ಉಡುಪಿ | ಬೇಸಿಗೆ ತಾಪ ಹೆಚ್ಚಳ: ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

Date:

ಪ್ರಸ್ತುತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಶಾಖದ ಹೊಡೆತದಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ ನೀಡಿದರು.

- Advertisement -

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅತೀ ಹೆಚ್ಚು ತಾಪಮಾನದಿಂದ ನಿರ್ಜಲೀಕರಣ, ಶಾಖ ಸೆಳೆತ, ಶಾಖ ಬಳಲಿಕೆ ಹಾಗೂ ಶಾಖ ಆಘಾತದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಜನರಿಗೆ ಜಾಗೃತಿ ಮೂಡಿಸಲು ಪೋಸ್ಟರ್, ಬ್ಯಾನರ್ ಹಾಗೂ ಜಿಂಗಲ್ಸ್ ಮೂಲಕ ಮಾಹಿತಿ ಹಂಚಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್ ಸೇರಿದಂತೆ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ದಾಸ್ತಾನು ಇಡಬೇಕು ಎಂದರು.

1010364599

ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಂತಹ ಜನಸಂದಣಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕೊರತೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಂಡು, ಬೋರ್‌ವೆಲ್ ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಸಲು ಸೂಚನೆ ನೀಡಿದರು. ಜೊತೆಗೆ, ಕಲುಷಿತ ನೀರು ಸರಬರಾಜಾಗದಂತೆ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಹೇಳಿದರು.

ಬೇಸಿಗೆಯಲ್ಲಿ ಅಗ್ನಿ ಅವಘಡಗಳ ಸಂಭವ ಹೆಚ್ಚಿರುವುದರಿಂದ ಆಸ್ಪತ್ರೆಗಳು, ಕೈಗಾರಿಕೆಗಳು ಮತ್ತು ಜನಸಂದಣಿ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತಾ ತಪಾಸಣೆಗಳನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಸೂಚಿಸಿದರು. ಅಗ್ನಿ ಸುರಕ್ಷತಾ ಆಡಿಟ್ ವರದಿ ವಿಳಂಬವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ತಕ್ಷಣ ಪೂರ್ಣಗೊಳಿಸಲು ಅಗ್ನಿಶಾಮಕ ಇಲಾಖೆಗೆ ಸೂಚನೆ ನೀಡಿದರು.

ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ನಿರಂತರವಾಗಿ ಸಭೆ ನಡೆಸಿ ನೀರಿನ ಸಮಸ್ಯೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ತೈಲ ಸೋರಿಕೆ ಘಟನೆಗಳಿಗೆ ತುರ್ತು ಸ್ಪಂದನೆಗಾಗಿ ಜಿಲ್ಲಾಮಟ್ಟದ ಸಮಿತಿ ಸಿದ್ಧವಾಗಿರಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ, ಪೌರಾಯುಕ್ತ ಮಹಾಂತೇಶ್ ಹಂಗರಗಿ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...