ಉಡುಪಿ | ಪಾಳುಬಿದ್ದಿರುವ ಗಾಂಧಿ ಭವನ ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

Date:

ಉಡುಪಿ ನಗರದ ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಸನಿಹ ಇರುವ, ಗಾಂಧಿ ಭವನ ಹಲವು ಸಮಯದಿಂದ ಹಾಳುಬಿದ್ದು ದುರ್ನಾತ ಬೀರುತ್ತಿದೆ. ಕಂಪೌಂಡ್ ಸುತ್ತಲು ಗಿಡಗಂಟಿ, ಹುಲ್ಲುಗಳು ಬೆಳೆದುನಿಂತಿವೆ. ಗೋಡೆಗಳಿಗೆ ಬಳಿದ ಬಣ್ಣ ಮಾಸಿಹೋಗಿ, ಪಾಚಿಬೆಳೆದುಕೊಂಡಿದೆ. ಕಿಟಕಿಯ, ಪ್ರವೇಶ ದ್ವಾರದ ಬಾಗಿಲುಗಳು ತೆರೆದುಕೊಂಡು, ಅನೈತಿಕ ಚಟುವಟಿಕೆಗಳು ನಡೆಯಲು ಮುಕ್ತ ಅವಕಾಶದ ಸ್ಥಳವಾಗಿ ಮಾರ್ಪಟ್ಟಿದೆ. ನೀರಿನ ಟ್ಯಾಂಕಿನ ಮುಚ್ಚಳ ತೆರೆದುಕೊಂಡಿದ್ದು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಕಂಪೌಂಡಿನ ಒಳಾಂಗಣ ಮತ್ತು ಸಭಾಭವನದ ಒಳಾಂಗಣದಲ್ಲಿ ಕಸ ತ್ಯಾಜ್ಯಗಳು ಚದುರಿಕೊಂಡಿವೆ. ಶೌಚಾಲಯದ ಬಾಗಿಲು ಮುರಿದುಬಿದ್ದಿದೆ.

- Advertisement -

ಯಾವೊಂದು ರಕ್ಷಣೆ ಇಲ್ಲಿ ಇಲ್ಲದಿರುವುದರಿಂದ ಕಿಡಿಗೇಡಿಗಳು ಪೋಕರಿಗಳ ಅಡ್ಡೆಯಾಗಿದೆ. ಜುಗಾರಿ ಆಡುವರು, ಮದ್ಯವ್ಯಸನಿಗಳು ಪಾನಮತ್ತರಾಗಿ ಮಲಗುತ್ತಿರುವುದು ಕಂಡುಬಂದಿದೆ. ಗಾಂಧಿ ಭವನದಲ್ಲಿಯೇ ಗಾಂಧೀಜಿಯ ತತ್ವ ಸಿದ್ಧಾಂತಗಳಿಗೆ ಚ್ಯುತಿ ಬರುತ್ತಿರುವುದು ವಿಪರ್ಯಾಸದ ಸಂಗತಿ ಎನಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಗರದ ಹೃದಯ ಭಾಗದಲ್ಲಿರುವ ನಗರಸಭೆಯ ಆಸ್ತಿಯಾಗಿರುವ ಈ ಗಾಂಧಿ ಭವನವನ್ನು ಆಧಾರ್ ಕಾರ್ಡ್, ಮತದಾನ ಗುರುತಿನ ಚೀಟಿ ತಿದ್ದುಪಡಿ, ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗಳು, ಪೋಲಿಯೋ ಲಸಿಕೆ ಮೊದಲಾದ ಸಾರ್ವಜನಿಕ ಸೇವಾ ಚಟುವಟಿಕೆಗಳು ನಡೆಯಲು ಉಪಯೋಗಿಸಲಾಗುತಿತ್ತು. ಅಮೂಲ್ಯವಾದ ಸಾರ್ವಜನಿಕ ಆಸ್ತಿ ಹಾಳುಬಿದ್ದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿದೆ. ತಕ್ಷಣ ನಗರಾಡಳಿತ ಅಧಿಕಾರಿಗಳು ಗಾಂಧಿ ಭವನದಲ್ಲಿ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಗಾಂಧಿ ಭವನವನ್ನು ದುರಸ್ತಿಪಡಿಸಿ ಸಾಮಾಜಿಕ ಚಟುವಟಿಕೆಗಳಿಗೆ ಬಳಸುವಂತೆ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಪ್ರೇಮಾನಂದ ಕಲ್ಮಾಡಿ ಆಗ್ರಹಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...