ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

Date:

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿ ಬಳಕೆ ಮಾಡಿಕೊಳ್ಳುವಂತೆ ಜಿಪಂ ಸಿಇಒ ಹೊರಡಿಸಿರುವ ಆದೇಶಕ್ಕೆ ಜಿಲ್ಲೆಯ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -

ಉಡುಪಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಕಳ ಶಾಸಕ ಸುನೀಲ್ ಕುಮಾರ್, ಪಂಚ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಸಮಾವೇಶಕ್ಕೆ ಫಲಾನುಭವಿಗಳನ್ನು ಕರೆತರುವ ಹಾಗೂ ಊಟೋಪಚಾರದ ವ್ಯವಸ್ಥೆಗಾಗಿ ಆಯಾ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯಿಂದ ಗರಿಷ್ಠ 25 ಸಾವಿರ ರೂ. ವೆಚ್ಚ ಭರಿಸುವಂತೆ ಹೊರಡಿಸಿರುವ ಆದೇಶಕ್ಕೆ ನಮ್ಮ ಆಕ್ಷೇಪವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಈ ಆದೇಶ ಕಾನೂನುಬಾಹಿರವಾಗಿದ್ದು, ಯಾವುದೇ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ಹೊರಡಿಸಲಾಗಿದೆ. ಈ ಕುರಿತು ಜಿಲ್ಲೆಯ ಐವರು ಶಾಸಕರು ಜಿಪಂ ಸಿಇಒಗೆ ಪತ್ರ ಬರೆದು ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯ 155 ಗ್ರಾಮ ಪಂಚಾಯಿತಿಗಳಿಂದ ತಲಾ 25 ಸಾವಿರ ರೂ. ಸಂಗ್ರಹಿಸಿದರೆ ಒಟ್ಟು 38.75 ಲಕ್ಷ ರೂ. ಆಗುತ್ತದೆ. ಬರಗಾಲ ಹಾಗೂ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಸರಕಾರದ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿ ಬಳಸುವುದು ಸಮಂಜಸವಲ್ಲ ಎಂದು ಆಕ್ಷೇಪಿಸಿದರು.

ಈಗಾಗಲೇ ಗ್ರಾಮ ಪಂಚಾಯಿತಿಗಳು ವಿದ್ಯುತ್ ಬಿಲ್ ಪಾವತಿ, ಸಿಬ್ಬಂದಿ ವೇತನ ಸೇರಿದಂತೆ ವಿವಿಧ ನಿರ್ವಹಣಾ ವೆಚ್ಚಗಳಿಗೆ ಅನುದಾನದ ಕೊರತೆ ಎದುರಿಸುತ್ತಿವೆ. ಹಲವು ಪಂಚಾಯಿತಿಗಳಲ್ಲಿ ಹುಲ್ಲು ಕಟಾವು, ಹೊಸ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಬಾಕಿ ಉಳಿದಿವೆ. ಇಂತಹ ಸಂದರ್ಭದಲ್ಲಿ ಸರಕಾರದ ಆದ್ಯತೆ ಏನು ಎಂಬುದು ಸ್ಪಷ್ಟವಾಗಬೇಕು ಎಂದು ಹೇಳಿದರು.

ಪ್ರತಿ ವಾರ ನಡೆಯುವ ಪ್ರಜಾಸೇವಾ ಕಾರ್ಯಕ್ರಮಕ್ಕೆ ಆ.6ರಂದು ಹೊರಡಿಸಿದ ಸುತ್ತೋಲೆಯಲ್ಲಿ ಸರಕಾರಿ ಅನುದಾನ ಬಳಸುವಂತೆ ಸೂಚಿಸಲಾಗಿತ್ತು. ಆದರೆ, ನ.19ರಂದು ಹೊರಡಿಸಿದ ಮತ್ತೊಂದು ಸುತ್ತೋಲೆಯಲ್ಲಿ ತಿದ್ದುಪಡಿ ಮಾಡಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಅನುದಾನ ಬಳಸಿಕೊಳ್ಳಲು ಸೂಚಿಸಲಾಗಿದೆ. ಇದು ಸರಕಾರದ ಆರ್ಥಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ‘ಮಹಾತ್ಮೆ ಕುದ್ಮುಲ್’ ತುಳು ನಾಟಕ ಕೃತಿ ಬಿಡುಗಡೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ‘ಮಹಾತ್ಮೆ ಕುದ್ಮುಲ್’...

ಸರ್ಕಾರಿ ಯೋಜನೆಗಳ ಲಾಭ ಅರ್ಹರಿಗೆ ತಲುಪಲಿ: ಡಾ. ಯತೀಂದ್ರ

ಸರ್ಕಾರದ ವಿವಿಧ ಇಲಾಖೆಗಳ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ...