ಉಡುಪಿ | ವಾರಾಹಿ, ಸಿಆರ್‌ಝೆಡ್ ಸಮಸ್ಯೆ ಪರಿಹಾರಕ್ಕೆ, ಡಿಸಿಎಂ ಕರಾವಳಿಗೆ ಬರಬೇಕು: ಮಂಜುನಾಥ ಭಂಡಾರಿ

Date:

ವಾರಾಹಿ, ಸಿಆರ್‌ಝೆಡ್(ಕರಾವಳಿ ನಿಯಂತ್ರಣ ವಲಯ) ಸಹಿತ ಹಲವು ವಾಸ್ತವ ಸಮಸ್ಯೆಗಳನ್ನು ಅರಿಯಲು ಹಾಗೂ ಅದಕ್ಕೆ ಪರಿಹಾರ ಕಂಡುಕೊಳ್ಳಲು ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಕರಾವಳಿಗೆ ಬರಮಾಡಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

- Advertisement -

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಕಟ್ಬೆಲ್ತೂರು ಗ್ರಾ.ಪಂ.ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕರಾವಳಿಯ ಪ್ರತ್ಯೇಕ ನೀತಿ ಬಗ್ಗೆ ಬೆಂಗಳೂರಿನಲ್ಲಿ ಕುಳಿತು ತೀರ್ಮಾನಿಸಲಾಗುವುದಿಲ್ಲ. ವಾರಾಹಿ ವಿಚಾರ ವಿಧಾನ ಪರಿಷತ್‌ನಲ್ಲಿ ಸ್ಪಷ್ಟವಾಗಿ 3ರಿಂದ 4 ಬಾರಿ ಉಪಮುಖ್ಯಮಂತ್ರಿಗಳ ಬಳಿ ಧ್ವನಿಯೆತ್ತಿದ್ದು, ಕರಾವಳಿ ವಿಚಾರದಲ್ಲಿ ವಾಸ್ತವ ಸ್ಥಿತಿ ತಿಳಿಯಲು ಇಲ್ಲಿಯೇ ಬಂದು ಸಭೆ ನಡೆಸುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

“ಗ್ರಾ.ಪಂ ವ್ಯಾಪ್ತಿಯ ಅಂಗನವಾಡಿ, ಕಟ್ಟಡಗಳು, ಲೈಬ್ರರಿ ಸಹಿತ ಮೂಲಭೂತ ಸಮಸ್ಯೆಗಳನ್ನು ಅರಿತು ಅದನ್ನು ಸರಿಪಡಿಸಲು ಬೇಕಾದ ಸಂಬಂಧಿತ ಅಧಿಕಾರಿಗಳಿಗೆ ಮಾತನಾಡಿ, ಅಗತ್ಯ ಕ್ರಮವಹಿಸಲು ಸೂಚಿಸಲಾಗುತ್ತದೆ. ಮೂರ್ನಾಲ್ಕು ಗ್ರಾ.ಪಂ. ಸೇರಿದ ಸಮಸ್ಯೆಗಳ ಬಗ್ಗೆ ಅರಿಯಲಾಗುತ್ತದೆ. ಹಾಗೆಯೇ 9/11, ವೇತನ, ವಿದ್ಯುತ್ ಸಹಿತ ರಾಜ್ಯಮಟ್ಟದ ಸಮಸ್ಯೆಗಳ ಬಗ್ಗೆ ವಿಧಾನಪರಿಷತ್‌ನಲ್ಲಿ ಧ್ವನಿಯೆತ್ತಿ, ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ” ಎಂದರು.

ಹಲವು ಗ್ರಾಪಂ ಭೇಟಿ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಪಕ್ಷದ ಪ್ರಮುಖರಾದ ಎಸ್ ರಾಜು ಪೂಜಾರಿ, ಎಸ್ ಪ್ರಕಾಶ್‌ಚಂದ್ರ ಶೆಟ್ಟಿ, ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಪ್ರಸನ್ನ ಶೆಟ್ಟಿ ಕೆರಾಡಿ, ಉದಯ ಕುರ್ಮಾ ಶೆಟ್ಟಿ ವಂಡ್ಸೆ, ಆನಂದ ಬಿಲ್ಲವ, ಸುದೀಶ್ ಶೆಟ್ಟಿ, ಶರತ್ ಕುರ್ಮಾ ಶೆಟ್ಟಿ, ಯಾಸಿನ್ ಸಾಹೇಬ್, ತಲ್ಲೂರು ಗ್ರಾ.ಪಂ. ಅಧ್ಯಕ್ಷ ಗಿರೀಶ್ ನಾಯ್ಕ್, ಉಪಾಧ್ಯಕ್ಷೆ ಚಂದ್ರಮತಿ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುರ್ಮಾ ತಲ್ಲೂರು, ಸದಸ್ಯರು, ಪಿಡಿಒ, ಸಿಬಂದಿ, ಹೆಮ್ಮಾಡಿ ಗ್ರಾಪಂ ಅಧ್ಯಕ್ಷೆ ಶಕೀಲಾ, ಉಪಾಧ್ಯಕ್ಷ ಶೋಭಾ ಡಿ.ಕಾಂಚನ್, ಮಾಜಿ ಅಧ್ಯಕ್ಷರಾದ ಸತ್ಯನಾರಾಯಣ ರಾವ್ ಸುಧಾಕರ, ನೇತ್ರಾವತಿ ಸದಸ್ಯರು, ಪಿಡಿಒ ಭಾವನಾ, ಕಟ್ ಬೆಲ್ತೂರು ಗ್ರಾಪಂ ಅಧ್ಯಕ್ಷೆ ವೈಶಾಲಿ, ಉಪಾಧಕ್ಷ ರಾಮ ಶೆಟ್ಟಿ, ಸ್ಥಾಯಿ ನಾಗರಾಜ್ ಪುತ್ರನ್, ಸದಸ್ಯರು, ಪ್ರಮುಖರಾದ ಶರತ್ ಕುಮಾರ್ ಶೆಟ್ಟಿ, ನಾಗರಾಜ ಪುತ್ರನ್, ರವಿ, ಶೇರ್ಖ ಬಳೆಗಾರ್, ಅಶೋಕ್ ಬಳೆಗಾರ್, ಚಂದ್ರ ಶೆಟ್ಟಿ, ನಾಡ ಗ್ರಾ.ಪಂ. ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷ ಪೃಥ್ವಿಕ್ ಶೆಟ್ಟಿ, ಪಿಡಿಒ ಹರೀಶ್, ಸದಸ್ಯರು ಇದ್ದರು.


ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ವಾರಾಹಿ ಯೋಜನೆ, ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳು ಮತ್ತು ಇತರ ಸ್ಥಳೀಯ ಸಮಸ್ಯೆಗಳು ದೀರ್ಘಕಾಲದಿಂದಲೂ ಚರ್ಚೆಯಲ್ಲಿವೆ. ವಾರಾಹಿ ನದಿ ಮೇಲಿನ ಜಲವಿದ್ಯುತ್ ಮತ್ತು ನೀರಾವರಿ ಯೋಜನೆಯು ಪರಿಸರ ಅನುಮತಿಗಳು ಮತ್ತು ಸ್ಥಳೀಯರ ಹಕ್ಕುಗಳಿಂದ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದೆ, ಆದರೆ CRZ ನಿಯಮಗಳು ಕರಾವಳಿ ಅಭಿವೃದ್ಧಿ, ಮೀನುಗಾರಿಕೆ ಮತ್ತು ನಿರ್ಮಾಣ ಕಾರ್ಯಗಳನ್ನು ನಿಯಂತ್ರಿಸುತ್ತವೆ, ಇದರಿಂದ ಸ್ಥಳೀಯರು ಹಲವು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕರಾವಳಿ ಪ್ರದೇಶಕ್ಕೆ ಆಹ್ವಾನಿಸಿ, ಸ್ಥಳದಲ್ಲಿ ಸಮಸ್ಯೆಗಳನ್ನು ನೇರವಾಗಿ ಅರಿತುಕೊಂಡು ಪರಿಹಾರ ಕಂಡುಕೊಳ್ಳುವಂತೆ ಕೋರಿದ್ದಾರೆ. ಇದು ಕರಾವಳಿ ಜನರ ವಾಸ್ತವಿಕ ಸಮಸ್ಯೆಗಳಿಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನವಾಗಿದೆ. ಬೆಂಗಳೂರಿನಲ್ಲಿ ಕುಳಿತು ತೀರ್ಮಾನಗಳನ್ನು ತೆಗೆದುಕೊಳ್ಳುವುದಕ್ಕಿಂತ ಸ್ಥಳೀಯ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀತಿ ರೂಪಿಸುವುದು ಹೆಚ್ಚು ಪರಿಣಾಮಕಾರಿ ಎಂಬುದು ಮಂಜುನಾಥ್ ಭಂಡಾರಿ ಅವರ ಅಭಿಪ್ರಾಯ.

ಈ ಸುದ್ದಿ ಓದಿದ್ದೀರಾ? ಮಂಗಳೂರು ಜೈಲು ತಪಾಸಣೆ ವೇಳೆ ನಿಷೇಧಿತ ವಸ್ತುಗಳ ಪತ್ತೆ: 2 ಮೊಬೈಲ್, ಸಿಮ್ ಕಾರ್ಡ್, ಚಾರ್ಜರ್ ವಶ

ಈ ಹೇಳಿಕೆಯು ಕರಾವಳಿ ಪ್ರದೇಶದ ಅಭಿವೃದ್ಧಿ ಮತ್ತು ಸಮಸ್ಯೆಗಳಿಗೆ ಸರ್ಕಾರದಲ್ಲಿ ಒತ್ತಡ ಹೇರುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಇಂತಹ ಆಹ್ವಾನಗಳು ಸ್ಥಳೀಯ ಪ್ರತಿನಿಧಿಗಳು ಮತ್ತು ಸರ್ಕಾರದ ನಡುವೆ ಸಂವಾದವನ್ನು ಹೆಚ್ಚಿಸಿ, ಶೀಘ್ರ ಪರಿಹಾರಕ್ಕೆ ದಾರಿ ಮಾಡಿಕೊಡಬಹುದು. ಕರಾವಳಿ ಜನತೆಯ ನಿರೀಕ್ಷೆಯಂತೆ ಈ ಭೇಟಿ ನಡೆದರೆ‌ ಸಕಾರಾತ್ಮಕ ಬೆಳವಣಿಗೆಗಳು ಸಾಧ್ಯವಾಗಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...