ಎಲ್‌ಐಸಿ ಮೈಕ್ರೋ ಇನ್ಸೂರೆನ್ಸ್ ವಂಚನೆ ಪ್ರಕರಣ : 57 ಸಾವಿರಕ್ಕೂ ಹೆಚ್ಚು ಪಾಲಿಸಿದಾರರಿಗೆ ಪರಿಹಾರ

Date:

ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ) ವತಿಯಿಂದ ಜಾರಿಗೊಂಡಿದ್ದ ಮೈಕ್ರೋ ಇನ್ಸೂರೆನ್ಸ್ ಯೋಜನೆಯಲ್ಲಿ ನಡೆದ ಭಾರಿ ವಂಚನೆ ಪ್ರಕರಣದಲ್ಲಿ, ಚಿಕ್ಕಮಗಳೂರು ಜಿಲ್ಲೆಯ 57 ಸಾವಿರಕ್ಕೂ ಅಧಿಕ ಪಾಲಿಸಿದಾರರು ಕೊನೆಗೂ ನ್ಯಾಯಾಲಯದ ಆದೇಶದಂತೆ ಪರಿಹಾರ ಪಡೆದಿದ್ದಾರೆ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ ಶ್ಯಾನುಭಾಗ್ ತಿಳಿಸಿದ್ದಾರೆ.

- Advertisement -

ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿರುವ ಪ್ರತಿಷ್ಠಾನದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯವನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2005ರಲ್ಲಿ ಎಲ್‌ಐಸಿ ಪರಿಚಯಿಸಿದ ಮೈಕ್ರೋ ಇನ್ಸೂರೆನ್ಸ್ ಯೋಜನೆ 2009-10ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆ, ಅರಸಿಕೆರೆ, ಮೂಡಿಗೆರೆ, ಎನ್‌.ಆರ್‌.ಪುರ ಸೇರಿದಂತೆ ವಿವಿಧ ತಾಲೂಕುಗಳ 200ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾರಿಗೊಂಡಿತ್ತು. ಈ ಯೋಜನೆಯಲ್ಲಿ 58 ಸಾವಿರಕ್ಕೂ ಅಧಿಕ ಜನರು ಪಾಲಿಸಿಗಳನ್ನು ಪಡೆದಿದ್ದರು.

ಪಾಲಿಸಿದಾರರಿಂದ ಪ್ರತಿ ತಿಂಗಳು ಸಂಗ್ರಹಿಸಲಾದ ಪ್ರೀಮಿಯಂ ಹಣವನ್ನು ಅಂಗನವಾಡಿ ಕಾರ್ಯಕರ್ತೆಯರು ಎಲ್‌ಐಸಿಯಿಂದ ನೇಮಿಸಲ್ಪಟ್ಟ ಸಮನ್ವಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಶುಭೋದಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಮುಕ್ಕಣ್ಣೇಶ್ವರಿ ಯುವತಿಮಂಡಲಗಳಿಗೆ ಹಸ್ತಾಂತರಿಸುತ್ತಿದ್ದರು. ಆದರೆ ಈ ಸಂಸ್ಥೆಗಳು ಕೋಟ್ಯಾಂತರ ರೂಪಾಯಿ ಹಣವನ್ನು ದುರುಪಯೋಗ ಮಾಡಿಕೊಂಡಿರುವುದು 2013ರಲ್ಲಿ ಒಂದು ಕ್ಲೈಮ್ ಅರ್ಜಿಯಿಂದ ಬಹಿರಂಗವಾಯಿತು.

ಈ ಘಟನೆ ನಂತರ, ವಿಷಯ ತಿಳಿಯದ ಪಾಲಿಸಿದಾರರು ಅಂಗನವಾಡಿ ಕಾರ್ಯಕರ್ತೆಯರನ್ನೇ ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ತರೀಕೆರೆ ಮತ್ತು ಕಡೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

2016ರಲ್ಲಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಹಸ್ತಕ್ಷೇಪದಿಂದ ಪ್ರಕರಣದ ತನಿಖೆ ವೇಗ ಪಡೆದು, ಎಲ್‌ಐಸಿ ಅಧಿಕಾರಿಗಳು ಕೂಡ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ದೂರು ದಾಖಲಿಸಿದರು.

ಈ ಪ್ರಕರಣದಲ್ಲಿ ಸುಮಾರು 60 ಮಂದಿ ಗ್ರಾಹಕರು ಚಿಕ್ಕಮಗಳೂರು ಜಿಲ್ಲಾ ಬಳಕೆದಾರರ ಆಯೋಗದಲ್ಲಿ ದಾವೆ ಹೂಡಿದ್ದು, ಆಯೋಗವು ಎಲ್‌ಐಸಿಯ ನಿರ್ಲಕ್ಷ್ಯವನ್ನು ಗುರುತಿಸಿ, ಪಾಲಿಸಿದಾರರಿಗೆ ಪ್ರೀಮಿಯಂ ಮೊತ್ತವನ್ನು ದಂಡ ಸಮೇತ ಹಿಂದಿರುಗಿಸಲು ಹಾಗೂ ದಾವೆಯ ವೆಚ್ಚವನ್ನು ಭರಿಸಲು ಆದೇಶ ನೀಡಿತು. ಇದರಂತೆ ಎಲ್‌ಐಸಿ ಹಣವನ್ನು ಹಿಂದಿರುಗಿಸಿತು.

ಉಳಿದ ಪಾಲಿಸಿದಾರರ ಪರವಾಗಿ ರಾಜ್ಯ ಬಳಕೆದಾರರ ಆಯೋಗದಲ್ಲಿ ಹೂಡಲಾದ ದಾವೆಯ ಬಳಿಕ, ಸುಮಾರು 10 ವರ್ಷಗಳ ನಂತರ ಎಲ್‌ಐಸಿ ತನ್ನ ತಪ್ಪನ್ನು ಒಪ್ಪಿಕೊಂಡು ಪರಿಹಾರ ನೀಡಲು ಒಪ್ಪಿಕೊಂಡಿದೆ. ಈಗಾಗಲೇ ಪಾಲಿಸಿದಾರರು ತಮ್ಮ ಪ್ರೀಮಿಯಂ ಹಣದೊಂದಿಗೆ ದಾವೆ ವೆಚ್ಚ ಹಾಗೂ ತಲಾ ₹3,000 ಪರಿಹಾರವನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಅನ್ನಪೂರ್ಣ, ಆಶಾ, ಪೂರ್ಣಿಮಾ, ಸುಮಿತ್ರಾ, ಕವಿತಾ, ಆಶಾ, ಪವಿತ್ರಾ ದೇವನೂರು ಹಾಗೂ ರಘು ಆನೆಗೆರೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...