ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

Date:

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಕಳೆದ 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರವನ್ನು ತೆರವುಗೊಳಿಸುವಂತೆ ಶಾಲಾ ಆಡಳಿತ ಮಂಡಳಿ ಒತ್ತಡ ಹೇರುತ್ತಿರುವುದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಂಗನವಾಡಿಗೆ ಪರ್ಯಾಯ ಕಟ್ಟಡದ ವ್ಯವಸ್ಥೆಯಾಗುವವರೆಗೆ ಹಾಲಿ ಕಟ್ಟಡದಿಂದ ಕೇಂದ್ರವನ್ನು ತೆರವುಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಗಂಗೊಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಪ್ಪ ಖಾರ್ವಿ ಎಚ್ಚರಿಸಿದ್ದಾರೆ.

- Advertisement -

ಮಲ್ಯರಬೆಟ್ಟು ಅಂಗನವಾಡಿ ಕೇಂದ್ರವನ್ನು ತೆರವುಗೊಳಿಸುವಂತೆ ಶಾಲಾ ಆಡಳಿತ ಮಂಡಳಿ ನೀಡುತ್ತಿರುವ ತೊಂದರೆಗಳನ್ನು ಖಂಡಿಸಿ ಶುಕ್ರವಾರ ಸಂಜೆ ಅಂಗನವಾಡಿ ಆವರಣದಲ್ಲಿ ನಡೆದ ಪಾಲಕರು ಹಾಗೂ ಸ್ಥಳೀಯ ಗ್ರಾಮಸ್ಥರ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಸರಕಾರ ಹಾಗೂ ಜನಪ್ರತಿನಿಧಿಗಳ ಅನುದಾನದಿಂದ ನಿರ್ಮಾಣಗೊಂಡಿರುವ ಶಾಲಾ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಕಾರ್ಯಾಚರಿಸುತ್ತಿದೆ. ಇಂತಹ ಕೇಂದ್ರವನ್ನು ಶಾಲಾ ವಠಾರದಿಂದ ತೆರವುಗೊಳಿಸಲು ಆಡಳಿತ ಮಂಡಳಿ ನೀಡುತ್ತಿರುವ ತೊಂದರೆಗಳು ಖಂಡನೀಯ. ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಯಾವುದೇ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಅವರು ಹೇಳಿದರು.

ಅಂಗನವಾಡಿ ಕೇಂದ್ರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಹಾಲಿ ಕಟ್ಟಡದಲ್ಲೇ ಕಾರ್ಯಾಚರಿಸಲು ಅವಕಾಶ ನೀಡಬೇಕು. ಕೇಂದ್ರ ತೆರವಿಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ನೀಡುತ್ತಿರುವ ತೊಂದರೆಗಳ ಕುರಿತು ತಹಶೀಲ್ದಾರ್, ಸಂಬಂಧಪಟ್ಟ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಲಿಖಿತ ದೂರು ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಅಲ್ಲದೆ, ಅಂಗನವಾಡಿ ಕೇಂದ್ರವನ್ನು ಉಳಿಸಿಕೊಳ್ಳಲು ಒಗ್ಗಟ್ಟಿನ ಹೋರಾಟ ನಡೆಸುವುದು ಹಾಗೂ ಕೇಂದ್ರಕ್ಕೆ ಸೂಕ್ತ ನಿವೇಶನ ಗುರುತಿಸುವ ಬಗ್ಗೆಯೂ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ ಖಾರ್ವಿ, ಉಪಾಧ್ಯಕ್ಷ ತಬ್ರೇಜ್, ಸದಸ್ಯರಾದ ಜಮೀಲಾ, ಸಮೀರ್, ಪಿಡಿಒ ರವಿ, ಗ್ರಾಮ ಲೆಕ್ಕಾಧಿಕಾರಿ ಶಿವರಾಯ, ಅಂಗನವಾಡಿ ಮೇಲ್ವಿಚಾರಕಿ ರೇಖಾ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಜಹೀರ್ ಅಹಮ್ಮದ್, ಗ್ರಾಪಂ ಮಾಜಿ ಸದಸ್ಯರಾದ ಬಿ. ಲಕ್ಷ್ಮೀಕಾಂತ ಮಡಿವಾಳ, ಬಿ. ರಾಘವೇಂದ್ರ ಪೈ, ಬಾಲಕಾಸ ಸಮಿತಿ ಅಧ್ಯಕ್ಷೆ ಅನಿತಾ ಖಾರ್ವಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ 

ನರಸಿಂಹರಾಜಪುರ ತಾಲೂಕಿನ ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆ...

ಚಿಂತಾಮಣಿ | ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ;108 ಆಂಬುಲೆನ್ಸ್ ವಿಳಂಬಕ್ಕೆ ಸಾರ್ವಜನಿಕರ ಆಕ್ರೋಶ

ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ...

ಮಂಗಳೂರು | ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ʻಮಾಂಡ್ ಸೊಬಾಣ್ʼ ಗಾಯನ

ಮಂಗಳೂರು ನಗರದ ಪುರಭವನದಲ್ಲಿ ಕಳೆದ ವಾರ ಮಾಂಡ್ ಸೊಭಾಣ್ ನೇತೃತ್ವದಲ್ಲಿ ಆರಂಭಿಸಿದ್ದ...

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...