ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

Date:

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

- Advertisement -

ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಕಳೆದಿದ್ದರೂ ತನ್ನ ಸಾಧನೆಗಳನ್ನು ಹೇಳಿಕೊಳ್ಳಲು ಯಾವುದೇ ವಿಚಾರಗಳಿಲ್ಲ. ನುಡಿದಂತೆ ನಡೆದಿದ್ದೇವೆ ಎಂದು ಐದು ಗ್ಯಾರಂಟಿಗಳ ಬಗ್ಗೆ ಹೇಳಿಕೊಳ್ಳುತ್ತಿದೆ. ಆದರೆ ಗ್ಯಾರಂಟಿಗಳ ಹೊರೆ ಯಾರ ಮೇಲೆ ಹಾಕಲಾಗುತ್ತಿದೆ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು. ರಾಜ್ಯದ ಜನರು ತಮ್ಮ ದುಡಿಮೆಯ ಹಣದಿಂದ ತೆರಿಗೆ ಪಾವತಿಸಿ ಸರಕಾರದ ಖಜಾನೆ ತುಂಬಿಸುತ್ತಿದ್ದಾರೆ. ಹೀಗಾಗಿ ಗ್ಯಾರಂಟಿಗಳಿಗೆ ಜನರ ಕೊಡುಗೆಯೇ ದೊಡ್ಡದಾಗಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ವೈಯಕ್ತಿಕ ಕೊಡುಗೆ ಏನೂ ಇಲ್ಲ ಎಂದು ಟೀಕಿಸಿದರು.

ವಿವಿಧ ವಲಯಗಳಲ್ಲಿ ತೆರಿಗೆ ಹೆಚ್ಚಿಸುವ ಮೂಲಕ ಸರಕಾರ ಹಣ ಸಂಗ್ರಹಿಸುತ್ತಿದೆ. ಜನರ ಹಣ ದುರ್ಬಳಕೆಯಾಗುತ್ತಿದೆ. ಐದು ಗ್ಯಾರಂಟಿಗಳ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಆದರೆ ಅವುಗಳ ಅನುಷ್ಠಾನದ ಹೆಸರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ ಜನರ ಬದುಕನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಕರಾವಳಿ ಭಾಗದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 35 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ ಘೋಷಣೆ ಮಾಡಿ ಎರಡು-ಮೂರು ತಿಂಗಳು ಕಳೆದರೂ ಅನುದಾನದ ಹಣ ಬಿಡುಗಡೆಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಕೇವಲ ಘೋಷಣೆಗಳ ಮೂಲಕ ಕರಾವಳಿ ಜನರನ್ನು ತೃಪ್ತಿಪಡಿಸಲು ಸರಕಾರ ಮುಂದಾದರೆ ಕಾಂಗ್ರೆಸ್ ಪಕ್ಷ ಅದಕ್ಕೆ ತಕ್ಕ ಪ್ರಾಯಶ್ಚಿತ್ತ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕುಮಾರಸ್ವಾಮಿಗೆ ಹೊಟ್ಟೆ ಉರಿ, ಸುಳ್ಳೇ ಅವರ ಮನೆದೇವರು ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ರಾಜ್ಯ ಸರಕಾರವೇ ಜನರಿಗೆ ಸುಳ್ಳು ಹೇಳಿ ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಗಾಲ ಹಾಗೂ ಬಿತ್ತನೆ ಬೀಜದ ಸಮಸ್ಯೆಯಿಂದ ರಾಜ್ಯದ ರೈತರಿಗೆ ಭಾರಿ ನಷ್ಟವಾಗಿದ್ದು, ಒಟ್ಟಾರೆ 62 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ. ಈ ನಷ್ಟಕ್ಕೆ ಪರಿಹಾರ ನೀಡುವಂತೆ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ ಎಂದರು.

