ಉಡುಪಿ | ಮಹಿಳೆಯರ ಆತ್ಮವಿಶ್ವಾಸಕ್ಕೆ ಶಿಕ್ಷಣವೇ ಶಕ್ತಿ : ನಾಗವೇಣಿ ಮಂಚಿ

Date:

ಮಹಿಳೆಯರು ಬೌದ್ಧಿಕ ಹಾಗೂ ಮಾನಸಿಕ ದಾಸ್ಯದಿಂದ ಹೊರಬರಬೇಕು. ಶಿಕ್ಷಣದಿಂದ ಆತ್ಮವಿಶ್ವಾಸ ಮತ್ತು ಆತ್ಮಬಲವನ್ನು ಗಳಿಸಿಕೊಳ್ಳಲು ಸಾಧ್ಯ ಎಂದು ಕನ್ನಡ ಲೇಖಕಿ ನಾಗವೇಣಿ ಮಂಚಿ ಹೇಳಿದರು.

- Advertisement -

ಅವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮಾನವಿಕ ಸಂಘ ಆಯೋಜಿಸಿದ್ದ ‘ಮಹಿಳೆ, ಶಿಕ್ಷಣ ಮತ್ತು ಸಬಲೀಕರಣ’ ವಿಷಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಶಿಕ್ಷಣವು ಅವಕಾಶಗಳ ಬಾಗಿಲುಗಳನ್ನು ತೆರೆಯುತ್ತದೆ. ಮಹಿಳೆ ತನ್ನ ಹಕ್ಕು ಮತ್ತು ಬಾಧ್ಯತೆಗಳನ್ನು ಅರಿತುಕೊಳ್ಳಲು, ಜ್ಞಾನ, ಉದ್ಯೋಗ ಹಾಗೂ ಜಾಗೃತಿಯನ್ನು ಪಡೆಯಲು ಶಿಕ್ಷಣ ನೆರವಾಗುತ್ತದೆ. ಶಿಕ್ಷಣ ಎಂದರೆ ಕೇವಲ ಅಂಕ ಗಳಿಸುವುದಲ್ಲ; ಬದುಕನ್ನು ಕಟ್ಟಿಕೊಳ್ಳುವ ದೃಢತೆಯನ್ನು ನೀಡುವುದು ಶಿಕ್ಷಣದ ಉದ್ದೇಶ ಎಂದರು.

ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಅವುಗಳನ್ನು ಅನುಭವಗಳಾಗಿ ಪರಿವರ್ತಿಸಿಕೊಳ್ಳಬೇಕು. ಸ್ವಯಂ ನಿಯಂತ್ರಣವನ್ನು ಬೆಳೆಸಿಕೊಳ್ಳುವುದೂ ಸಹ ಮಹಿಳೆಯರ ಸ್ವಾವಲಂಬನೆಗೆ ಅಗತ್ಯ ಕೌಟುಂಬಿಕ ಬದುಕಿನ ಬಗ್ಗೆ ಹಿಂಜರಿಕೆ ಬೇಡ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿಕೇತನಾ, ಮಹಿಳಾ ಸಬಲೀಕರಣವು ಸಾಮೂಹಿಕ ಪ್ರಯತ್ನದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಸಮಾಜದ ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಜೇಂದ್ರ ಕೆ., ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಮ್ಯಾ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ. ಸಫಿಯಾ ಉಪಸ್ಥಿತರಿದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ನವೀನ್ ಕೊಣಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಆಶಾ ಅತಿಥಿಗಳನ್ನು ಪರಿಚಯಿಸಿದರು. ಸಹ ಪ್ರಾಧ್ಯಾಪಕ ಮಂಜುನಾಥ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...