ಉಡುಪಿ | ಎಸ್.ಐ. ಆರ್ : ಮತದಾರರ ನೋಂದಣಿ, ನೋಟೀಸ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವರ

Date:

ಮುಖ್ಯ ಚುನಾವಣಾಧಿಕಾರಿಗಳ (CEO) ನಿರ್ದೇಶನದಂತೆ, ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2026 (SIR), ಮತದಾರರ ನೋಂದಣಿ ಮತ್ತು ನೋಟೀಸ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇತ್ತೀಚಿನ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಲಾಗಿದೆ.

- Advertisement -

ಜಿಲ್ಲೆಯಲ್ಲಿ 10,00,754 ಮತದಾರರಿದ್ದು, ಇವರಲ್ಲಿ 4,84,236 ಪುರುಷರು, 5,16,509 ಮಹಿಳೆಯರು, 9 ತೃತೀಯ ಲಿಂಗಿಗಳು ಇದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 1,244 ಮತದಾನ ಕೇಂದ್ರಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...
1012639579

ಜಿಲ್ಲೆಗೆ ಸಂಬಂಧಿಸಿದಂತೆ 97,673 ನೋಟೀಸ್‌ಗಳನ್ನು
ಸೃಜಿಸಲಾಗಿದ್ದು, 84,120 ನೋಟೀಸ್ ಗಳನ್ನು ವಿತರಿಸಿ, ಶೇ. 86.12 ರಷ್ಟು ಸಾಧನೆ ಮಾಡಲಾಗಿರುತ್ತದೆ. 13,553 ನೋಟೀಸ್‌ಗಳು ವಿತರಣೆಗೆ ಬಾಕಿ ಇರುತ್ತವೆ. ವಿತರಿಸಲಾದ
ನೋಟಿಸ್ ಗಳಲ್ಲಿ 18,371 ವಿಚಾರಣೆಗಳು ಪೂರ್ಣಗೊಂಡಿದ್ದು, 65,749 ನೋಟೀಸ್ ಗಳ ವಿಚಾರಣೆಗಳು
ಬಾಕಿ ಇರುತ್ತವೆ.

ವಿಚಾರಣೆ ನಡೆಸಲು ಅಕ್ಟೋಬರ್ 12 ಕೊನೆಯ ದಿನ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಅಕ್ಟೋಬರ್ 22 ಕೊನೆಯ ದಿನವಾಗಿದ್ದು, ಅಕ್ಟೋಬರ್ 27 ರಂದು
ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ.

ಜಿಲ್ಲೆಯಲ್ಲಿ ಒಟ್ಟು 44,841 ಅರ್ಜಿಗಳು (ನಮೂನೆ 6, 6A, 7, ಮತ್ತು 8) ಸ್ವೀಕೃತವಾಗಿದ್ದು, ಇದರಲ್ಲಿ ನಮೂನೆ 6 (ಹೊಸ ಮತದಾರರ ಸೇರ್ಪಡೆ)ಗೆ 10,231 ಅರ್ಜಿಗಳು, ನಮೂನೆ 6A (ಅನಿವಾಸಿ ಭಾರತೀಯರು) ಗೆ 321 ಅರ್ಜಿಗಳು, ನಮೂನೆ 7 (ಆಕ್ಷೇಪಣೆ ಹೆಸರು ತೆಗೆದುಹಾಕುವುದು) ಗೆ 744 ಅರ್ಜಿಗಳು ಹಾಗೂ ನಮೂನೆ 8 (locating ತಿದ್ದುಪಡಿ/ಬದಲಿ EPIC/ವಿಕಲಚೇತನರ ಗುರುತಿಸುವಿಕೆ)ಗೆ 33,545 ಅರ್ಜಿಗಳು ಸೇರಿವೆ.

ಅರ್ಹ ನಾಗರಿಕರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು, ಜಿಲ್ಲೆಯ ಎಲ್ಲಾ ಮತದಾನ ಕೇಂದ್ರಗಳಲ್ಲಿ ಎರಡನೇ ಹಂತದ ವಿಶೇಷ ಅಭಿಯಾನವನ್ನು ಸೆಪ್ಟೆಂಬರ್ 19 ( ಶನಿವಾರ ) ಮತ್ತು 20 ( ಭಾನುವಾರ )ರಂದು ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 1, 2026 ಕ್ಕೆ 18 ವರ್ಷ ಭರ್ತಿಯಾಗುವ ಎಲ್ಲಾ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಹಿರಿಯ ನಾಗರಿಕರು, ವಿಕಲಚೇತನರು ಮತ್ತು (NRI)ಅನಿವಾಸಿ ಭಾರತೀಯರಿಗೆ ವಿಶೇಷ ರಿಯಾಯಿತಿ :
ಹಿರಿಯ ನಾಗರಿಕರು, ವಿಕಲ ಚೇತನರು, ಅನಾರೋಗ್ಯ ಪೀಡಿತರು ಹಾಗೂ ಅನಿವಾಸಿ ಭಾರತೀಯರ ಪರವಾಗಿ ಅವರ ಕುಟುಂಬದ ಪ್ರೌಢ ಸದಸ್ಯರೊಬ್ಬರು ನಂಬಂಧಪಟ್ಟ ERO/AERO ಕಚೇರಿಗೆ ಖುದ್ದಾಗಿ ಹಾಜರಾಗಿ ಅಗತ್ಯ ದಾಖಲೆಗಳು/ಮಾಹಿತಿಯನ್ನು ಸಲ್ಲಿಸಿ ನೋಟೀಸ್
ವಿಲೇವಾರಿ ಮಾಡಲು ಅವಕಾಶ ನೀಡಲಾಗಿದೆ.

1012634601

ಮತದಾನ ಕೇಂದ್ರಗಳ ಪುನರಚನೆ ಹಾಗೂ ಸರಣಿ ಸಂಖ್ಯೆಗಳ ಬದಲಾವಣೆಯಿಂದಾಗಿ, ಕೆಲ ಮತದಾರರ ಭಾಗದ (Part Number) ಅಥವಾ ಕ್ರಮ ಸಂಖ್ಯೆ (Serial Number) ಬದಲಾಗಿರಬಹುದಾಗಿದ್ದು, ಹಳೆಯ ಭಾಗದ ಸಂಖ್ಯೆಯಲ್ಲಿ ಹೆಸರು ಸಿಗದ ಮತದಾರರು ತಮ್ಮ EPIC ಸಂಖ್ಯೆಯನ್ನು ಬಳಸಿ voters.eci.gov.in ವೆಬ್‌ ಸೈಟ್ ಅಥವಾ ECINET ಮೊಬೈಲ್ ಆಪ್ ಮೂಲಕ ತಮ್ಮ ಹೆಸರನ್ನು ಹುಡುಕಬಹುದಾಗಿದೆ.

ಅರ್ಜಿ (Form 6) ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ voters.eci.gov.in ವೆಬ್‌ ಸೈಟ್ ಅಥವಾ
ECINET ಆಪ್ ಮೂಲಕ ಅಗತ್ಯ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ (ವಯಸ್ಸು ಮತ್ತು ವಿಳಾಸದ ಪುರಾವೆ) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ
ಭರ್ತಿ ಮಾಡಿದ ನಮೂನೆ 6 ಮತ್ತು ಘೋಷಣಾ ಪತ್ರವನ್ನು ಅಗತ್ಯ ದಾಖಲೆಗಳೊಂದಿಗೆ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಅಥವಾ ERO/AERO ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 1950 / 1800 4255 1950 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...