ಹಾಸನಾಂಬೆ ದೇವಾಲಯದ ಮೂಲಕ 29 ಕೋಟಿ ರೂ. ಸಂಗ್ರಹವಾಗಿದೆ. 2025ರಲ್ಲಿ ಬಸ್ ಪ್ರಯಾಣ ದರವನ್ನು ಶೇ.35ರಷ್ಟು ಹೆಚ್ಚಿಸಲಾಗಿದ್ದು, ಇದೀಗ ಮತ್ತೆ ಶೇ.45ರಷ್ಟು ಏರಿಕೆ ಮಾಡಲಾಗಿದೆ. ಅಬಕಾರಿ ಇಲಾಖೆಯಿಂದ ಸುಮಾರು 40 ಸಾವಿರ ಕೋಟಿ ರೂ. ಆದಾಯ ಸಂಗ್ರಹಿಸಲಾಗುತ್ತಿದೆ. ಭಾರತ್ ಜೋಡೋ ವಿಚಾರದಲ್ಲಿ ತೋರುವ ಆಸಕ್ತಿಯನ್ನು ರೈತರ ಸಮಸ್ಯೆಗಳ ಪರಿಹಾರದಲ್ಲಿ ಸರಕಾರ ತೋರಿಸುತ್ತಿಲ್ಲ ಎಂದು ಟೀಕಿಸಿದರು.

ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸಿದರೂ ಸರಕಾರದಿಂದ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರಕಾರ ಇದುವರೆಗೂ ಅವರ ನೆರವಿಗೆ ಬಂದಿಲ್ಲ. ಸಮರ್ಪಕ ನೀರು ಹಂಚಿಕೆಯಾಗದ ಕಾರಣ ಕಬ್ಬಿನ ಬೆಳೆ ಸಂಪೂರ್ಣ ನಾಶವಾಗಿದೆ. ಒಂದೆಡೆ ರೈತರು ನಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಸಕ್ಕರೆ ಕಾರ್ಖಾನೆಗಳ ಕೆಲವು ಮಾಲಕರು ಹೆಲಿಕಾಪ್ಟರ್‌ನಲ್ಲಿ ಸಂಚರಿಸುತ್ತಿದ್ದಾರೆ. ರೈತರು ಸಂಕಷ್ಟದಲ್ಲಿರುವಾಗ ಕಾರ್ಖಾನೆ ಮಾಲಕರು ಇಷ್ಟೊಂದು ವೈಭವದ ಜೀವನ ನಡೆಸುತ್ತಿರುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಬಹಳ ವರ್ಷಗಳ ಬಳಿಕ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದೇನೆ ಎಂದ ಅವರು, ಕರಾವಳಿ ಪ್ರದೇಶ ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳ ಸಂಗಮವಾಗಿದೆ. ನಮ್ಮ ಕುಟುಂಬ ದೇವರಲ್ಲಿ ನಂಬಿಕೆ ಇಟ್ಟಿದೆ. ನಾಡಿನಲ್ಲಿ ಎದುರಾಗಿರುವ ಸಂಕಷ್ಟ ಹಾಗೂ ಬರಗಾಲ ನಿವಾರಣೆಯಾಗಲಿ ಎಂಬ ಉದ್ದೇಶದಿಂದ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts
Advertisements

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ನವೆಂಬರ್‌ 22ರಿಂದ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನವೆಂಬರ್ 22ರಂದು...

ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಮೇಳದ ಸಡಗರ

ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ಕೇಂದ್ರದಲ್ಲಿ 2026ರ ಕೃಷಿ ಮೇಳಕ್ಕೆ ಚಾಲನೆ...

ಚಿಕ್ಕಬಳ್ಳಾಪುರ | ಮಾದಕ ವಸ್ತುಗಳ ವಿರುದ್ಧ ಕಂಕಣಬದ್ಧರಾಗಿ ಕೈ ಜೋಡಿಸೋಣ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ

ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮತ್ತು ಜೀವನ ಹಾಳಾಗು ವುದಲ್ಲದೆ,...

ದಕ್ಷಿಣ ಕನ್ನಡ | ಎಫ್‌ಎಸ್‌ಡಿ ದಿಢೀರ್‌ ದಾಳಿ: ಸ್ನಾಕ್ಸ್‌ ತಯಾರಿಕಾ ಘಟಕಕ್ಕೆ ಸೀಲ್‌!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ(ಎಫ್‌ಎಸ್‌ಡಿ) ವಿವಿಧ...