ಉಡುಪಿ | ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಹೆಮ್ಮಾಡಿ ಉಪಆರೋಗ್ಯ ಕೇಂದ್ರ ಮೇಲ್ದರ್ಜೆಗೆ ತೀರ್ಮಾನ ಕೈಗೊಳ್ಳಲು ಆಗ್ರಹ

Date:

ಮಂಗಳೂರಿನಲ್ಲಿ ಸೆ. 18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೆಮ್ಮಾಡಿ ಹಾಗೂ ಸುತ್ತಮುತ್ತಲಿನ ಐದು ಗ್ರಾಮಗಳ ಜನರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಹೆಮ್ಮಾಡಿ ಉಪ ಆರೋಗ್ಯ ಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ, 24 ಗಂಟೆಗಳ ವೈದ್ಯಕೀಯ ಸೇವೆ ಒದಗಿಸಲು ತಕ್ಷಣ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಪಿಎಂ ಹೆಮ್ಮಾಡಿ ಶಾಖೆಯ ನೇತೃತ್ವದಲ್ಲಿ ಮಂಗಳವಾರ ಹೆಮ್ಮಾಡಿ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸ್ಥಳೀಯ ಸಿಪಿಎಂ ಮುಖಂಡ ಸಂತೋಷ್ ಹೆಮ್ಮಾಡಿ, ಹಲವು ವರ್ಷಗಳ ಹೋರಾಟದ ಫಲವಾಗಿ ಹೆಮ್ಮಾಡಿಯಲ್ಲಿ ಉಪ ಆರೋಗ್ಯ ಕೇಂದ್ರ ಮಂಜೂರಾಗಿದೆ. ಆದರೆ ಇಲ್ಲಿ ವಾರಕ್ಕೊಂದು ಅಥವಾ ಎರಡು ಬಾರಿ ಮಾತ್ರ ವೈದ್ಯರು ಲಭ್ಯವಿರುವ ಪರಿಸ್ಥಿತಿ ಇದೆ. ಇದರಿಂದ ಹೆಮ್ಮಾಡಿ ಸೇರಿದಂತೆ ಸುತ್ತಮುತ್ತಲಿನ ಐದು ಗ್ರಾಮಗಳ ಜನರು ತುರ್ತು ಹಾಗೂ ಮೂಲಭೂತ ಆರೋಗ್ಯ ಸೇವೆಗಾಗಿ ದೂರದ ಆಸ್ಪತ್ರೆಗಳನ್ನು ಅವಲಂಬಿಸಬೇಕಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಹೆಮ್ಮಾಡಿ ಉಪ ಆರೋಗ್ಯ ಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿ, ಖಾಯಂ ವೈದ್ಯರು, ಅಗತ್ಯ ಸಿಬ್ಬಂದಿ, ಪ್ರಯೋಗಾಲಯ ಹಾಗೂ 24 ಗಂಟೆಗಳ ತುರ್ತು ವೈದ್ಯಕೀಯ ಸೇವೆ ಒದಗಿಸುವ ಕುರಿತು ಮಂಗಳೂರಿನಲ್ಲಿ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಜನರ ಮೂಲಭೂತ ಬೇಡಿಕೆಗಳು ಮತ್ತು ಅಭಿವೃದ್ಧಿ ಪ್ರಶ್ನೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದರೆ ಜಿಲ್ಲೆಯ ಸಂಪತ್ತನ್ನು ಪಿಪಿಪಿ ಮಾದರಿಯಲ್ಲಿ ಖಾಸಗಿ ಬಂಡವಾಳಶಾಹಿಗಳ ಕೈಗೆ ಒಪ್ಪಿಸುವಂತಹ ನಿರ್ಧಾರಗಳಿಗೆ ಮಾತ್ರ ಆದ್ಯತೆ ನೀಡಿದರೆ ಅದರಿಂದ ಸಾಮಾನ್ಯ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಆರೋಗ್ಯ ಕೇಂದ್ರಗಳಿದ್ದರೂ ಖಾಯಂ ವೈದ್ಯರು, ಅಗತ್ಯ ಸಿಬ್ಬಂದಿ ಹಾಗೂ ಪ್ರಯೋಗಾಲಯದಂತಹ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಇದರಿಂದ ಆದಾಯ ಕಡಿಮೆ ಇರುವ ಕೂಲಿಕಾರರು ಹಾಗೂ ಕಾರ್ಮಿಕರು ಸಣ್ಣಪುಟ್ಟ ಅನಾರೋಗ್ಯಕ್ಕೂ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಸಾವಿರಾರು ರೂಪಾಯಿ ಖರ್ಚು ಮಾಡುವಂತಾಗಿದೆ. ಜನರಿಗೆ ಉಚಿತ ಹಾಗೂ ಗುಣಮಟ್ಟದ ಸರ್ಕಾರಿ ಆರೋಗ್ಯ ಸೇವೆ ಒದಗಿಸುವ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳಬಾರದು ಎಂದು ಅವರು ಹೇಳಿದರು.

ಹೆಮ್ಮಾಡಿ ಉಪ ಆರೋಗ್ಯ ಕೇಂದ್ರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಸುರೇಶ್ ಕಲ್ಲಾಗರ ಎಚ್ಚರಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಮುಖಂಡರಾದ ಎಚ್. ನರಸಿಂಹ ಹಾಗೂ ಚಂದ್ರಶೇಖರ ವಿ. ಮಾತನಾಡಿದರು. ನಂತರ ಹೆಮ್ಮಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ದಿನೇಶ್ ಆಚಾರ್ಯ, ಶೇಖರ್, ಭಾಸ್ಕರ ಸೇರಿದಂತೆ ಸಿಪಿಎಂ ಕಾರ್ಯಕರ್ತರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

ಸಂತೋಷ್ ಹೆಮ್ಮಾಡಿ ಸ್ವಾಗತಿಸಿ, ನರಸಿಂಹ ಹೆಮ್ಮಾಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪಾರ್ಶ್ವವಾಯು ಲಕ್ಷಣ ಕಂಡರೆ ವಿಳಂಬ ಬೇಡ, ತಕ್ಷಣ ಆಸ್ಪತ್ರೆಗೆ ದಾಖಲಿಸಿ: ಡಾ. ಶಿವಾನಂದ ಮಾಸ್ತಿಹೋಳಿ

ಪಾರ್ಶ್ವವಾಯು ಸಂಭವಿಸಿದಾಗ ಪ್ರತಿಯೊಂದು ನಿಮಿಷವೂ ಅತ್ಯಮೂಲ್ಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಸೂಕ್ತ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಬಾಗಲಕೋಟೆ | ರಾಷ್ಟ್ರೀಯ ಏಕತಾ ದಿನಾಚರಣೆ; ಜಿಲ್ಲಾಧಿಕಾರಿಯಿಂದ ಪ್ರತಿಜ್ಞಾವಿಧಿ ಬೋಧನೆ

ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ರಾಷ್ಟ್ರೀಯ...

ಗದಗ | ಕಲೆಯ ಮೂಲ ಸತ್ವ ಉಳಿಸಿ ಬೆಳೆಸುವುದು ಕಲಾವಿದರ ಜವಾಬ್ದಾರಿ: ಪ.ಸ.ಕುಮಾರ

"ಕಲಾವಿದರು ತಮ್ಮ ಸೃಜನಶೀಲತೆಯನ್ನು ಯಾವುದೇ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೊರೆ...