ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

Date:

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಹೆಜಮಾಡಿ ಟೋಲ್ ಬಳಿ ನ.11ರಂದು ಬಂಧಿಸಿದ್ದಾರೆ.

- Advertisement -

ಕಾರವಾರದ ಕಿನ್ನಾರ ಗ್ರಾಮದ ವಿನಯ್ (47), ಕಾರವಾರ ನಂದಗಡದ ಗಜಾನನ ನಾಯ್ಕ್ (45), ಕಾರವಾರದ ಅಮದಹಳ್ಳಿಯ ಸುಜಿತ್ ತಾಳೆಕೆರೆ (25), ಕಾರವಾರ ಶಿರ್ವಾಡ ಗ್ರಾಮದ ಲಾರೆನ್ಸ್ ಥಾಮಸ್ ಮೆಂಡೋನ್ಸ್ (49) ಬಂಧಿತ ಆರೋಪಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಬಂಧಿತರಿಂದ 14,35,000 ರೂ. ಮೌಲ್ಯದ 2583 ಲೀಟರ್ ಮದ್ಯದ ಬಾಕ್ಸ್, 5 ಲಕ್ಷ ರೂ. ಮೌಲ್ಯದ ಮಹೀಂದ್ರಾ ಪಿಕ್ ಇನ್ಸುಲೇಟರ್ ವಾಹನ ಹಾಗೂ 3 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 22,35,000 ರೂ. ಎಂದು ಅಂದಾಜಿಸಲಾಗಿದೆ.

ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಖಚಿತ ಮಾಹಿತಿ ಆಧಾರದಂತೆ ಗೋವಾದಿಂದ ಮಂಗಳೂರಿಗೆ ಪಿಕ್‌ಅಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಮದ್ಯದ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದ ಮತ್ತು ಅದಕ್ಕೆ ಕಾರಿನಲ್ಲಿ ಎಸ್ಕಾರ್ಟ್ ಮಾಡುತ್ತಿರುವ ಬಗ್ಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಗಳ ಪೈಕಿ ವಿನಯ್ ವಿರುದ್ಧ ಈಗಾಗಲೇ ಕಾರವಾರ ಜಿಲ್ಲೆಯ ಚಿತ್ತಾಕುಲ ಪೊಲೀಸ್ ಠಾಣೆ, ಕಾರವಾರ ಗ್ರಾಮಾಂತರ ಹಾಗೂ ಅಬಕಾರಿ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯನ್ನು ಕಾರ್ಕಳ ಎಎಸ್ಪಿ ಇಶಿತಾ ಗುಪ್ತಾ ಮಾರ್ಗದರ್ಶನದಲ್ಲಿ ಕಾಪು ವೃತ್ತ ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ ಜಿ. ನೇತೃತ್ವದಲ್ಲಿ ಪಡುಬಿದ್ರೆ ಎಸ್ಸೈಗಳಾದ ಸಕ್ತಿವೇಲು, ಅನಿಲ್ ಕುಮಾರ್ ಟಿ ನಾಯ್ಕ್, ಅಪರಾಧ ಪತ್ತೆ ತಂಡದ ಎಎಸ್ಸೈಗಳಾದ ರಾಜೇಶ್, ಗಿರೀಶ್, ಸಿಬ್ಬಂದಿ ಕೃಷ್ಣಪ್ರಸಾದ್, ಜೀವನ್, ಸತೀಶ್ ಬೆಳ್ಳೆ, ಶಿವಾನಂದ ಪೂಜಾರಿ, ಪಡುಬಿದ್ರೆ ಠಾಣೆಯ ಅಶ್ವಿನ್ ಕುಮಾರ್, ಶರಣ್, ಯಾಸಿನ್ ಖಾಜಿ, ರೆಹಮಾನ್, ರುಕ್ಮಿಣಿ ಹಾಗೂ ಸಿಡಿಆರ್ ವಿಭಾಗದ ದಿನೇಶ್ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...