ಉಡುಪಿ | ವರನಟ ಡಾ. ರಾಜ್‌ಕುಮಾರ್ ಬದುಕು ಎಲ್ಲರಿಗೂ ಆದರ್ಶ : ಶಾಸಕ ಯಶ್‌ಪಾಲ್ ಸುವರ್ಣ

Date:

ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಜಯಂತಿ ಕಾರ್ಯಕ್ರಮವು ಅಪರೂಪದ ಹಾಗೂ ಅರ್ಥಪೂರ್ಣ ಆಚರಣೆಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಸಭಾಂಗಣದಲ್ಲಿ ನಡೆದ ಡಾ.ರಾಜ್‌ಕುಮಾರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಒಬ್ಬ ಚಿತ್ರ ನಟನ ಜಯಂತಿಯನ್ನು ದೇಶದ ಮಟ್ಟದಲ್ಲಿ ಆಚರಿಸುವುದು ಅಪರೂಪದ ಸಂಗತಿ. ಡಾ.ರಾಜ್‌ಕುಮಾರ್ ಅವರು ಕೇವಲ ನಟರಲ್ಲ, ಸರಳ-ಸಜ್ಜನ ವ್ಯಕ್ತಿತ್ವದ ಮಾದರಿ. ಅವರ ಸರಳ ಜೀವನ ಶೈಲಿ ಮತ್ತು ಮಾನವೀಯ ಮೌಲ್ಯಗಳನ್ನು ಅನುಕರಣೆ ಮಾಡುವುದು ಇಂದಿನ ಸಮಾಜಕ್ಕೆ ಅಗತ್ಯವೆಂದು ಶಾಸಕರು ಹೇಳಿದರು.

ಡಾ.ರಾಜ್ ಕುಮಾರ್ ಜಯಂತಿ 15

ಅವರು ಅಪಾರ ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದೆ ಉಳಿದಿರುವ ಮೇರುನಟರಾಗಿದ್ದು, ಅವರ ಕಂಠಸಿರಿ ಹಾಗೂ ನಟನಾ ಸಾಮರ್ಥ್ಯ ಜನರನ್ನು ಮಂತ್ರಮುಗ್ಧರನ್ನಾಗಿಸಿತು. ನಿಜ ಜೀವನದಲ್ಲೂ ಹೇಗೆ ನಡೆದುಕೊಳ್ಳಬೇಕು ಎಂಬುದಕ್ಕೆ ಅವರು ಆದರ್ಶಪ್ರಾಯ ವ್ಯಕ್ತಿ. ಯುವಜನತೆ ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಸರೂರು ರಾಜೀವ್ ಶೆಟ್ಟಿ ಮಾತನಾಡಿ, ಡಾ.ರಾಜ್‌ಕುಮಾರ್ ಅವರ ಸಾಧನೆಗಳ ಸರಮಾಲೆ ಅವರನ್ನು ಇಂದಿಗೂ ಜನಮನಗಳಲ್ಲಿ ಜೀವಂತವಾಗಿರಿಸಿದೆ. ಅವರ ಸರಳತೆ ಮತ್ತು ಕನ್ನಡ ನಾಡು-ನುಡಿಯ ಮೇಲಿನ ಪ್ರೀತಿ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದರು.

ಖ್ಯಾತ ಕಲಾವಿದೆ ಪ್ರತಿಮಾ ನಾಯಕ್ ಉಪನ್ಯಾಸ ನೀಡಿ, ಡಾ.ರಾಜ್‌ಕುಮಾರ್ ಅವರ ಜೀವನವೇ ಒಂದು ದಂತಕಥೆ. ಗುಬ್ಬಿ ವೀರಣ್ಣ ನಾಟಕ ಕಂಪನಿ ಯಿಂದ ತಮ್ಮ ಕಲಾಜೀವನ ಆರಂಭಿಸಿ ಬೇಡರ ಕಣ್ಣಪ್ಪ ಚಿತ್ರದ ಮೂಲಕ ಸಿನಿರಂಗ ಪ್ರವೇಶಿಸಿದ ಅವರು ಭಕ್ತಿ, ಪೌರಾಣಿಕ ಹಾಗೂ ಐತಿಹಾಸಿಕ ಪಾತ್ರಗಳಲ್ಲಿ ಅಮೋಘ ಅಭಿನಯ ತೋರಿದ್ದಾರೆ. ಅವರ ಗಾನ ಕೌಶಲ್ಯ ಮತ್ತು ಭಾವಪೂರ್ಣ ಗಾಯನ ಇಂದಿಗೂ ಜನಮನಗಳಲ್ಲಿ ಜೀವಂತವಾಗಿದೆ ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ರಾಜ್‌ಕುಮಾರ್ ಅವರು ಐದು ದಶಕಗಳ ಕಾಲ 212 ಚಿತ್ರಗಳಲ್ಲಿ ಅಭಿನಯಿಸಿ ಕನ್ನಡಿಗರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾದ ಅವರು ಪ್ರಶಸ್ತಿ ಮೊತ್ತವನ್ನು ಕನ್ನಡ ಸಾಹಿತ್ಯ ಪರಿಷತ್ ಗೆ ದೇಣಿಗೆ ನೀಡುವ ಮೂಲಕ ತಮ್ಮ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವಿದ್ಯಾರ್ಥಿನಿಯರಾದ ದಿಶಾ ಮತ್ತು ದಿಯಾ ಡಾ.ರಾಜ್‌ಕುಮಾರ್ ಅವರ ಚಿತ್ರಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...