ಉಡುಪಿ | ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್; ಶಾಂತಿ, ಸೌಹಾರ್ದತೆಗೆ ಧರ್ಮಗುರುಗಳ ಕರೆ

Date:

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬ(ಈದುಲ್ ಅಝಾ)ವನ್ನು ಸಂಭ್ರಮ, ಸಡಗರದಿಂದ ಗುರುವಾರ ಆಚರಿಸಿದರು.

- Advertisement -

ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ‌್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡರು.

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ‌್ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಲಾಯಿತು.

ಧರ್ಮ ಗುರುಗಳು ತಮ್ಮ ಈದ್ ಸಂದೇಶದಲ್ಲಿ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ಬಗ್ಗೆ ಒತ್ತಿ ಹೇಳಿದರು. ಯಾವುದೇ ಹಿತಕರ ಘಟನೆಗಳಿಗೆ ಅವಕಾಶ ನೀಡದೆ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗ ದಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.

ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಬಹುತೇಕ ಮಸೀದಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

1011042170

‘ಹಬ್ಬ ಸೌಹಾರ್ದತೆಯ ಸಂಕೇತವಾಗಿರಬೇಕು’

ಉಡುಪಿ ಬ್ರಹ್ಮಗಿರಿಯ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಒಬೈದುರ್ ರಹ್ಮಾನ್ ನದ್ವಿ ತಮ್ಮ ಈದ್ ಸಂದೇಶದಲ್ಲಿ ಹಬ್ಬವು ಶಾಂತಿ ಸೌಹಾರ್ದತೆಯ ಸಂಕೇತವಾಗಿರಬೇಕು. ಈ ಮೂಲಕ ಮುಸ್ಲಿಂ ಬಾಂಧವರು ಮಾದರಿಯಾಗಿ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು

ಹೆಲ್ಮೆಟ್ ಹಾಗೂ ಲೈಸನ್ಸ್ ಇಲ್ಲದೆ ಅತಿವೇಗವಾಗಿ ದ್ವಿಚಕ್ರ ವಾಹನ ಹಾಗೂ ಕಾರು ಚಲಾಯಿಸುವ, ಅಲ್ಲದೆ ಮಾದಕ ದ್ರವ್ಯ ಸೇವಿಸುವ ಬಗ್ಗೆ ತಮ್ಮ ಮಕ್ಕಳ ಮೇಲೆ ಪೋಷಕರು ವಿಶೇಷ ಗಮನವಿಟ್ಟು ನಿಗಾ ವಹಿಸಬೇಕು. ಅಪಘಾತಗಳನ್ನು ತಪ್ಪಿಸಲು ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.

ಮಸೀದಿಯ ಅಧ್ಯಕ್ಷರರಾದ ಜಕ್ರಿಯ ಅಸ್ಸದಿ, ಸಾಮಾಜಿಕ ಕಾರ್ಯಕರ್ತ ಹಾಗೂ ಮಸೀದಿಯ ಕಾರ್ಯದರ್ಶಿ ಎಂ. ಇಕ್ಬಾಲ್ ಮನ್ನಾ ಎಲ್ಲಾ ಮುಸ್ಲಿಮ್ ಬಾಂಧವರಿಗೆ ಈದ್ ಶುಭಾಶಯವನ್ನು ಸಲ್ಲಿಸಿದರು.

ಈದ್ ಉಲ್ ಅಝ್ಹಾ ಮುಬಾರಕ್

ಈ ಪವಿತ್ರ ಈದ್ ಉಲ್ ಅಝ್ಹಾ ಹಬ್ಬದ ಶುಭ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳು ಮತ್ತು ಅಭಿನಂದನೆಗಳು.

ಅಲ್ಲಾಹನು ಈ ಪವಿತ್ರ ಹಬ್ಬದ ಮೂಲಕ ನಿಮ್ಮ ಹಾಗೂ ನಿಮ್ಮ ಕುಟುಂಬಗಳ ಜೀವನದಲ್ಲಿ ಶಾಂತಿ, ಸಂತೋಷ, ಐಕ್ಯತೆ ಮತ್ತು ಅಪಾರ ಅನುಗ್ರಹಗಳನ್ನು ಕರುಣಿಸಲಿ. ನಮ್ಮ ಕರ್ಬಾನಿ, ಪ್ರಾರ್ಥನೆಗಳು ಹಾಗೂ ಸತ್ಕಾರ್ಯಗಳನ್ನು ಅಲ್ಲಾಹನು ಸ್ವೀಕರಿಸಿ, ಸಮಸ್ತ ಉಮ್ಮತ್ ಮೇಲೆ ತನ್ನ ಅಪಾರ ಕರುಣೆಯನ್ನು ಸುರಿಸಲಿ. ಆಮೀನ್.

ಲೋಕದಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವ ನೆಲೆಸಲೆಂದು ನಾವು ಪ್ರಾರ್ಥಿಸೋಣ. ಅಲ್ಲಾಹನು ಎಲ್ಲಾ ಜನರಿಗೆ ಸುರಕ್ಷತೆ, ಸಮೃದ್ಧಿ ಮತ್ತು ನೆಮ್ಮದಿಯನ್ನು ಅನುಗ್ರಹಿಸಲಿ. ಎಲ್ಲೆಡೆ ಇರುವ ಸಂಕಷ್ಟಗಳು ಮತ್ತು ಸಂಘರ್ಷಗಳನ್ನು ನಿವಾರಿಸಿ, ಮಾನವಕುಲಕ್ಕೆ ದಯೆ, ನ್ಯಾಯ ಮತ್ತು ಕರುಣೆಯ ಆಶೀರ್ವಾದವನ್ನು ನೀಡಲಿ. ಆಮೀನ್.

ಮೊಹಮ್ಮದ್ ಮೌಲಾ
ಅಧ್ಯಕ್ಷರು, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...