ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

Date:

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕಳುವಾಗಿದ್ದ ಬಸ್‌ನ್ನು ಉಡುಪಿ ನಗರ ಠಾಣೆ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

- Advertisement -

ಸೆಪ್ಟೆಂಬರ್ 28ರಂದು ರಾತ್ರಿ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ KA-20-AD-1931 ನೋಂದಣಿ ಸಂಖ್ಯೆಯ ಶ್ರೀ ದುರ್ಗಾಂಬ ಬಸ್‌ನ್ನು ನಿಲ್ಲಿಸಲಾಗಿತ್ತು. ಬಸ್‌ನ ನಿರ್ವಾಹಕರಾದ ಕುಂದಾಪುರ ಕಟ್‌ಬೆಳ್ತೂರಿನ ಕೃಷ್ಣ (51) ಅವರು ರಾತ್ರಿ ಸುಮಾರು 10 ಗಂಟೆಗೆ ಚಾಲಕರೊಂದಿಗೆ ಸ್ಕೂಟರ್‌ನಲ್ಲಿ ಅಲ್ಲಿಂದ ತೆರಳಿದ್ದರು. ಸೆಪ್ಟೆಂಬರ್ 29ರಂದು ಬೆಳಗ್ಗೆ ಎಂದಿನಂತೆ ಬಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ಬಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಯಾರೋ ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ಬಸ್‌ನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕೃಷ್ಣ ಅವರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳು ಹಾಗೂ ಕಳುವಾದ ಸೊತ್ತಿನ ಪತ್ತೆಗೆ ತನಿಖೆ ಕೈಗೊಂಡಿದ್ದರು.

ತನಿಖೆಯ ವೇಳೆ, ಸೆಪ್ಟೆಂಬರ್ 29ರಂದು ಮುಂಜಾನೆ ಸುಮಾರು 2 ಗಂಟೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಕೂಟರ್‌ನಲ್ಲಿ ಚಿಟ್ಪಾಡಿಯ ಹನುಮಾನ್ ಗ್ಯಾರೇಜ್ ಬಳಿ ಬಂದಿರುವ ಮಾಹಿತಿ ಲಭ್ಯವಾಗಿದೆ. ಬಳಿಕ ಅವರು ಬಸ್‌ನ್ನು ಕಳವು ಮಾಡಿಕೊಂಡು ಹೋಗಿ ಮುದುರಂಗಡಿ ಸಮೀಪದ ಮುದ್ದಾಡಿ ಎಂಬ ಹಾಡಿಯಲ್ಲಿ ಬಿಟ್ಟುಹೋಗಿರುವುದು ಪತ್ತೆಯಾಗಿದೆ.

ಪೊಲೀಸರು ಕಳುವಾಗಿದ್ದ ಬಸ್‌ನ್ನು ಪತ್ತೆಹಚ್ಚಿ ಸ್ವಾಧೀನಪಡಿಸಿಕೊಂಡಿದ್ದು, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...