ದೀಪಾವಳಿ ಪ್ರಕರಣ: ವಿದ್ಯಾರ್ಥಿಗಳ ಆರೋಪಕ್ಕೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಸ್ಪಷ್ಟನೆ

Date:

ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ದೀಪಾವಳಿ ದಿನದ ಘಟನೆಗೆ ಸಂಬಂಧಿಸಿ ಪೊಲೀಸರ ವಿರುದ್ಧ ಮಾಡಿರುವ ದೌರ್ಜನ್ಯದ ಆರೋಪಗಳಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸ್ಪಷ್ಟನೆ ನೀಡಿದ್ದಾರೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಪ್ರಕರಣ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ವಿಡಿಯೋ ದಾಖಲೆಗಳು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಆಧಾರದ ಮೇಲೆ ಕಾನೂನು ಉಲ್ಲಂಘಿಸಿದ ಆರೋಪಿತರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪೊಲೀಸರು ಹಾಸ್ಟೆಲ್‌ಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಉಡುಪಿ ಡಿವೈಎಸ್ಪಿ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ಈ ಕುರಿತು ಮನವಿ ಸಲ್ಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ತನಿಖಾಧಿಕಾರಿಯಾಗಿ ಮಣಿಪಾಲ ಠಾಣೆಯ ಪಿಎಸ್‌ಐ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಗಂಭೀರ ಆರೋಪ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಘಟನೆಗೆ ಸಂಬಂಧಿಸಿ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದರು. ರಸ್ತೆಯಲ್ಲಿ ಕಿಡಿಗೇಡಿಗಳು ನಡೆಸಿದ ಕೃತ್ಯಕ್ಕೆ ಯಾವುದೇ ಸಂಬಂಧವಿಲ್ಲದ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬುದು ಅವರ ಆರೋಪವಾಗಿದೆ.

ವಿದ್ಯಾರ್ಥಿಗಳ ಫ್ಲಾಟ್‌ಗಳಿಗೆ ನುಗ್ಗಿದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಈ ಕುರಿತು ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ತಕ್ಷಣ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ನ.10ರಂದು ವಿದ್ಯಾರ್ಥಿಗಳ ಕೊಠಡಿಗಳಿಗೆ ನುಗ್ಗಿದ ಪೊಲೀಸರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಿರಂತರ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಆರೋಪಗಳ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸ್ ಇಲಾಖೆಯ ಸ್ಪಷ್ಟನೆ ಹಾಗೂ ವಿದ್ಯಾರ್ಥಿಗಳ ದೂರಿನಿಂದ ಪ್ರಕರಣ ಮತ್ತಷ್ಟು ಗಮನ ಸೆಳೆದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ನ. 25ರಂದು ಅರಣ್ಯ ಸಚಿವರೊಂದಿಗೆ ಸಭೆ; ಟಿ.ಡಿ ರಾಜೇಗೌಡ 

ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ರೈತ ಸಾವನಪ್ಪಿರುವ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು....

ವಿಜಯಪುರ |ಜನರ ಕೆಲಸಕ್ಕೆ ಅಲೆದಾಡಿಸುವ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ: ಉಪಲೋಕಾಯುಕ್ತ ಫಣೀಂದ್ರ ಎಚ್ಚರಿಕೆ

ಸಾರ್ವಜನಿಕರ ಅಗತ್ಯ ಸೇವೆಗಳನ್ನು ಸಕಾಲದಲ್ಲಿ ಒದಗಿಸದೇ, ಕರ್ತವ್ಯ ನಿರ್ವಹಣೆಯಲ್ಲಿ ವಿಳಂಬ ಮಾಡಿದರೆ...

ರಾಯಚೂರು | ಹದಗೆಟ್ಟ ರಸ್ತೆ, ಕೆಟ್ಟ ಬಸ್‌ಗಳಿಂದ ಪ್ರಯಾಣಿಕರಿಗೆ ತೊಂದರೆ: ರಸ್ತೆ ದುರಸ್ತಿ, 50 ಹೊಸ ಬಸ್‌ಗಳಿಗಾಗಿ ಸಿಪಿಐಎಂ ಆಗ್ರಹ

ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸುಗಮ ಸಾರಿಗೆ...

ಉಡುಪಿ | ನಂಬಿಕೆ, ವಿಶ್ವಾಸದಿಂದ ಸಹಕಾರ ರಂಗ ಸುದೃಢ: ಕಾರ್ತಿಕ್ ಕುಮಾರ್

ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನೀಡುತ್ತಿರುವ ಸಹಕಾರಿ ರಂಗವು ಜನರ ನಂಬಿಕೆ ಮತ್ತು...