ಉಡುಪಿ | 600ಕ್ಕೂ ಹೆಚ್ಚು ಕಾಲುಸಂಕಗಳ ಸುರಕ್ಷತೆ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

Date:

ಉಡುಪಿ ಜಿಲ್ಲೆಯಲ್ಲಿರುವ 600ಕ್ಕೂ ಅಧಿಕ ಕಾಲುಸಂಕಗಳ ಸುರಕ್ಷತೆ ಹಾಗೂ ಗುಣಮಟ್ಟವನ್ನು ತಾಂತ್ರಿಕ ತಂಡದೊಂದಿಗೆ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಥಿಲಾವಸ್ಥೆಯಲ್ಲಿರುವ ಕಾಲುಸಂಕಗಳ ಮೇಲೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸಂಚರಿಸುವುದರಿಂದ ಜೀವಹಾನಿಯ ಅಪಾಯ ಹೆಚ್ಚಿರುವುದರಿಂದ ಹೊಸ ಕಾಲುಸಂಕಗಳ ನಿರ್ಮಾಣದ ಜೊತೆಗೆ ಹಳೆಯ ಕಾಲುಸಂಕಗಳ ದುರಸ್ತಿ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ವಾಡಿಕೆಯಂತೆ 1,959 ಮಿ.ಮೀ. ಮಳೆಯಾಗಬೇಕಿದ್ದರೂ ಕೇವಲ 1,182 ಮಿ.ಮೀ. ಮಳೆಯಾಗಿದ್ದು, ಶೇ.40ರಷ್ಟು ಮಳೆ ಕೊರತೆಯಾಗಿದೆ ಎಂದು ತಿಳಿಸಿದ ಅವರು, ಪೂರ್ವ ಮುಂಗಾರು ಮಳೆಯಿಂದ ಸಂಭವಿಸಿದ ಮಾನವ ಹಾಗೂ ಜಾನುವಾರು ಜೀವಹಾನಿ ಪ್ರಕರಣಗಳ ಪರಿಹಾರ ವಿತರಣೆಯನ್ನು ಬಾಕಿ ಉಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಾನುವಾರುಗಳಿಗೆ ಮುಂದಿನ 44 ವಾರಗಳಿಗೆ ಸಾಕಾಗುವಷ್ಟು ಮೇವಿನ ದಾಸ್ತಾನು ಲಭ್ಯವಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಹಂತಹಂತವಾಗಿ ವಿತರಿಸಬೇಕು. ಜಿಲ್ಲೆಯಲ್ಲಿ 4,720 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇರುವುದರಿಂದ ಕೃತಕ ಅಭಾವ ಸೃಷ್ಟಿಯಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಿದರು.

DISASTER MEETING 2

ತೋಟಗಾರಿಕೆ ಬೆಳೆಗಳಿಗೆ ಜನವರಿಯಿಂದ ಜೂನ್‌ವರೆಗೆ 9.34 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಹಾಗೂ ತೆಂಗು ಬೆಳೆ ಹಾನಿಯಾಗಿ ₹28.64 ಲಕ್ಷ ನಷ್ಟ ಸಂಭವಿಸಿರುವ ಹಿನ್ನೆಲೆಯಲ್ಲಿ ಬೆಳೆ ಪರಿಹಾರವನ್ನು ಶೀಘ್ರ ವಿತರಿಸಬೇಕು. ಅಡಿಕೆ ಬೆಳೆಗಾರರಿಗೆ ಸಸಿಗಳ ವಿತರಣೆ, ಕೀಟ ಹಾಗೂ ಕೊಳೆರೋಗ ನಿಯಂತ್ರಣ ಕುರಿತು ತಾಲೂಕು ಮಟ್ಟದಲ್ಲಿ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.

ಮಳೆ ಕೊರತೆಯಿಂದ ಜಿಲ್ಲೆಯ 94 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 146 ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮೂಲಗಳಿಂದ ನೀರು ಪೂರೈಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಸುರಕ್ಷತೆ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ತರಗತಿಗಳನ್ನು ನಡೆಸದೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಖಾಸಗಿ ಬೋರ್‌ವೆಲ್‌, ಬಾವಿ ಹಾಗೂ ಟ್ಯಾಂಕರ್‌ಗಳನ್ನು ಬಳಸಿ ನೀರು ಪೂರೈಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...