ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

Date:

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು.

- Advertisement -
1010105483

ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...
1010105481

ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ‌್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

1010105482

ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡರು

Untitled design 20260315 161436 0000
ಜಾಹಿರಾತು

ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ‌್ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಲಾಯಿತು

ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.

1010105484

ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಬಹುತೇಕ ಮಸೀದಿಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

“ಪೋಷಕರು ತಮ್ಮ ಮಕ್ಕಳನ್ನು ಮಾದಕ ವಸ್ತು ಬಲಿಯಾಗದಂತೆ ಎಚ್ಚರ ವಹಿಸಬೇಕು. ಇಂದು ಅತಿ ವೇಗ ಅಜಾಗ್ರತೆ ವಾಹನ ಚಲಾವಣೆಯ ಪರಿಣಾಮ ರಸ್ತೆ ಅಪಘಾತಕ್ಕೆ ಯುವಜನತೆ ಬಲಿಯಾಗುತ್ತಿದ್ದು ಈ ಬಗ್ಗೆ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಎಲ್ಲರೊಂದಿಗೆ ಬೆರೆತು ಹಬ್ಬವನ್ನು ಆಚರಿಸುವ ಮೂಲಕ ಸೌಹರ್ದತೆಯನ್ನು ಎತ್ತಿ ಹಿಡಿಯಬೇಕು”

  • ಒಬೇದುರ‌್ರಹ್ಮಾನ್ ನದ್ವಿ, ಇಮಾಮ್, ಹಾಶಿಮಿ ಮಸೀದಿ, ನಾಯರ್ ಕೆರೆ, ಬ್ರಹ್ಮಗಿರಿ

.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...