ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್: ಜುಲೈ 7-8 ಭಾರೀ ಮಳೆ, ಬಿರುಗಾಳಿ ಸಾಧ್ಯತೆ, ಸಾರ್ವಜನಿಕರಿಗೆ ಕಟ್ಟೆಚ್ಚರ

Date:

ಜುಲೈ 7 ಮತ್ತು 8ರಂದು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಾದ್ಯಂತ ಪ್ರವಾಹ, ಭೂಕುಸಿತ ಹಾಗೂ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.

- Advertisement -

ಜುಲೈ 6ರಂದು ಬಿಡುಗಡೆಯಾದ ಹವಾಮಾನ ಮುನ್ಸೂಚನೆಯ ಪ್ರಕಾರ ಉಡುಪಿ ಜಿಲ್ಲೆಯೊಂದಿಗೆ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಗುಡುಗು-ಮಿಂಚಿನೊಂದಿಗೆ ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಜುಲೈ 8ರ ಬಳಿಕ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೂ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

1011596528

ನಿರಂತರ ಮಳೆಯಿಂದಾಗಿ ನಗರ ಪ್ರದೇಶಗಳಲ್ಲಿ ನೀರು ನಿಲ್ಲುವುದು, ತಗ್ಗು ಪ್ರದೇಶಗಳಲ್ಲಿ ಹಠಾತ್ ಪ್ರವಾಹ, ಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಹಾಗೂ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು:
ಮೀನುಗಾರರು ಯಾವುದೇ ಕಾರಣಕ್ಕೂ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು.

ಪ್ರವಾಸಿಗರು ಹಾಗೂ ಸಾರ್ವಜನಿಕರು ಕಡಲತೀರ, ನದಿ, ತಗ್ಗು ಪ್ರದೇಶ ಮತ್ತು ಭೂಕುಸಿತ ಸಂಭವಿಸುವ ಪ್ರದೇಶಗಳಿಗೆ ಭೇಟಿ ನೀಡಬಾರದು.

ಭಾರೀ ಮಳೆಯ ಸಂದರ್ಭ ಅನಗತ್ಯ ಪ್ರಯಾಣವನ್ನು ಸಂಪೂರ್ಣವಾಗಿ ತಪ್ಪಿಸಬೇಕು.

ಹವಾಮಾನ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕೃತ ಸೂಚನೆಗಳನ್ನು ನಿರಂತರವಾಗಿ ಗಮನಿಸಬೇಕು.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಕ್ಷಣಾ ತಂಡಗಳು ಹಾಗೂ ಸಿಬ್ಬಂದಿಯನ್ನು ಕಟ್ಟೆಚ್ಚರದಲ್ಲಿ ನಿಯೋಜಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ಅನುಸರಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾರ್ಡ್ ಅಭಿವೃದ್ಧಿ, ಪಕ್ಷ ಸಂಘಟನೆಗೆ ಒತ್ತು: ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಯುವಕರ ಸಂಘಟನೆಗಾಗಿ ಭಾರತ್ ಜೋಡೋ ಯೋಜನೆ ಜಾರಿಗೊಳಿಸಲಾಗಿದೆ. ಯುವಕರಿಗೆ ಹುದ್ದೆಗಳನ್ನು ನೀಡುವ...

ಶಿವಮೊಗ್ಗ | ಭಾಷಣ ಮಾಡಲ್ಲ, ಜನರ ಅಹವಾಲು ಆಲಿಸೋಣ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲಾಡಳಿತ ಮತ್ತು ಹೊಸನಗರ ತಾಲೂಕು ಆಡಳಿತ, ʻಬಾಗಿಲಿಗೆ ಬಂತು ಸರ್ಕಾರ...

ವಿಜಯಪುರ | ಅಂತರಶಾಲಾ ಕ್ರೀಡಾಕೂಟ ಸಮಾರೋಪ: ವಿಜೇತ ತಂಡಗಳ ಪಟ್ಟಿ ಪ್ರಕಟ

ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ ಪಾಟೀಲ ಪಬ್ಲಿಕ್(ಸಿ.ಬಿ.ಎಸ್.ಇ) ಶಾಲೆಯಲ್ಲಿ...

ಸಹಕಾರ ಸಂಘಗಳ ಸ್ವಾಯತ್ತ ಬೆಳವಣಿಗೆಗೆ ಸರ್ಕಾರ ಅವಕಾಶ ಕಲ್ಪಿಸಲಿ: ಎ.ಎಸ್.ಪೊನ್ನಣ್ಣ

ಕೊಡಗು ಸಹಕಾರ ಸಂಘ ಸಂಸ್ಥೆಗಳು ಸ್ವಾಯತ್ತವಾಗಿ ಬೆಳೆಯಲು ಸರ್ಕಾರ ಹೆಚ್ಚಿನ ಅವಕಾಶ...