ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಇಮೇಲ್‌; ಶೋಧದ ಬಳಿಕ ಹುಸಿ ಎಂದು ದೃಢ

Date:

ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಮತ್ತೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ಪೊಲೀಸರು ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ನ್ಯಾಯಾಲಯದ ಆವರಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಇದೊಂದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ.

- Advertisement -

ಜೂನ್ 26ರ ರಾತ್ರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ಇಮೇಲ್‌ಗೆ ಇಂಗ್ಲಿಷ್ ಭಾಷೆಯಲ್ಲಿ ನ್ಯಾಯಾಲಯದ ಕೋಣೆಯಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಶನಿವಾರ ಬೆಳಿಗ್ಗೆ ನ್ಯಾಯಾಲಯದ ಸಿಬ್ಬಂದಿ ಇಮೇಲ್ ಪರಿಶೀಲಿಸಿದ ವೇಳೆ ಈ ಸಂದೇಶ ಗಮನಕ್ಕೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...
Advertisements

ತಕ್ಷಣವೇ ಉಡುಪಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯದ ಎಲ್ಲಾ ನ್ಯಾಯಾಲಯ ಕೊಠಡಿಗಳು, ಕಚೇರಿಗಳು, ಶೌಚಾಲಯಗಳು ಹಾಗೂ ನ್ಯಾಯಾಲಯದ ಆವರಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಗ್ರ ತಪಾಸಣೆ ನಡೆಸಿತು.

Advertisements

ಶೋಧ ಕಾರ್ಯಾಚರಣೆಯಲ್ಲಿ ಯಾವುದೇ ಸ್ಫೋಟಕ ಅಥವಾ ಸಂಶಯಾಸ್ಪದ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದರು. ಶೋಧ ಕಾರ್ಯ ನಡೆಯುತ್ತಿದ್ದರೂ ನ್ಯಾಯಾಲಯದ ಕಲಾಪಗಳು ಎಂದಿನಂತೆ ಮುಂದುವರಿದವು.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬೆದರಿಕೆ ಇಮೇಲ್ ಕಳುಹಿಸಿದವರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಗಮನಾರ್ಹವಾಗಿ, ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ಜೂನ್ 21ರಂದು ಕೂಡ ಬಂದಿದ್ದು, ಮರುದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅದೂ ಹುಸಿ ಎಂದು ದೃಢಪಟ್ಟಿತ್ತು. ಪದೇ ಪದೇ ನ್ಯಾಯಾಲಯವನ್ನು ಗುರಿಯಾಗಿಸಿಕೊಂಡು ಇಂತಹ ಬೆದರಿಕೆ ಸಂದೇಶಗಳು ಬರುತ್ತಿರುವುದಕ್ಕೆ ವಕೀಲರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...