ಉಡುಪಿ | ಭಾರತಕ್ಕೆ ಬಾಬಾ ಸಾಹೇಬರ ಸಂವಿಧಾನವೇ ಕೈದೀವಿಗೆ: ಪ್ರೊ. ಜಯಪ್ರಕಾಶ್ ಶೆಟ್ಟಿ

Date:

ಜಾತಿ, ಮತ, ಭಾಷೆ ಹಾಗೂ ಬಣ್ಣಗಳ ವೈವಿಧ್ಯತೆಯಿಂದ ಕೂಡಿರುವ ಬಹುತ್ವ ಭಾರತದ ಬದುಕಿನ ಕಾಲುದಾರಿಗಳಿಗೆ ನೆಮ್ಮದಿಯ ಬೆಳಕು ತೋರುವ ಬಾಬಾ ಸಾಹೇಬರ ಸಂವಿಧಾನವೇ ದೇಶದ ಪಾಲಿನ ಕೈದೀವಿಗೆಯಾಗಿದೆ ಎಂದು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್. ಹೇಳಿದರು.

- Advertisement -

ನವೆಂಬರ್ 26ರಂದು ಸಂವಿಧಾನ ಅಂಗೀಕಾರಗೊಂಡ ದಿನದ ಸ್ಮರಣಾರ್ಥ ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನವು ಸರ್ವಸಮ್ಮತಿಯ ಧರ್ಮಗ್ರಂಥದಂತಿದ್ದು, ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳು, ಕರ್ತವ್ಯಗಳು ಹಾಗೂ ಸಮಾನತೆಯ ಆಶಯಗಳಿಗೆ ಭದ್ರ ಬುನಾದಿಯಾಗಿದೆ. ಸಂವಿಧಾನದ ಆಶಯಗಳನ್ನು ಅರಿತು, ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಬಳಿಕ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚಿಸಲಾಯಿತು.

ಮತದಾರ ಸಾಕ್ಷರತಾ ಸಮಿತಿಯ ಸಂಚಾಲಕ ಡಾ. ರಾಧಾಕೃಷ್ಣ ನಾಯಕ್, ಕನ್ನಡ ಉಪನ್ಯಾಸಕ ಪಂಜು ಹಾಗೂ ಇತರರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಶಾಲಿನಿ ಯು.ಬಿ. ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಬೇಡಿಕೆ ಈಡೇರಿಸುವವರೆಗೆ ಕಂಪನಿಗಳಿಗೆ ಕೋಳಿ ಪೂರೈಕೆ ಸ್ಥಗಿತ: ಸಾಕಾಣಿಕೆದಾರರ ನಿರ್ಧಾರ

ಕೋಳಿ ಸಾಕಾಣಿಕೆ ವೆಚ್ಚಕ್ಕೆ ಸರ್ಕಾರ ಪರಿಷ್ಕರಿಸಿರುವ ದರವನ್ನು ಖಾಸಗಿ ಕಂಪನಿಗಳು ಜಾರಿಗೊಳಿಸುವವರೆಗೆ...

ಚಿಂತಾಮಣಿ | ಮುರುಗಮಲ್ಲ ದರ್ಗಾ ನಮ್ಮ ಜಿಲ್ಲೆಯ ಸೌಹಾರ್ದತೆಗೆ ಸಾಕ್ಷಿ : ಜಿ.ಪಂ.ಸಿಇಒ ಡಾ.ವೈ.ನವೀನ್ ಭಟ್

ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತವಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪವಿತ್ರ ಯಾತ್ರಾ ಸ್ಥಳ...

ಚಿಕ್ಕಮಗಳೂರು | ಜನರಲ್ ಮೀಸಲಾತಿ ರದ್ದುಗೊಳಿಸಿ, ಪರಿಶಿಷ್ಟ ಜಾತಿಗೆ ಮೀಸಲಾತಿ ಕೊಡಿ; ದಸಂಸ 

ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿ ಬಿ. ಕಣಬೂರು ಗ್ರಾಮದ ಜಿಲ್ಲಾ...