ.92.55ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು, ರಾಜ್ಯದಲ್ಲಿಯೇ ಗಮನಾರ್ಹ ಸಾಧನೆ ದಾಖಲಿಸಲಾಗಿದೆ. ಉಳಿದ ಮತದಾರರ ವಿವರಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಪರಿಷ್ಕರಣೆ ಕಾರ್ಯದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ಮಾಸ್ಟರ್ ತರಬೇತುದಾರರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಈಗಾಗಲೇ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು, ಅವರ ಮೇಲ್ವಿಚಾರಕರು ಹಾಗೂ ಬೂತ್ ಮಟ್ಟದ ಏಜೆಂಟರಿಗೆ ತರಬೇತಿ ನೀಡಲಾಗುವುದು.

ಮನೆ-ಮನೆ ಭೇಟಿ ವೇಳೆ ಬೂತ್ ಮಟ್ಟದ ಅಧಿಕಾರಿಗಳು ಪ್ರತಿಯೊಂದು ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಲಿದ್ದಾರೆ. ಯಾವುದಾದರೂ ಮನೆಗೆ ಬೀಗ ಹಾಕಿರುವುದು ಅಥವಾ ನಿವಾಸಿಗಳು ಲಭ್ಯವಿಲ್ಲದಿದ್ದಲ್ಲಿ, ನಮೂನೆಯನ್ನು ಅಲ್ಲಿಯೇ ಬಿಟ್ಟು ಹೋಗಲಾಗುತ್ತದೆ. ನಂತರ ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಲು BLOಗಳು ಕನಿಷ್ಠ ಮೂರು ಬಾರಿ ಭೇಟಿ ನೀಡಲಿದ್ದಾರೆ. ಪ್ರತಿಯೊಬ್ಬ ಮತದಾರರು ತಮ್ಮ ಗಣತಿ ನಮೂನೆಯನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಮತದಾರರು ಭರ್ತಿ ಮಾಡಿದ ನಮೂನೆ ಹಾಗೂ ಅಗತ್ಯ ದಾಖಲೆಗಳನ್ನು BLOಗಳಿಗೆ ನೀಡಬಹುದು ಅಥವಾ ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಬಹುದು. ನಂತರ BLOಗಳು ದಾಖಲೆಗಳನ್ನು ಪರಿಶೀಲಿಸಿ ECI-Net ಮೊಬೈಲ್ ಅಪ್ಲಿಕೇಶನ್ ಮೂಲಕ ಅಪ್‌ಲೋಡ್ ಮಾಡಲಿದ್ದಾರೆ.

ಜಿಲ್ಲಾಧಿಕಾರಿಗಳು ತಿಳಿಸಿದಂತೆ, ಗಣತಿ ನಮೂನೆಯನ್ನು ಸಲ್ಲಿಸದ ಮತದಾರರನ್ನು Absent, Shifted, Death ಅಥವಾ Duplicate ವರ್ಗಗಳಿಗೆ ಸೇರಿಸಿ ಅವರ ವಿವರಗಳನ್ನು ತಾಲೂಕು ಕಚೇರಿ, ತಾಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸಾರ್ವಜನಿಕ ವೀಕ್ಷಣೆಗೆ ಪ್ರಕಟಿಸಲಾಗುತ್ತದೆ. ಅಂತಹ ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ.

ಮತದಾರರು ತಮ್ಮ ಹೆಸರು ಹಾಗೂ ಹಿಂದಿನ SIR ಮತದಾರರ ಪಟ್ಟಿಯಲ್ಲಿನ ಸಂಬಂಧಿಕರ ವಿವರಗಳನ್ನು ಚುನಾವಣಾ ಆಯೋಗದ ಮತದಾರರ ಪೋರ್ಟಲ್‌ನಲ್ಲಿ ಪರಿಶೀಲಿಸಿ ಗಣತಿ ನಮೂನೆಯಲ್ಲಿ ದಾಖಲಿಸಬಹುದಾಗಿದೆ. ಅಗತ್ಯವಿದ್ದಲ್ಲಿ BLOಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಹಿಂದಿನ ಮತದಾರರ ಪಟ್ಟಿಗಳ ಮಾಹಿತಿಯೊಂದಿಗೆ ಹೊಂದಾಣಿಕೆಯಾಗದ ಅಥವಾ ಅಗತ್ಯ ದಾಖಲೆಗಳು ಲಭ್ಯವಿಲ್ಲದ ಮತದಾರರಿಗೆ ಮತದಾರರ ನೋಂದಣಾಧಿಕಾರಿ (ERO) ನೋಟಿಸ್ ನೀಡಲಿದ್ದಾರೆ. ಅಂತಹ ಮತದಾರರು ತಮ್ಮ ಜನ್ಮ ದಿನಾಂಕ, ಜನ್ಮ ಸ್ಥಳ ಅಥವಾ ಪೋಷಕರ ಜನನ ವಿವರಗಳನ್ನು ದೃಢೀಕರಿಸುವ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಜನನದ ಅವಧಿ ಹಾಗೂ ಪರಿಸ್ಥಿತಿಗೆ ಅನುಗುಣವಾಗಿ ಪೋಷಕರ ದಾಖಲೆಗಳು, ಪಾಸ್‌ಪೋರ್ಟ್, ವೀಸಾ ವಿವರಗಳು ಅಥವಾ ಪೌರತ್ವ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಬಹುದು.

ಜಿಲ್ಲೆಯ ಎಲ್ಲ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಯಾವುದೇ ತಿದ್ದುಪಡಿ ಅಥವಾ ಸೇರ್ಪಡೆ ಅಗತ್ಯವಿದ್ದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವ ಮೂಲಕ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮನವಿ ಮಾಡಿದ್ದಾರೆ.

WhatsApp Image 2026 06 02 at 6.05.19 PM
WhatsApp Image 2026 06 02 at 6.06.14 PM
WhatsApp Image 2026 06 02 at 6.05.46 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...