ಉಡುಪಿ | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು ಹಾಗೂ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಪೂರ್ಣಾವಧಿ ಅಥವಾ ಅರೆಕಾಲಿಕ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ತಮ್ಮ ಮಾಧ್ಯಮ ಸಂಸ್ಥೆಯ ಸಂಪಾದಕರು, ಸ್ಥಾನಿಕ ಸಂಪಾದಕರು ಅಥವಾ ಮುಖ್ಯಸ್ಥರಿಂದ ಶಿಫಾರಸ್ಸು ಪತ್ರ ಹಾಗೂ ಸೇವಾ ಪ್ರಮಾಣ ಪತ್ರವನ್ನು ಪಡೆದು ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

2025ರ ಸೆಪ್ಟೆಂಬರ್ 12ರ ನಂತರ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹಿಂದಿನ ಮಾರ್ಗಸೂಚಿಯಲ್ಲಿ ಕಡ್ಡಾಯವಾಗಿದ್ದ 11 ತಿಂಗಳ ವೇತನ ಪತ್ರ ಸಲ್ಲಿಕೆ ಷರತ್ತನ್ನು ಸಡಿಲಿಸಲಾಗಿದ್ದು, ಅದರ ಬದಲಿಗೆ ಸಂಸ್ಥೆಯ ಸಂಪಾದಕರು ಅಥವಾ ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿ ಹಾಗೂ ಲಗತ್ತಿಸಲಾದ ದಾಖಲೆಗಳ ಒಂದು ಪ್ರತಿಯನ್ನು ಸಂಬಂಧಿಸಿದ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿ ಪರಿಶೀಲಿಸಿ ಅರ್ಹರಿಗೆ ಉಚಿತ ಬಸ್ ಪಾಸ್ ಮಂಜೂರು ಮಾಡಲಿದೆ.

ತಾಲ್ಲೂಕು ಮಟ್ಟದ ಪತ್ರಕರ್ತರು ಸುದ್ದಿ ಸಂಗ್ರಹಣೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು 2026ರ ಜೂನ್ 20ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...