ಉಡುಪಿ | ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮುಂಬೈ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಬಂಧನ, ಪೊಲೀಸರ ಗುಂಡೇಟಿಗೆ ಗಾಯ

Date:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35)ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಕಳೆದ ಆ.7ರಂದು ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕರಾದ ಡೇವಿಡ್ ಡಿಸೋಜಾ ಅವರನ್ನು ಮೋಟಾರು ಸೈಕಲ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಒಬ್ಬನು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪ್ರಕರಣದ ತನಿಖೆಯ ಭಾಗವಾಗಿ ಕುಂದಾಪುರ ಠಾಣೆಯ ಪೊಲೀಸ್ ಉಪನಿರೀಕ್ಷಕ ನಂಜ ನಾಯಕ್, ಕೊಲ್ಲೂರು ಠಾಣೆಯ ಪೊಲೀಸ್ ಉಪನಿರೀಕ್ಷಕ ವಿನಯ್ ಹಾಗೂ ತಂಡವು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಡೇವಿಡ್ ಹತ್ಯೆ ಪ್ರಕರಣದಲ್ಲಿ ಮೂವರು ಶೂಟರ್‌ಗಳನ್ನು ಕಳುಹಿಸಿದ್ದ ಆರೋಪ ಹೊತ್ತಿರುವ ಅನುಜ್ ಪಾಟೀಲ್‌ನನ್ನು ಬಂಧಿಸಿದೆ.

ಬಂಧಿತನನ್ನು ಕರೆತರುತ್ತಿದ್ದ ವೇಳೆ ಆತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪಿಎಸ್‌ಐ ವಿನಯ್ ಅವರ ಸೇವಾ ಆಯುಧವನ್ನು ಕಸಿದು ಗುಂಡು ಹಾರಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪಿಎಸ್‌ಐ ನಂಜ ನಾಯಕ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಗಾಯಗೊಂಡ ಅನುಜ್ ಪಾಟೀಲ್‌ನನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಅನುಜ್ ಪಾಟೀಲ್ 2017ರಿಂದ ತಲೆಮರೆಸಿಕೊಂಡು ಮುಂಬೈ ಕೇಂದ್ರವಾಗಿ ಕಾರ್ಯಾಚರಿಸುತ್ತಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಎಂಸಿಒಸಿಎ (MCOCA) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಒಟ್ಟು 11 ಕ್ರಿಮಿನಲ್ ಪ್ರಕರಣಗಳು ಇವೆ. ಅವುಗಳಲ್ಲಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆ (Arms Act) ಸಂಬಂಧಿತವಾಗಿವೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...