ಉಡುಪಿ | ಗರ್ಭಕೋಶದಲ್ಲಿ ಬೆಳೆದಿದ್ದ 8 ಕೆ.ಜಿ. ಗಡ್ಡೆ; ತಜ್ಞ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Date:

ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿ ಬೆಳೆಯುತ್ತಿದ್ದ ಸುಮಾರು 8 ಕೆ.ಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ವೈದ್ಯಕೀಯ ಸಾಧನೆ ಮೆರೆದಿದೆ.

- Advertisement -

ಕಳೆದ ಒಂದು ವರ್ಷದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಹಿಳೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಬಳಿಕ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ತಜ್ಞ ವೈದ್ಯರು ಪರೀಕ್ಷೆ ನಡೆಸಿ, ಅವರ ಹೊಟ್ಟೆ ಗರ್ಭಿಣಿಯ ಹೊಟ್ಟೆಯಂತೆ ಅಸಹಜವಾಗಿ ಉಬ್ಬಿರುವುದನ್ನು ಗಮನಿಸಿದರು. ಅಲ್ಟ್ರಾಸೌಂಡ್ ಹಾಗೂ ಸಿಟಿ ಸ್ಕ್ಯಾನ್ ಪರೀಕ್ಷೆಗಳಲ್ಲಿ ಗರ್ಭಕೋಶದಲ್ಲಿ ದೊಡ್ಡ ಗಡ್ಡೆ ಇರುವುದನ್ನು ಪತ್ತೆಹಚ್ಚಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಜಿಲ್ಲಾ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಅವರ ಮಾರ್ಗದರ್ಶನದಲ್ಲಿ ಮೇ 25ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಸ್ತ್ರೀರೋಗ ತಜ್ಞರಾದ ಡಾ. ಶಶಾಂಕ್ ಕಿಣಿ, ಡಾ. ಜಾಸ್ಮಿನ್, ಡಾ. ಕವಿತಾ ಹಾಗೂ ಡಾ. ಅಮೃತಾಂಶ್ ಅವರ ತಂಡ, ಅರವಳಿಕೆ ತಜ್ಞರಾದ ಡಾ. ಸೂರ್ಯನಾರಾಯಣ ಮತ್ತು ಡಾ. ರಾಜ್ ಗೋಪಾಲ್ ಭಂಡಾರಿ ಅವರ ಸಹಕಾರದೊಂದಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು. ಶುಶ್ರೂಷಾಧಿಕಾರಿ ರಕ್ಷಿತಾ ಹಾಗೂ ಓ.ಟಿ. ಸಹಾಯಕಿ ಸಂಗೀತ ಸಹ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದರು.

ಪ್ರಸ್ತುತ ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿ ಮುಂದಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ ಮಾತನಾಡಿದ ಅವರು, ವೈದ್ಯರು ಮತ್ತು ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು. ಬಡ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿರುವುದು ಸಂತಸದ ವಿಚಾರ ಎಂದು ಅಭಿಪ್ರಾಯಪಟ್ಟರು.

ಇಷ್ಟೊಂದು ದೊಡ್ಡ ಗಾತ್ರದ ಗರ್ಭಕೋಶದ ಗಡ್ಡೆಯನ್ನು ಯಶಸ್ವಿಯಾಗಿ ತೆರವುಗೊಳಿಸಿದ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಪ್ರಶಂಸಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...