ಉಡುಪಿ | ದಲಿತ ಮುಖಂಡನ ಮೇಲೆ ಹಲ್ಲೆ ! ಚಿಕಿತ್ಸೆ ನಿರಾಕರಿಸಿದ ವೈದ್ಯ ಗುರುದತ್ ?

Date:

ಉಡುಪಿ ನಗರದ ನಿಟ್ಟೂರು ಸಮೀಪದ ಕೊಡಂಕೂರು ತಿರುವಿನ ಬಳಿ ಶನಿವಾರ ರಾತ್ರಿ ದಲಿತ ಮುಖಂಡ ಮುರಳಿಯವರ ಮೇಲೆ ನಡೆದ ಹಲ್ಲೆ ಪ್ರಕರಣದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದರೆಂದು ಆರೋಪಿಸಲಾದ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ವೈದ್ಯ ಗುರುದತ್ತ್ ಅವರನ್ನು ತಕ್ಷಣ ಸೇವೆಯಿಂದ ಅಮಾನತು ಮಾಡಿ ವಜಾಗೊಳಿಸುವಂತೆ ಅಂಬೇಡ್ಕರ್ ಯುವಸೇನೆ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಹಾಗೂ ಮುಖಂಡ ಹರೀಶ್ ಸಲ್ಯಾನ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅನಾಮಿಕರು ಬಾಲಕನೊಬ್ಬನಿಗೆ ಕಾರಿನೊಳಗೆ ಹಲ್ಲೆ ನಡೆಸುತ್ತಿದ್ದುದನ್ನು ಖಂಡಿಸಿ, “ಯಾವುದೇ ಅನ್ಯಾಯವಾಗಿದ್ದರೆ ಪೊಲೀಸರಿಗೆ ದೂರು ನೀಡಿ” ಎಂದು ಹೇಳಿದ್ದಕ್ಕೆ ಕಾರಿನಲ್ಲಿದ್ದ ನಾಲ್ವರು ಹೊರಬಂದು ದಲಿತ ಮುಖಂಡ ಮುರಳಿಯವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಮರದ ತುಂಡಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಮುರಳಿಯವರನ್ನು ಸ್ಥಳೀಯರು ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಾಗ, “ಮದ್ದು ಕೊಡುತ್ತೇನೆ, ದಾಖಲಿಸುವುದಿಲ್ಲ. ನನಗೆ ನ್ಯಾಯಾಲಯಕ್ಕೆ ಹೋಗುವ ಕೆಲಸವಲ್ಲ” ಎಂದು ವೈದ್ಯ ಗುರುದತ್ತ್ ಉಡಾಫೆಯಾಗಿ ವರ್ತಿಸಿ, ಎಂಎಲ್‌ಸಿ ಮಾಡಿ ವಾಪಸ್ ಕಳುಹಿಸಿದ್ದಾರೆ ಎಂದು ಅಂಬೇಡ್ಕರ್ ಯುವಸೇನೆ ಆರೋಪಿಸಿದೆ.

ಈ ವಿಚಾರವನ್ನು ಪ್ರಶ್ನಿಸಿದ ಸಂಘಟನೆಯ ಮುಖಂಡರೊಂದಿಗೂ ವೈದ್ಯರು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಜನಸಾಮಾನ್ಯರಿಗೆ ಸ್ಪಂದಿಸಿ ಸೂಕ್ತ ಚಿಕಿತ್ಸೆ ನೀಡಬೇಕಾದ ವೈದ್ಯರು ಪಾನಮತ್ತರಂತೆ ವರ್ತಿಸಿರುವುದು ಖಂಡನೀಯವಾಗಿದ್ದು, ವೈದ್ಯಕೀಯ ವೃತ್ತಿಗೆ ಅಪಚಾರ ಎಸಗಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅಂಬೇಡ್ಕರ್ ಯುವಸೇನೆ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...