ಉಡುಪಿ | 109 ಅಕ್ರಮ ಹೋಂಸ್ಟೇ, 21 ರೆಸಾರ್ಟ್‌ಗಳಿಗೆ ಬೀಗ ಜಡಿದ ಜಿಲ್ಲಾಡಳಿತ!

Date:

ಉಡುಪಿ ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳಿಗೆ ಬೀಗ ಜಡಿಯಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅಕ್ರಮ ರೆಸಾರ್ಟ್‌ಗಳು, ಹೋಂಸ್ಟೇಗಳು ಹಾಗೂ ಸಂಸ್ಕರಿಸದ ತ್ಯಾಜ್ಯ ಮತ್ತು ಕೊಳಚೆ ನೀರನ್ನು ಸಮುದ್ರಕ್ಕೆ ಹರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದರ ಭಾಗವಾಗಿ ಅವರು ಇತ್ತೀಚೆಗೆ ಉಡುಪಿ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

- Advertisement -

ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್, ಉಡುಪಿ ಜಿಲ್ಲಾ ಪೊಲೀಸ್ ಉಪಾಧೀಕ್ಷಕರು ಹಾಗೂ ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಅಧಿಕಾರಿಗಳು ಉಪ ಲೋಕಾಯುಕ್ತರ ಮುಂದೆ ಜಂಟಿ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ನಿಯಮ ಉಲ್ಲಂಘಿಸಿ ನಡೆಸುತ್ತಿದ್ದ 109 ಹೋಂಸ್ಟೇಗಳು ಹಾಗೂ 21 ರೆಸಾರ್ಟ್‌ಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ, ಅಗತ್ಯ ಅನುಮತಿಗಳನ್ನು ಪಡೆದು 227 ಹೋಂಸ್ಟೇಗಳು ಮತ್ತು 42 ರೆಸಾರ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ.

ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡ ಉಪ ಲೋಕಾಯುಕ್ತರು, ಹೋಂಸ್ಟೇಗಳು ಮತ್ತು ಬೆಡ್ ಅಂಡ್ ಬ್ರೇಕ್‌ಫಾಸ್ಟ್ ವಸತಿಗೃಹಗಳ ಕಾರ್ಯಾಚರಣೆ, ಸುರಕ್ಷತೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರವು 2026ರ ಏಪ್ರಿಲ್ 29ರಂದು ಹೊರಡಿಸಿದ ಮಾರ್ಗಸೂಚಿಗಳು ಮತ್ತು ಏಪ್ರಿಲ್ 27ರ ಸುತ್ತೋಲೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದ್ದಾರೆ.

ಸಂಸ್ಕರಿಸದ ಕೊಳಚೆ ನೀರು ನೇರವಾಗಿ ಸಮುದ್ರಕ್ಕೆ ಸೇರುತ್ತಿರುವುದರಿಂದ ಪರಿಸರ ಮತ್ತು ಸಮುದ್ರ ಜೀವಿಗಳ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಉಪ ಲೋಕಾಯುಕ್ತರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕೊಳಚೆ ನೀರು ಇಂದ್ರಾಣಿ ನದಿಗೆ ಸೇರಿ, ಕಲ್ಮಾಡಿ ಸೇತುವೆ ಹತ್ತಿರ ಮತ್ತು ಮಲ್ಪೆಯ ಬಾಪು ತೋಟ ಬಳಿ ಸಮುದ್ರ ಸೇರುತ್ತಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 29ಕ್ಕೆ ನಿಗದಿಪಡಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ...

ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

"ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ,...