ಉಡುಪಿ | ಎಆರ್‌ಎಸ್‌ಐ ನಾಗೇಶ್‌ ಎಂ ನಿಧನ

Date:

ಉಡುಪಿ ಡಿಎಆರ್‌ನಲ್ಲಿ ಎಆರ್‌ಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗೇಶ್‌ ಎಂ ಅವರು ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದರು.

- Advertisement -

ಕಳೆದ ಒಂದು ವರ್ಷದಿಂದ ಕ್ಯಾನ್ಸರ್‌ ಕಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪದ್ಮನೂರು, ಕಿನ್ನಿಗೋಳಿ ನಿವಾಸಿಯಾಗಿದ್ದ ಅವರು ಪ್ರಸ್ತುತ ಉಡುಪಿಯಲ್ಲಿ ವಾಸವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ನಾಗೇಶ್‌ ಎಂ ಅವರು 1996ರ ಅಕ್ಟೋಬರ್ 10 ರಂದು ಮಂಗಳೂರಿನ ಡಿಎಆರ್‌ನಲ್ಲಿ ಸೇವೆಗೆ ನೇಮಕಗೊಂಡಿದ್ದರು. ಬಳಿಕ ಹೊಸದಾಗಿ ಉಡುಪಿ ಜಿಲ್ಲೆ ರಚನೆಯಾದ ಸಂದರ್ಭದಲ್ಲಿ ಉಡುಪಿ ಜಿಲ್ಲೆಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದರು. 2016 ರ ಡಿಸೆಂಬರ್ 17 ರಂದು ಪದೋನ್ನತಿ ಹೊಂದಿ ಎಆರ್‌ಎಸ್‌ಐ ಹುದ್ದೆಗೆ ಏರಿಕೆಯಾಗಿದ್ದರು. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...