ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

Date:

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.

- Advertisement -

ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ನಿಲುಗಡೆ ಇಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತ ವ್ಯಕ್ತಿಯ ಬಳಿ ಪತ್ತೆಯಾದ ಮತದಾರರ ಗುರುತಿನ ಚೀಟಿಯಲ್ಲಿ ದಿನೇಶ್ ಎಂಬ ಹೆಸರು ಹಾಗೂ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಎಂಬ ವಿಳಾಸ ನಮೂದಾಗಿದೆ.

ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...