ಉಡುಪಿ | ಪಂಚ ಗ್ಯಾರಂಟಿ ಮಹಿಳೆಯರ ಸ್ವಾವಲಂಬನೆಗೆ ಶಕ್ತಿ ತುಂಬಿದ ಕ್ರಾಂತಿಕಾರಿ ಯೋಜನೆಗಳು: ಸಚಿವ ರಿಜ್ವಾನ್ ಅರ್ಷದ್

Date:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಯೋಜನೆ ಅಥವಾ ಕಾರ್ಯಕ್ರಮಗಳಲ್ಲ. ಅವು ಸಮಾಜವನ್ನು ಪರಿವರ್ತಿಸುವ ಶಕ್ತಿಯುತ ಯೋಜನೆಗಳಾಗಿವೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

- Advertisement -

ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಆಯೋಜಿಸಿದ್ದ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ ಮತ್ತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಬಡವರು, ದುರ್ಬಲರು ಹಾಗೂ ಜನಸಾಮಾನ್ಯರ ಜೀವನಮಟ್ಟ ಸುಧಾರಿಸುವುದು ಮತ್ತು ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಚುನಾವಣೆಗೆ ಮುನ್ನ ನೀಡಿದ್ದ ಪಂಚ ಗ್ಯಾರಂಟಿಗಳ ಭರವಸೆಯನ್ನು ಅಧಿಕಾರಕ್ಕೆ ಬಂದ ಬಳಿಕ ಸರ್ಕಾರ ತಡಮಾಡದೆ ಅನುಷ್ಠಾನಗೊಳಿಸಿದೆ. ದಿನಬಳಕೆಯ ವಸ್ತುಗಳು, ಗ್ಯಾಸ್ ಹಾಗೂ ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಆರ್ಥಿಕ ನೆರವಾಗಿವೆ ಎಂದರು.

ಗೃಹಜ್ಯೋತಿ ಯೋಜನೆಯು ವಿದ್ಯುತ್ ವೆಚ್ಚದ ಹೊರೆಯನ್ನು ಕಡಿಮೆ ಮಾಡಿದ್ದರೆ, ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಕಲ್ಪಿಸಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ದೊರೆತಿದ್ದು, ಅನ್ನಭಾಗ್ಯ ಯೋಜನೆ ಹಸಿವು ನಿವಾರಣೆಗೆ ನೆರವಾಗಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ಯುವನಿಧಿ ಯೋಜನೆಯ ಮೂಲಕ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು.

ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುಂದುವರಿಸುತ್ತಿದೆ. ಸಮಾಜದಲ್ಲಿ ಸಾಮರಸ್ಯದ ಬದುಕು ನಿರ್ಮಿಸುವುದು ಮತ್ತು ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸುವುದು ಸರ್ಕಾರದ ಧ್ಯೇಯವಾಗಿದೆ ಎಂದರು.

ವಿಧಾನ ಪರಿಷತ್ತಿನ ಉಪಸಭಾಪತಿ ಡಾ. ಉಮಾಶ್ರೀ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ ಸ್ವಾತಂತ್ರ್ಯ ಹಾಗೂ ಸ್ವಾವಲಂಬನೆಯ ಶಕ್ತಿ ನೀಡಿವೆ. ಪಕ್ಷ, ಜಾತಿ, ಧರ್ಮದ ಭೇದವಿಲ್ಲದೆ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತಲುಪಿಸಲಾಗುತ್ತಿದೆ ಎಂದರು.

WhatsApp Image 2026 11 24 at 8.08.02 PM

ಶಕ್ತಿ ಯೋಜನೆಯಿಂದ ನಾಲ್ಕು ಗೋಡೆಗಳ ನಡುವೆ ಸೀಮಿತವಾಗಿದ್ದ ಮಹಿಳೆಯರು ಹೊರಜಗತ್ತಿಗೆ ತೆರೆದುಕೊಳ್ಳಲು ಸಾಧ್ಯವಾಗಿದೆ. ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಅವಕಾಶ ದೊರೆತಿದೆ. ಇದರಿಂದ ಮಹಿಳೆಯರ ಚಲನವಲನ ಮತ್ತು ಸ್ವಾತಂತ್ರ್ಯಕ್ಕೆ ಹೊಸ ಆಯಾಮ ಸಿಕ್ಕಿದೆ. ಕುಟುಂಬಗಳ ಮೇಲಿನ ಆರ್ಥಿಕ ಹೊರೆಯೂ ಕಡಿಮೆಯಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ವಿರೋಧ ಪಕ್ಷಗಳು ಇದೀಗ ಬೇರೆ ರಾಜ್ಯಗಳಲ್ಲಿಯೂ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಜನರ ಬದುಕಿನಲ್ಲಿಯೂ ಅಭಿವೃದ್ಧಿ ಕಾಣಬೇಕು. ಜನರು ಕಟ್ಟುವ ತೆರಿಗೆ ಹಣವನ್ನು ಜನರ ಕಲ್ಯಾಣಕ್ಕೆ ವಿನಿಯೋಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯ ತಲುಪಿಸಲಾಗುತ್ತಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಹಣ ಪಾವತಿಯಲ್ಲಿ ವಿಳಂಬವಾಗಿರಬಹುದು. ಆದರೆ ಫಲಾನುಭವಿಗಳಿಗೆ ಪಾವತಿಸಬೇಕಾದ ಹಣವನ್ನು ಪಾವತಿಸಲಾಗಿದೆ. ಇದೇ ವೇಳೆ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಕಾಲಕಾಲಕ್ಕೆ ಪರಿಷ್ಕರಿಸುವ ಅಗತ್ಯವೂ ಇದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕ ಹಾಗೂ ವಾಗ್ಮಿ ಡಾ. ವಾಸು ದಿಕ್ಸೂಚಿ ಭಾಷಣ ಮಾಡಿದರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ನೂತನವಾಗಿ ಆಯ್ಕೆಯಾದ ಗ್ರಾಮ ಸಮಿತಿ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ರೇವಣ್ಣ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಡಾ. ದೀಪಕ್ ತಿಮ್ಮಯ್ಯ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿನಯ್ ಕುಮಾರ್ ಸೊರಕೆ, ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಗೋಪಾಲ ಪೂಜಾರಿ, ಜಯಪ್ರಕಾಶ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲು ಸೇರಿದಂತೆ ವಿವಿಧ ಗಣ್ಯರು, ಸಮಿತಿ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

ಬಾಗಲಕೋಟೆ | ಒಂದೇ ದಿನದಲ್ಲಿ ₹8.17 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಕಾಂಗ್ರೆಸ್ ಶಾಸಕ...